ಉತ್ತರ ಪ್ರದೇಶದ 34 ವರ್ಷದ ಟೆಕ್ಕಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಕುಟುಂಬವನ್ನು ದೂಷಿಸಿ ಸುಮಾರು 40 ಪುಟಗಳ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಟೆಕ್ಕಿಯ ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ ಅತುಲ್ ಸುಭಾಷ್ ಅವರ ಸಹೋದರ ವಿಕಾಸ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಇದನ್ನು ಓದಿದ್ದೀರಾ? ನೋಡ ನೋಡುತ್ತಿದ್ದಂತೆ ಕಾರು ನಿಲ್ಲಿಸಿ ಅಟಲ್ ಸೇತುವಿನಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ
ಟೆಕ್ಕಿಯ ಪತ್ನಿ ನಿಕಿತಾ ಸಿಂಘಾನಿಯಾ, ಅವರ ಅತ್ತೆ ನಿಶಾ ಸಿಂಘಾನಿಯಾ, ಪತ್ನಿಯ ಸಹೋದರ ಅನುರಾಗ್ ಸಿಂಘಾನಿಯಾ ಮತ್ತು ಅವರ ಪತ್ನಿಯ ಚಿಕ್ಕಪ್ಪ ಸುಶೀಲ್ ಸಿಂಘಾನಿಯಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಅತುಲ್ ಸುಭಾಷ್ 2019ರಲ್ಲಿ ನಿಕಿತಾ ಸಿಂಘಾನಿಯಾ ಅವರನ್ನು ವಿವಾಹವಾಗಿದ್ದು ದಂಪತಿಗೆ ಓರ್ವ ಮಗನಿದ್ದಾನೆ. ದಂಪತಿಗೆ ವಿಚ್ಛೇದನವಾಗಿದ್ದು ಅದಾದ ಬಳಿಕ ಅತುಲ್ ಸುಭಾಷ್ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಮೂರು ಕೋಟಿ ರೂಪಾಯಿಗೆ ಬೇಡಿಕೆ ಇರಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
🔥 FULL VIDEO OF ATUL SHUBHASH: A Heart-Wrenching Tale of Injustice – Only for Those with a Strong Heart 🔥 "Everyone should know the truth about him. #JusticeForAtulSubhash #HumanRightsDay2024 pic.twitter.com/vwNyzdK4ea
— AAP Sunil Jodhpur (@AAPsunil4490) December 10, 2024
ಮಗನನ್ನು ನೋಡಬೇಕಾದರೆ 30 ಲಕ್ಷ ರೂಪಾಯಿ ನೀಡಬೇಕೆಂದು ಬೇಡಿಕೆ ಮಾಡಿದ್ದಾರೆ. ಮಾನಸಿಕ ಮತ್ತು ದೈಹಿಕ ಕಿರುಕುಳದಿಂದ ಅತುಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ದೂರಿನ ಆದಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಸದ್ಯ ಅತುಲ್ ಆತ್ಮಹತ್ಯೆಗೂ ಮುನ್ನ ಮಾಡಿರುವ ಒಂದು ಗಂಟೆಗೂ ಅಧಿಕ ಸಮಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
