ಬೆಂಗಳೂರು | ಮಧ್ಯರಾತ್ರಿ ಫುಡ್‌ ಡೆಲಿವರಿ ಬಾಯ್‌ ಮೇಲೆ ಬೀದಿ ನಾಯಿಗಳನ್ನು ಛೂ ಬಿಟ್ಟ ಅಮ್ಮ, ಮಗ

Date:

  • ನಾಯಿಗಳು ಸಂತ್ರಸ್ತನ ಮೇಲೆ ಹಲ್ಲೆ ಮಾಡುವಂತೆ ಪ್ರೇರೇಪಿಸಿದ ವ್ಯಕ್ತಿಗಳು
  • ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫುಡ್‌ ಡೆಲಿವರಿ ಬಾಯ್‌ ಮೇಲೆ ಮೂರು ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ಬೊಮ್ಮನಹಳ್ಳಿಯ ಕೋಡಿಚಿಕ್ಕನಹಳ್ಳಿಯ ಲೇಕ್ ಸಿಟಿ ರಸ್ತೆಯಲ್ಲಿ ನಡೆದಿದೆ.

- Advertisement -

ಸಂತ್ರಸ್ತ ಯು ಶಿವರಾಜ್ (53) ಎಂಬುವವರು ಕೆ ಎಸ್‌ ಲೇಔಟ್‌ನ 2ನೇ ಹಂತದ ನಿವಾಸಿ. ಇವರು ಆರ್ಡ್‌ರ್ ಬಂದಿದ್ದ ಆಹಾರವನ್ನು ಡೆಲಿವರಿ ನೀಡಲು ಬೊಮ್ಮನಹಳ್ಳಿಯ ಲೇಕ್ ಸಿಟಿ ಸಿಟಿ ಅಪಾರ್ಟ್‌ಮೆಂಟ್‌ಗೆ ತೆರಳಿದ್ದರು. ಆಹಾರವನ್ನು ನೀಡಿ ಹಿಂತಿರುಗುತ್ತಿದ್ದ ವೇಳೆ, ಮಧ್ಯರಾತ್ರಿ ಸುಮಾರು 2 ರಿಂದ 2.20 ರ ನಡುವೆ ಮೂರು ನಾಯಿಗಳು ಏಕಾಏಕಿ ಶಿವರಾಜು ಅವರನ್ನು ಅಟ್ಟಿಸಿಕೊಂಡು ಬರಲಾರಂಭಿಸಿದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ವೇಳೆ ಶಿವರಾಜು ಅವರು ತಮ್ಮ ರಕ್ಷಣೆಗೆಂದು ಕಲ್ಲು ತೆಗೆದುಕೊಂಡು ನಾಯಿಗಳಿಗೆ ಹೊಡೆದಿದ್ದಾರೆ. ಸಮೀಪದಲ್ಲೇ ಇದ್ದ ಇಬ್ಬರು ವ್ಯಕ್ತಿಗಳು ನಾಯಿಗಳಿಗೆ ಕಲ್ಲಿನಿಂದ ಹೊಡೆಯುವುದಕ್ಕೆ ಜಗಳವಾಡಿದ್ದಾರೆ. ಬಳಿಕ ಸಂತ್ರಸ್ತನಿಗೆ ಆರೋಪಿಗಳು ಕಲ್ಲು ಎಸೆದಿದ್ದಾರೆ. ನಂತರ ದಾಳಿ ನಡೆಸುವಂತೆ ಮೂರು ನಾಯಿಗಳನ್ನು ಪ್ರೇರೆಪಿಸಿದ್ದಾರೆ. ಮೂರು ನಾಯಿಗಳು ಶಿವರಾಜು ಅವರನ್ನು ಕಚ್ಚಿದ್ದು, ಅವರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತಂತೆ ಶಿವರಾಜು ಅವರು ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, 55 ವರ್ಷದ ತಾಯಿ ಮತ್ತು 35 ವರ್ಷದ ಮಗನ ವಿರುದ್ಧ ಆರೋಪಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಶಿವರಾಜ್, “ನಾನು ಹೇಗೆ ಬದುಕಿದ್ದೇನೆ ಎಂದು ನನಗೆ ತಿಳಿದಿಲ್ಲ. ಹೆಲ್ಮೆಟ್ ಧರಿಸಿದ್ದೆ, ಅದನ್ನು ನಾಯಿಗಳಿಂದ ತಪ್ಪಿಸಿಕೊಳ್ಳಲು ಬಳಸಿದೆ. ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡಲಾರಂಭಿಸಿದೆ. ಈ ವೇಳೆ, ನಾನು ಧರಿಸಿರುವ ಕನ್ನಡಕ ಕೆಳಗೆ ಬಿದ್ದಿತು. ನನಗೆ ಸರಿಯಾಗಿ ಏನೂ ಕಾಣಲಿಲ್ಲ. ಬಳಿಕ ನಾನು ನನ್ನ ಸಮತೋಲನವನ್ನು ಕಳೆದುಕೊಂಡು ರಸ್ತೆಯ ಜೆಲ್ಲಿ ಕಲ್ಲಿನ ಮೇಲೆ ಉರುಳಿ ಬಿದ್ದೆ” ಎಂದು ತಿಳಿಸಿದರು.

“ಸಹಾಯಕ್ಕಾಗಿ ಕಿರುಚಿದೆ. ಜನರು ತಮ್ಮ ಮನೆಯಿಂದ ಹೊರಗೆ ಬಂದರು. ಆದರೆ, ಯಾರೂ ನನಗೆ ಸಹಾಯ ಮಾಡಲಿಲ್ಲ. ಮೈ ಮೇಲೆ ತುಂಬಾ ಗಾಯಗಳಾಗಿವೆ. ಇನ್ನೂ ನೋವಿದೆ. ನಾಯಿ ಕಡಿತಕ್ಕೆ ರೇಬೀಸ್ ಚುಚ್ಚುಮದ್ದನ್ನು ಪಡೆಯುತ್ತಿದ್ದೇನೆ. ನನ್ನ ಮೇಲೆ ದಾಳಿ ಮಾಡುವಂತೆ ನಾಯಿಗಳಿಗೆ ಪ್ರೇರೇಪಿಸಿದ ಮಹಿಳೆ ಮತ್ತು ಆಕೆಯ ಮಗ ಒಳಗೆ ಹೋದರು. ನಾನು ಆಸ್ಪತ್ರೆಗೆ ಹೋಗುತ್ತಿದ್ದಾಗ ಪೊಲೀಸ್ ಗಸ್ತು ತಿರುಗುತ್ತಿದ್ದ ವಾಹನವನ್ನು ನೋಡಿ ಅವರ ಸಹಾಯ ಕೇಳಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಆದಾಯ ಹೆಚ್ಚಳಕ್ಕೆ ಕಟ್ಟಡಗಳನ್ನು ಬಾಡಿಗೆಗೆ ನೀಡಲು ಯೋಜಿಸಿದ ರಸ್ತೆ ಸಾರಿಗೆ ನಿಗಮಗಳು

“55 ವರ್ಷದ ಮಹಿಳೆ ಮತ್ತು ಆಕೆಯ 35 ವರ್ಷದ ಮಗನ ವಿರುದ್ಧ ದೂರು ದಾಖಲಾಗಿದೆ. ಇಬ್ಬರನ್ನೂ ತನಿಖೆ ಮಾಡಲಾಯಿತು. ಆದರೆ, ಅವರು ತಮ್ಮ ನಾಯಿಗಳನ್ನು ಬೆನ್ನಟ್ಟುವಂತೆ ಮಾಡಿಲ್ಲ ಎಂದರು. ಶಿವರಾಜ್ ಪ್ರಾಣಿಗಳ ಮೇಲೆ ದಾಳಿ ಮಾಡಲು ಕಲ್ಲು ತೆಗೆದುಕೊಂಡಿದ್ದಾರೆ ಎಂದು ದೂಷಿಸುತ್ತಿದ್ದಾರೆ. ಭಾರತೀಯ ದಂಡ ಸಂಹಿತೆಯ ಇತರ ಸೆಕ್ಷನ್‌ಗಳ ಜತೆಗೆ ಪ್ರಾಣಿಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ನಡವಳಿಕೆಗಾಗಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...