ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ; ಸ್ಕೂಟರ್‌ಗೆ 1.61 ಲಕ್ಷ ರೂ. ದಂಡ

Date:

ಬೆಂಗಳೂರಿನಲ್ಲಿ ಹೆಗ್ಗಿಲ್ಲದೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದ ದ್ವಿಚಕ್ರ ವಾಹನ ಸವಾರನೊಬ್ಬನ ಬೈಕ್‌ಗೆ ಬೆಂಗಳೂರು ಸಂಚಾರ ಪೊಲೀಸರು ಬರೋಬ್ಬರಿ 1.61 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡದ ಮೊತ್ತವು ಬೈಕ್‌ನ ಬೆಲೆಗಿಂತಲೂ ಅಧಿಕವಾಗಿದೆ. ದಂಡದ ಮೊತ್ತದಲ್ಲಿ, ಯಾವ ಬೈಕ್‌ಗೆ ದಂಡ ವಿಧಿಸಲಾಗಿದೆಯೇ ಅಂತಹ ಮೂರು ಬೈಕ್‌ಗಳನ್ನು ಖರೀದಿಸಬಹುದು ಎಂದು ಹೇಳಲಾಗುತ್ತಿದೆ.

- Advertisement -

ಸಂಚಾರ ನಿಯಮಗಳನ್ನು ಪಾಲಿಸುವಂತೆ ಪೊಲೀಸ್‌ ಇಲಾಖೆ ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ದಂಡದ ಪ್ರಮಾಣವನ್ನೂ ಹೆಚ್ಚಿಸಿದೆ. ಆದಾಗ್ಯೂ, ನಿಯಮ ಉಲ್ಲಂಘನೆಗೆ ಕಡಿವಾಣಿ ಬಿದ್ದಿಲ್ಲ. ಬೆಂಗಳೂರಿನ ದ್ವಿಚಕ್ರ ವಾಹನ ಸವಾರನೊಬ್ಬ 2023ರಿಂದ ಈವರೆಗೆ ಬರೋಬ್ಬರಿ 311 ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದು, ಆ ಬೈಕ್‌ಗೆ ಒಟ್ಟು 1.61 ಲಕ್ಷ ರೂ. ದಂಡ ವಿಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆ ಬೈಕ್‌ ಕಲಾಸಿಪಾಳ್ಯದಲ್ಲಿ ಟ್ರಾವೆಲ್ಸ್‌ ಏಜೆನ್ಸಿ ನಡೆಸುತ್ತಿರುವ ಪೆರಿಯಸ್ವಾಮಿ ಎಂಬಾತನದ್ದು ಎಂದು ತಿಳಿದುಬಂದಿದೆ. ಬೈಕ್‌ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಪೆರಿಯಸ್ವಾಮಿ ಮತ್ತು ಸುದೀಪ್‌ ಎಂಬವರು ಬಳಸುತ್ತಿದ್ದರು. ಅವರು ಎಸಗಿರುವ ನಿಯಮ ಉಲ್ಲಂಘನೆಗಳಲ್ಲಿ ಹೆಚ್ಚಾಗಿ ಹೆಲ್ಮೆಟ್‌ ಧರಿಸದೇ ಇರುವುದು, ಸಿಗ್ನಲ್‌ ಜಂಪ್‌, ಏಕಮುಖ ಚಾಲನೆ, ನಿರ್ಬಂಧಿತ ಸ್ಥಳದಲ್ಲಿ ವಾಹನ ನಿಲುಗಡೆ ಪ್ರಕರಣಗಳಿವೆ ಎಂದು ವರದಿಯಾಗಿದೆ.

ದಂಡ ಪಾವತಿಸುವಂತೆ ಬೈಕ್ ಮಾಲೀಕನಿಗೆ ಹಲವು ಬಾರಿ ನೋಟಿಸ್‌ ಕೂಡ ಜಾರಿಗೊಳಿಸಲಾಗಿತ್ತು. ಆದರೂ, ನಿಯಮಗಳನ್ನು ಪಾಲಿಸದ ಸವಾರ, ನಿರಂತರವಾಗಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಾನೆ ಎಂದು ಆರೋಪಿಸಲಾಗಿದೆ.

ದಂಡ ಪಾವತಿಸುವಂತೆ ವಾಹನದ ಮಾಲೀಕರಿಗೆ ಸೂಚನೆ ನೀಡಲಾಗಿದೆ. ಪಾವತಿ ಮಾಡದಿದ್ದರೆ, ಮತ್ತೊಂದು ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಜಾರ್ಜ್‌ಶೀಟ್‌ ಸಲ್ಲಿಸುತ್ತೇವೆಂದು ಕೆ.ಆರ್‌ ಮಾರುಕಟ್ಟೆ ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...