ಬೆಂಗಳೂರು | ‘ನಮ್ಮ ಪ್ರೀತಿಯನ್ನ ಸಮಾಜ ಒಪ್ಪಲ್ಲ’; ಬೆಳಿಗ್ಗೆ ಪ್ರಿಯಕರ – ಮಧ್ಯಾಹ್ನ ಪ್ರೇಯಸಿ ಆತ್ಮ*ಹತ್ಯೆ

Date:

ಪರಸ್ಪರ ಪ್ರೀತಿಸುತ್ತಿದ್ದ ವಿವಾಹಿತ ಮಹಿಳೆ ಮತ್ತು ಯುವಕ, ತಮ್ಮ ಪ್ರೀತಿಯನ್ನು ಸಮಾಜ ಒಪ್ಪುವುದಿಲ್ಲವೆಂದು ಭಾವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಘಟನೆ ನಡೆದಿದೆ. ಮೃತರನ್ನು ಥಣಿಸಂದ್ರದ ಜಾನ್ಸನ್ ಮತ್ತು ದಿಲ್ಶಾದ್‌ ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳನ್ನು ಹೊಂದಿದ್ದ ದಿಲ್ಶಾದ್ ಅವರು ಜಾನ್ಸನ್‌ ಎಂಬ ಯುವಕನನ್ನು ಪ್ರೀತಿಸುತ್ತಿದ್ದರು. ಆದರೆ, ತಮ್ಮ ಪ್ರೀತಿಗೆ ಮನ್ನಣೆ ಸಿಗುವುದಿಲ್ಲವೆಂದು ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ದಿಲ್ಶಾದ್ ಅವರು ವಿಜಯಪುರದ ಕೃಷ್ಣ ಎಂಬುವವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈ ನಡುವೆ, ಸಾಮಾಜಿಕ ಜಾಲತಾಣದಲ್ಲಿ ದಿಲ್ಶಾದ್ ಮತ್ತು ಜಾನ್ಸನ್ ಪರಿಚಯವಾಗಿದ್ದರು. ಅವರ ಪರಿಚಯ ಪ್ರೀತಿಗೆ ತಿರುಗಿತ್ತು.

ಆದರೆ, ವಿವಾಹಿತ ಮಹಿಳೆಯನ್ನು ಪ್ರೀತಿಸುತ್ತಿರುವ ತನ್ನ ಪ್ರೀತಿಯನ್ನು ಸಮಾಜ ಒಪ್ಪುವುದಿಲ್ಲವೆಂದು ಜಾನ್ಸನ್‌ ಖಿನ್ನತೆಗೆ ಒಳಗಾಗಿದ್ದ ಎಂದು ಹೇಳಲಾಗಿದೆ. ಹೀಗಾಗಿ, ಜಾನ್ಸನ್‌ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಸಾವಿನ ಸುದ್ದಿ ತಿಳಿದಿ ದಿಲ್ಶಾದ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಜಾನ್ಸಲ್ ಆತ್ಮಹತ್ಯೆ ಘಟನೆಯ ಬಗ್ಗೆ ಹೆಣ್ಣೂರು ಪೊಲೀಸ್‌ ಠಾಣೆಯಲ್ಲಿ ಮತ್ತು ದಿಲ್ಶಾದ್ ಆತ್ಮಹತ್ಯೆ ಸಂಬಂಧ ಸಂಪಿಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಪರಿಹಾರವಲ್ಲ 4

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...