ಬೆಂಗಳೂರು | ಇಬ್ಬರು ಸ್ನೇಹಿತೆಯರ ಡಿಜಿಟಲ್ ಅರೆಸ್ಟ್: ವಿವಸ್ತ್ರಗೊಳಿಸಿ ದೌರ್ಜನ್ಯ-ಸುಲಿಗೆ

Date:

ಕಳ್ಳ ಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಹೆಸರಿನಲ್ಲಿ ಇಬ್ಬರು ಸ್ನೇಹಿತೆಯರನ್ನು ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್‌ ಮಾಡಿ, ಅವರನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಎಸಗಿದ್ದು, ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ಯುವತಿಯರಿಗೆ ವಿಡಿಯೋ ಕರೆ ಮಾಡಿದ್ದ ಸೈಬರ್ ವಂಚಕರು, ಅವರ ಮೇಲೆ ಸುಳ್ಳು ಆರೋಪ ಹೊರಿಸಿ, ಡಿಜಿಟಲ್ ಅರೆಸ್ಟ್‌ ಮಾಡಿದ್ದಾರೆ ಅಲ್ಲದೆ, ದೈಹಿಕ ತಪಾಸಣೆ ಹೆಸರಿನಲ್ಲಿ ಅವರನ್ನು ವಿವಸ್ತ್ರಗೊಳಿಸಿ, ವಿಡಿಯೋ ಮಾಡಿಕೊಂಡಿದ್ದಾರೆ. ಬಳಿಕ, 58,000 ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದು, ನಿರಂತರ 9 ಗಂಟೆಗಳ ಕಾಲ ಕಿರುಕುಳ ನೀಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಘಟನೆಯಿಂದ ತೀವ್ರ ಕಿರುಕುಳ ಮತ್ತು ಮಾನಸಿಕ ಹಿಂಸೆ ಅನುಭವಿಸಿದಸ ಸಂತ್ರಸ್ತೆಯರು ಬೆಂಗಳೂರು ಪೂರ್ವ ಸೈಬರ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಬಿಎನ್‌ಎಸ್‌ ಸೆಕ್ಷನ್ 318(4) ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ಈ ಲೇಖನ ಓದಿದ್ದೀರಾ?: ಶಾಂತಿಯುತ ಪ್ರತಿಭಟನೆ ಮಾಡಿದರೂ ಜೈಲಿಗೆ ಹಾಕುವ ಕಾಯ್ದೆ ತರುತ್ತಿದೆ ಬಿಜೆಪಿ!

ಜುಲೈ 17ರಂದು ಘಟನೆ ನಡೆದಿದೆ. ಥಾಯ್ಲೆಂಡ್‌ನಲ್ಲಿ ನೆಲೆಸಿರುವ ಯುವತಿಯೊಬ್ಬರು ತನ್ನ ಸ್ನೇಹಿತೆಯನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದರು. ಈ ವೇಳೆ, ಪೊಲೀಸ್‌ ಅಧಿಕಾರಿಯ ಸೋಗಿನಲ್ಲಿ ಮಹಿಳೆಗೆ ಕರೆ ಮಾಡಿದ್ದ ಸೈಬರ್ ವಂಚಕರು, ‘ಜೆಟ್ ಏರ್‌ವೇಸ್‌ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಿಮ್ಮನ್ನು ಆರೋಪಿಯಾಗಿ ಹೆಸರಿಸಲಾಗಿದೆ’ ಎಂದು ಆರೋಪಿಸಿದ್ದಾರೆ. ದಾಖಲೆಗಳನ್ನು ಪರಿಶೀಲಿಸಲು ವಿಡಿಯೋ ಕರೆಗೆ ಬರುವಂತೆ ಬೆದರಿಕೆ ಹಾಕಿದ್ದಾರೆ. ಆತಂಕಗೊಂಡ ಯುವತಿಯರು ವಿಡಿಯೋ ಕರೆ ಸ್ವೀಕರಿಸಿದ್ದಾರೆ. ದೈಹಿಕ ತಪಾಸಣೆಗಾಗಿ ವಿವಸ್ತ್ರಗೊಳ್ಳುವಂತೆ ಬೆದರಿಸಿದ ವಂಚಕರು, ಯುವತಿಯ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದಿದ್ದು, 58,477 ರೂ.ಗಳನ್ನು ವಸೂಲಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...