ಬೆಂಗಳೂರು | ರಸ್ತೆಗುಂಡಿಗೆ ಬಿದ್ದು, ಚಿಕಿತ್ಸೆಗಾಗಿ 2 ಲಕ್ಷ ರೂ. ತೆತ್ತ ಯುವತಿ

Date:

 ‘ಸಿಲಿಕಾನ್ ಸಿಟಿ’ ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿಗೆ ಮುಕ್ತಿ ಇಲ್ಲದಂತಾಗಿದೆ. ರಸ್ತೆ ಗುಂಡಿಯಿಂದಾಗಿ, ಸ್ಕೂಟರ್ ಸವಾರ ಯುವತಿಯೊಬ್ಬರಿಗೆ ಅಪಘಾತವಾಗಿದ್ದು, ಆಕೆಯ ಚಿಕಿತ್ಸೆ ಪಡೆಯಲು ಬರೋಬ್ಬರಿ 1.97 ಲಕ್ಷ ರೂ. ಹಣ ಖರ್ಚು ಮಾಡಿದ್ದಾರೆ. ರಸ್ತೆಗುಂಡಿಯನ್ನು ಮುಚ್ಚುವಲ್ಲಿ ವಿಫಲವಾಗಿರುವ ಸರ್ಕಾರ ಮತ್ತು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಬೆಂಗಳೂರಿನ ವೈಟ್‌ಫೀಲ್ಡ್-ವರ್ತೂರು ರಸ್ತೆಯಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಐಟಿ ಉದ್ಯೋಗಿ ಐಶಾನಿ ಖನ್ನಾ ಅವರಿಗೆ ತೀವ್ರ ಪೆಟ್ಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಆಗಸ್ಟ್ 20ರಂದು ವರ್ತೂರು ರಸ್ತೆಯ ನೆಕ್ಸಸ್ ಮಾಲ್ ಸಮೀಪ ಭಾರಿ ಮಳೆಯಾಗುತ್ತಿದ್ದ ವೇಳೆಯಲ್ಲಿ ಐಶಾನಿ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ರಸ್ತೆಯಲ್ಲಿ ನೀರು ತುಂಬಿದ್ದರಿಂದ ಗುಂಡಿ ಇರುವುದು ಕಣ್ಣಿಗೆ ಕಾಣಿಸದೆ, ಸ್ಕೂಟರ್ ಸೀದಾ ಗುಂಡಿಗೆ ಉರುಳಿದೆ. ಈ ವೇಳೆ, ಸ್ಕೂಟರ್‌ ಐಶಾನಿ ಅವರ ಎಡ ಕಾಲಿನ ಮೇಲೆ ಬಿದ್ದ ಪರಿಣಾಮ, ಕಾಲಿನ ಮೂಳೆಗಳಿಗೆ ತೀವ್ರ ಪೆಟ್ಟುಬಿದ್ದಿದೆ ಮತ್ತು ಗಾಯಗಳಾಗಿವೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ತುರ್ತು ಪ್ಲಾಸ್ಟಿಕ್ ಸರ್ಜರಿ ನಡೆಸಲಾಗಿದ್ದು, 5 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಮತ್ತೊಂದು ಶಸ್ತ್ರಚಿಕಿತ್ಸೆಯ ಅಗತ್ಯವೂ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

ಸೆಪ್ಟೆಂಬರ್ 4ರಂದು ತಮಗಾದ ಕಹಿ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಐಶಾನಿ, “ವರ್ತೂರು ರಸ್ತೆಯಲ್ಲಿದ್ದ ಗುಂಡಿಯು ನನ್ನ ಕಾಲು ಮುರಿದಿದೆ, ತುರ್ತು ಶಸ್ತ್ರಚಿಕಿತ್ಸೆ ಮತ್ತು 1.97 ಲಕ್ಷ ರೂ. ಬಿಲ್ ಪಾವತಿಸುವಂತೆ ಮಾಡಿದೆ. ಕಳೆದ ಮೂರು ದಶಕಗಳಿಂದ ಬೆಂಗಳೂರಿನಲ್ಲೇ ವಾಸಿಸುತ್ತಿರುವ ನಾನು ರಸ್ತೆಗಳು ವರ್ಷದಿಂದ ವರ್ಷಕ್ಕೆ ಹದಗೆಡುತ್ತಿರುವುದನ್ನು ನೋಡುತ್ತಿದ್ದೇನೆ. ಇಲ್ಲಿ ರಸ್ತೆ ಎನ್ನುವುದೇ ಇಲ್ಲ, ಕೇವಲ ಗುಂಡಿಗಳಿವೆ. ಇಂದು ನನಗೆ ಸಂಭವಿಸಿದ್ದು ನಾಳೆ ನಿಮಗೂ ಆಗಬಹುದು, ಕೂಡಲೇ ರಸ್ತೆಗಳನ್ನು ಸರಿಪಡಿಸಿ,” ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರಿನ ಪೂರ್ವ ಭಾಗದ ವರ್ತೂರು, ವೈಟ್‌ಫೀಲ್ಡ್ ಭಾಗಗಳಲ್ಲಿ ಸಾವಿರಾರು ಐಟಿ ಉದ್ಯೋಗಿಗಳು ಮತ್ತು ಸಾಮಾನ್ಯ ನಾಗರಿಕರು ಪ್ರತಿದಿನ ಸಂಚರಿಸುತ್ತಾರೆ. ಹದಗೆಟ್ಟ ರಸ್ತೆಗಳು, ತೆರೆದ ಚರಂಡಿ ಹಾಗೂ ಕಸದ ಸಮಸ್ಯೆಯ ವಿರುದ್ಧ ನಿವಾಸಿಗಳು ಇತ್ತೀಚೆಗಷ್ಟೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮನವಿ ಸಲ್ಲಿಸಿದ್ದರು. ಆದರೂ ಆಡಳಿತ ಯಂತ್ರದ ನಿಷ್ಕ್ರಿಯತೆ ಮುಂದುವರಿದಿದೆ.

ಈ ಘಟನೆಯ ಬೆನ್ನಲ್ಲೇ ಬೆಂಗಳೂರಿನ ರಸ್ತೆ ನಿರ್ವಹಣೆಗೆ ಖರ್ಚಾಗುತ್ತಿರುವ ಸಾವಿರಾರು ಕೋಟಿ ರೂಪಾಯಿಗಳ ಕುರಿತು ಭಾರಿ ಚರ್ಚೆ ಆರಂಭವಾಗಿದೆ. ರಾಜ್ಯ ಸರ್ಕಾರ ರಸ್ತೆಗಳಿಗಾಗಿ ಈಗಾಗಲೇ 5,500 ಕೋಟಿ ರೂ. ಖರ್ಚು ಮಾಡಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೊಂಡಿದ್ದಾರೆ. ಇದನ್ನು ಪ್ರಶ್ನಿಸುವ ನಗರವಾಸಿಗಳು, ಈಗಾಗಲೇ ಖರ್ಚು ಮಾಡಿರುವ 5,500 ಕೋಟಿ ರೂ. ಬಗ್ಗೆ ಸರ್ಕಾರ ತಕ್ಷಣವೇ ‘ಶ್ವೇತಪತ್ರ’ ಹೊರಡಿಸಬೇಕೆಂದು ಆಗ್ರಹಿಸಿದ್ದಾರೆ.

ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಫೋನ್-ಇನ್ ಕಾರ್ಯಕ್ರಮಗಳು ಮತ್ತು ಆ್ಯಪ್‌ಗಳ ಮೂಲಕ ದೂರು ಸ್ವೀಕರಿಸುತ್ತಿದ್ದರೂ, ದೂರು ದಾಖಲಾದ ನಂತರ ಎಷ್ಟು ದಿನಗಳಲ್ಲಿ ಗುಂಡಿ ಮುಚ್ಚಲಾಗುತ್ತದೆ ಮತ್ತು ಕಳಪೆ ಕಾಮಗಾರಿ ನಡೆಸುವ ಗುತ್ತಿಗೆದಾರರ ವಿರುದ್ಧ ಏನು ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಪ್ರಶ್ನೆಗಳಿಗೆ ಆಡಳಿತ ಬಳಿ ಉತ್ತರವಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ವಿದೇಶಿ ಪ್ರವಾಸದ ದಾಖಲೆ ಬಹಿರಂಗಕ್ಕೆ ದೆಹಲಿ ಹೈಕೋರ್ಟ್ ನಕಾರ

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ...

ಈ ದಿನ ಸಂಪಾದಕೀಯ | ʼಕೊಂದು ಉಳಿಸಿಕೊಳ್ಳಬೇಕಾದ ಧರ್ಮ ಯಾವುದಾದರೂ ಇದ್ಯಾ ಈ ಪ್ರಪಂಚದಲ್ಲಿ?ʼ

ಸೌದಿ ಅರೇಬಿಯಾದ ಮರಣದಂಡನೆ ಪ್ರಕರಣದಿಂದ ಚಿಂತನೆಗೆ ಹಚ್ಚುವ ಸಂಗತಿ ಎಂದರೆ, ಧಾರ್ಮಿಕ...

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...