ಶಿಕ್ಷಕರ ನೇಮಕಾತಿ: ವಯೋಮಿತಿ ಸಡಿಲಿಕೆಗೆ ಉದ್ಯೋಗಾಕಾಂಕ್ಷಿಗಳ ಆಗ್ರಹ

Date:

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನಡೆಯುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ (PSTR), ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿ (GPSTR) ಮತ್ತು ಉಚ್ಚ ಪ್ರೌಢಶಾಲಾ ಶಿಕ್ಷಕರ ನೇಮಕಾತಿ (HSTR) ಪ್ರಕ್ರಿಯೆಯಲ್ಲಿ ಸರ್ಕಾರದ ಇತ್ತೀಚಿನ ವಯೋಮಿತಿ ಸಡಿಲಿಕೆ ಆದೇಶವನ್ನು ಕಡ್ಡಾಯವಾಗಿ ಅನ್ವಯಿಸಬೇಕು ಎಂದು ಉದ್ಯೋಗಾಕಾಂಕ್ಷಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ ಕಾನೂನು ಮಾರ್ಗ ಅನುಸರಿಸಿ ನ್ಯಾಯಾಲಯದ ಮೊರೆ ಹೋಗುವುದಾಗಿ ಎಚ್ಚರಿಕೆ ನೀಡಿದ್ದಾರೆ.

- Advertisement -

ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವುದರಿಂದ ಅನೇಕ ಅರ್ಹ ಅಭ್ಯರ್ಥಿಗಳು ಈಗಾಗಲೇ ನಿಗದಿತ ಗರಿಷ್ಠ ವಯೋಮಿತಿಯನ್ನು ತಲುಪಿದ್ದಾರೆ. ಹೀಗಾಗಿ ಅರ್ಜಿ ಸಲ್ಲಿಸುವ ಅವಕಾಶ ಕಳೆದುಕೊಳ್ಳುವ ಪರಿಸ್ಥಿತಿ ಉಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ವಯೋಮಿತಿ ಸಡಿಲಿಕೆ ಪರಿಗಣಿಸದಿದ್ದರೆ ಅನ್ಯಾಯ”

“ಸರ್ಕಾರವು ಈಗಾಗಲೇ ಹೊರಡಿಸಿರುವ ವಯೋಮಿತಿ ಸಡಿಲಿಕೆ ಆದೇಶವನ್ನು ಶಿಕ್ಷಕರ ನೇಮಕಾತಿಯಲ್ಲಿ ಪರಿಗಣಿಸದೆ ಹಳೆಯ ಗರಿಷ್ಠ ವಯೋಮಿತಿಯನ್ನೇ ಮುಂದುವರಿಸಿದರೆ, ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ. ಆದ್ದರಿಂದ ಸರ್ಕಾರವು ತಕ್ಷಣ ಸ್ಪಷ್ಟೀಕರಣ ಅಥವಾ ತಿದ್ದುಪಡಿ ಅಧಿಸೂಚನೆ ಹೊರಡಿಸಬೇಕು” ಉದ್ಯೋಗಾಕಾಂಕ್ಷಿಗಳು ಆಗ್ರಹಿಸಿದ್ದಾರೆ.

“PSTR, GPSTR ಹಾಗೂ HSTR ನೇಮಕಾತಿಯಲ್ಲಿ ಸರ್ಕಾರದ ಇತ್ತೀಚಿನ ವಯೋಮಿತಿ ಸಡಿಲಿಕೆ ಆದೇಶವನ್ನು ಪರಿಗಣಿಸದಿದ್ದರೆ, ಅಭ್ಯರ್ಥಿಗಳ ಹಕ್ಕುಗಳ ರಕ್ಷಣೆಗೆ ಕಾನೂನು ಮಾರ್ಗವನ್ನು ಅನುಸರಿಸಬೇಕಾಗುತ್ತದೆ. ಅಗತ್ಯವಿದ್ದಲ್ಲಿ ನ್ಯಾಯಾಲಯದ ಮೊರೆ ಹೋಗಿ ನೇಮಕಾತಿ ಪ್ರಕ್ರಿಯೆಗೆ ತಡೆಯಾಜ್ಞೆ (Stay Order) ಕೋರುವ ಅನಿವಾರ್ಯ ಪರಿಸ್ಥಿತಿ ಎದುರಾಗಬಹುದು” ಎಂದು ಎಚ್ಚರಿಸಲಾಗಿದೆ.

ವಿಳಂಬದಿಂದ ಅವಕಾಶ ಕಳೆದುಕೊಂಡಿದ್ದಾರೆ

“ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಸುಮಾರು 11 ವರ್ಷಗಳ ನಂತರ ನಡೆಯುತ್ತಿದ್ದು, GPT ಕನ್ನಡ ಶಿಕ್ಷಕರ ನೇಮಕಾತಿ ಮೊದಲ ಬಾರಿಗೆ (ಸುಮಾರು 8 ವರ್ಷಗಳ ನಂತರ) ನಡೆಯುತ್ತಿದೆ. ಆದರೆ ವಯೋಮಿತಿ ಸಡಿಲಿಕೆ ನೀಡದಿರುವುದರಿಂದ ಸರ್ಕಾರದ ವಿಳಂಬದಿಂದ ಅನೇಕ ಯುವಕರು ಸರ್ಕಾರಿ ಶಿಕ್ಷಕರಾಗುವ ಅವಕಾಶವನ್ನು ಕಳೆದುಕೊಂಡಿದ್ದಾರೆ” ಎಂದು ಉದ್ಯೋಗಾಕಾಂಕ್ಷಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...