ಬೆಂಗಳೂರು | ಬಸ್ ನಿಲ್ಲಿಸಿಲ್ಲವೆಂದು BMTC ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆಗೈದ ಮಹಿಳೆ

Date:

ತನ್ನ ಕಚೇರಿ ಬಳಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಐಟಿ ಉದ್ಯೋಗಿ ಮಹಿಳೆಯೊಬ್ಬರು ಬಿಎಂಟಿಸಿ ಬಸ್‌ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಶನಿವಾರ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ.

- Advertisement -

ಬೆಂಗಳೂರಿನ ಸರ್ಜಾಪುರ ಬಳಿಯ ಕೈಕೊಂಡರಹಳ್ಳಿಯಲ್ಲಿ ಘಟನೆ ನಡೆದಿದೆ. ಬಸ್‌ ನಿಲುಗಡೆ ಇಲ್ಲದ ಸ್ಥಳದಲ್ಲಿ ಬಸ್‌ ನಿಲ್ಲಿಸುವಂತೆ ಮಹಿಳೆ ಕೇಳಿದ್ದು, ಮಾರ್ಗ ಮಧ್ಯೆ ಬಸ್‌ ನಿಲ್ಲಿಸಲು ಚಾಲಕ ಅತಹರ್ ಹುಸೇನ್ ನಿರಾಕರಿಸಿದ್ದಾರೆ. ಆ ಕಾರಣಕ್ಕೆ ಅವರ ಮೇಲೆ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಕಾವ್ಯ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಕೈಕೊಂಡರಹಳ್ಳಿ ಬಸ್‌ ನಿಲ್ದಾಣದಲ್ಲಿ ಬಸ್‌ ಹತ್ತಿದ್ದ ಕಾವ್ಯ, ಮಾರ್ಗ ಮಧ್ಯೆ ತನ್ನ ಕಚೇರಿಯ ಎದುರು ಬಸ್‌ ನಿಲ್ಲಿಸುವಂತೆ ಚಾಲಕನಿಗೆ ಒತ್ತಾಯಿಹಸಿದ್ದಾರೆ. ಆದರೆ, ನಿಲುಗಡೆ ಇಲ್ಲದ ಸ್ಥಳದಲ್ಲಿ ರಸ್ತೆಯಲ್ಲಿ ಬಸ್‌ ನಿಲ್ಲಿಸಿದರೆ ಸಂಚಾರ ದಟ್ಟಣೆ ಉಂಟಾಗುತ್ತದೆ, ನಿಯಮಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಚಾಲಕ ಬಸ್‌ ನಿಲ್ಲಿಸಲು ನಿರಾಕರಿಸಿದ್ದಾರೆ ಎಂದು ಹೇಳಲಾಗಿದೆ.

ತಮಗೆ ಹೊಟ್ಟೆನೋವು ಇದೆ. ನಡೆಯಲು ಆಗುವುದಿಲ್ಲ. ಇಲ್ಲಿಯೇ ಬಸ್‌ ನಿಲ್ಲಿಸಿ ಎಂದು ಕಾವ್ಯ ಕೂಗಾಡಿದ್ದಾರೆ. ಹೊಟ್ಟೆ ನೋವು ಎಂದ ತಕ್ಷಣ ಚಾಲಕ ಬಸ್‌ಅನ್ನು ರಸ್ತೆಯ ಬದಿಗೆ ತಿರುಗಿಸಿ ನಿಲ್ಲಿಸಿದ್ದಾರೆ. ಆದಾಗ್ಯೂ, ಚಾಲಕನಿಗೆ ಕಾವ್ಯ ಅವಾಚ್ಯವಾಗಿ ನಿಂದಿಸಿ, ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಕಾವ್ಯ ವಿರುದ್ಧ ಚಾಲಕ ಹುಸೇನ್ ಅವರು ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಪಡೆದ ಪೊಲೀಸರು ಕಾವ್ಯ ಅವರನ್ನು ವಶಕ್ಕೆ ಪಡೆದಿದ್ದರು. ಚಾಲಕನ ಬಳಿ ಕಾವ್ಯ ಕ್ಷಮೆಯಾಚಿಸಿದ್ದು, ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...