ಬೆಂಗಳೂರಿನ ಕೆ.ಆರ್ ಮಾರುಕಟ್ಟೆಯಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಇತ್ತೀಚೆಗೆ ನಡೆದಿತ್ತು. ಪ್ರಕರಣದಲ್ಲಿ ಇಬ್ಬರು ಕಾಮುಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ
ಜನವರಿ 19ರ ಭಾನುವಾರ ರಾತ್ರಿ ಕೆ.ಆರ್ ಮಾರ್ಕೆಟ್‌ನ ಗೋಡೌನ್ ರಸ್ತೆಯಲ್ಲಿ ತಮಿಳುನಾಡು ಮೂಲದ ಸಂತ್ರಸ್ತ ಮಹಿಳೆ ಬಸ್‌ಗಾಗಿ ಕಾಯುತ್ತಿದ್ದರು. ಈ ವೇಳೆ, ಆಕೆಯನ್ನು ಎಳೆದೊಯ್ದ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಅಲ್ಲದೆ, ಮಹಿಳೆಯ ಬಳಿಯಿದ್ದ ಚಿನ್ನದ ತಾಳಿ, ಓಲೆ ಹಾಗೂ ಇತರ ಒಡೆವೆಗಳನ್ನು ದೋಚಿ, ಪರಾರಿಯಾಗಿದ್ದರು.
ಸಂತ್ರಸ್ತ ಮಹಿಲೆ ಕೇಂದ್ರ ವಿಭಾಗದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಗಣೇಶ್ ಮತ್ತು ಶರವಣ ಎಂದು ಗುರುತಿಸಲಾಗಿದೆ.
ಆರೋಪಿಗಳು ಕೆ.ಆರ್.ಮಾರುಕಟ್ಟೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ರಾತ್ರಿ ವೇಳೆ ಮಾರುಕಟ್ಟೆಯ ಅಂಗಡಿ ಬದಿಗಳಲ್ಲಿ ಮಲುಗುತ್ತಿದ್ದರು ಎಂದು ಹೇಳಲಾಗಿದೆ.
“ಸಿಸಿಟಿವಿ ದೃಶ್ಯಾವಳಿ ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ವಿಶ್ಲೇಷಿಸಿ ಆರೋಪಿಗಳನ್ನು ಗುರುತಿಸಿದ್ದೇವೆ. ಮಂಗಳವಾರ ಇಬ್ಬರನ್ನು ಬಂಧಿಸಿದ್ದೇವೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ” ಎಂದು ಪೊಲಿಸರು ತಿಳಿಸಿದ್ದಾರೆ.