ಮಹಿಳೆಯ ಮೇಲೆ ಆಕೆಯ ಸ್ನೇಹಿತ ಸೇರಿದಂತೆ ಮೂವರು ಕಾಮುಕರು ಅತ್ಯಾಚಾರ ಎಸಗಿದ್ದು, ಆಕೆಯ ಬಳಿ ಹಣವನ್ನೂ ದೋಚಿ, ಫೋನ್, ಫ್ರಿಡ್ಜ್ ಹಾಗೂ ವಾಷಿಂಗ್ ಮಷಿನ್‌ಗಳನ್ನು ಹೊತ್ತೋಯ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಸಾಯಿ ಲೇಔಟ್‌ನ ಸಂತ್ರಸ್ತ ಮಹಿಳೆಯು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನ ಮನೆಗೆ ಸ್ನೇಹಿತ ಮತ್ತು ಇತರ ಇಬ್ಬರು ಕಾಮುಕರು ನುಗ್ಗಿ, ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣವನ್ನು ತಮ್ಮ ಬೆಟ್ಟಿಂಗ್ ಆ್ಯಪ್ ಖಾತೆಗೆ ವರ್ಗಾಯಿಸಿಕೊಂಡರು. ಮಾತ್ರವಲ್ಲದೆ, ತನ್ನ ಮೊಬೈಲ್‌ಅನ್ನು ಕಸಿದುಕೊಂಡು, ಮನೆಯಲ್ಲಿದ್ದ ಫ್ರಿಡ್ಜ್ ಮತ್ತು ವಾಷಿಂಗ್ ಮಷಿನ್‌ಗಳನ್ನು ಹೊತ್ತೋಯ್ದಿದ್ದಾರೆ ಎಂದು ಆರೋಪಿಸಿದ್ದಾರೆ.
ಘಟನೆ ಎರಡು ದಿನಗಳ ಹಿಂದೆ ನಡೆದಿದೆ. ಮಹಿಳೆಯ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಾಗಿದೆ. ಆದಾಗ್ಯೂ, ಆರೋಪಿಗಳನ್ನು ಇನ್ನೂ ಬಂಧಿಸಲಾಗಿದೆ. ಪ್ರಕರಣದ ಬಗ್ಗೆ ತನಿಕೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.