ಬೆಂಗಳೂರು | ಬಿಎಂಟಿಸಿ ಬಸ್ ನಿಲ್ದಾಣ ಬಳಿ ಟ್ರಾನ್ಸ್‌ಜೆಂಡರ್ ಹತ್ಯೆ; ದುಷ್ಕರ್ಮಿ ಸೆರೆ

Date:

ನಗರದ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣ ಬಳಿ ಶನಿವಾರ ಮುಂಜಾನೆ (ಆಗಸ್ಟ್ 22) ನಡೆದ ದರೋಡೆ ಯತ್ನದಲ್ಲಿ 31 ವರ್ಷದ ಟ್ರಾನ್ಸ್‌ಜೆಂಡರ್ ವ್ಯಕ್ತಿಯನ್ನು ಇರಿದು ಕೊಂದ ಘಟನೆ ನಡೆದಿದೆ. ಪ್ರಕರಣದ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.

- Advertisement -

ಮೃತರನ್ನು ದೇವಿ ಎಂದು ಗುರುತಿಸಲಾಗಿದ್ದು, ಸುಂಕದಕಟ್ಟೆ ನಿವಾಸಿಯಾದ ದೇವಿ, ಬಸ್ ನಿಲ್ದಾಣದ ಹೊರಭಾಗದಲ್ಲಿ ನಿಂತಿದ್ದಾಗ ಘಟನೆ ಸಂಭವಿಸಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುಂಜಾನೆ 2.30 ರಿಂದ 3 ಗಂಟೆಯ ನಡುವೆ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ರಾಮಮೂರ್ತಿ ನಗರದ ನಿವಾಸಿ ಗೌತಮ್ (29) ಎಂಬಾತ ಮದ್ಯದ ನಶೆಯಲ್ಲಿ ಸ್ಕೂಟರ್‌ನಲ್ಲಿ ರಾತ್ರಿ ದರೋಡೆ ಮಾಡುವ ಉದ್ದೇಶದಿಂದ ಬಂದಿದ್ದ, ದೇವಿಯ ಬಳಿ 200 ರೂಪಾಯಿ ಕೇಳಿದಾಗ ದೇವಿ ನಿರಾಕರಿಸಿದ್ದಾರೆ. ಕುಪಿತಗೊಂಡ ಗೌತಮ್‌ ಚಾಕುವಿನಿಂದ ತಲೆಗೆ ಇರಿದು ಬ್ಯಾಗ್ ಮತ್ತು ಮೊಬೈಲ್ ಕಿತ್ತುಕೊಂಡು, ಎದೆ ಸೇರಿದಂತೆ ದೇಹದ ಇತರೆಡೆ ಚಾಕುವಿನಿಂದ ಹಲವು ಬಾರಿ ಇರಿದಿದ್ದಾನೆ. ಹಲ್ಲೆಯಿಂದ ತೀವ್ರ ಗಾಯಗೀಡಾಗಿದ್ದ ದೇವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಆರೋಪಿ ಗೌತಮ್‌ ಬ್ಯಾಗ್‌ನಲ್ಲಿದ್ದ 200 ರೂಪಾಯಿ ಮತ್ತು ಮೊಬೈಲ್ ತೆಗೆದುಕೊಂಡು ಪಲಾಯನ ಮಾಡಿದ್ದಾನೆ.

ರಸ್ತೆಯಲ್ಲಿ ಹಾದುಹೋಗುತ್ತಿದ್ದವರು ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದು, ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಉಪ್ಪಾರಪೇಟೆ ಪೊಲೀಸರು ಗೌತಮ್‌ನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಆರೋಪಿ ಹಿಂದಿನಿಂದಲೂ ರಾತ್ರಿ ವೇಳೆ ದರೋಡೆಗಳಲ್ಲಿ ತೊಡಗುತ್ತಿದ್ದ ದರೋಡೆಯೆ ಆತನ ನಿತ್ಯ ಕಾಯಕವಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಪಲೀಸ್‌ ವಿಚಾರಣೆಯಲ್ಲಿ ಮದ್ಯಪಾನ ಮಾಡಿ ದರೋಡೆಗೆ ಹೋಗಿದ್ದನ್ನು ಆರೋಪಿ ಒಪ್ಪಿಕೊಂಡಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...