ಬೆಂಗಳೂರು | ಆನ್‌ಲೈನ್ ಬೆಟ್ಟಿಂಗ್ ಚಟಕ್ಕೆ ಕುಟುಂಬ ಛಿದ್ರ; ಪತ್ನಿಯನ್ನು ಭೀಕರವಾಗಿ‌ ಕೊಂದ ದುರುಳ ಪತಿ

Date:

ಆನ್‌ಲೈನ್ ಬೆಟ್ಟಿಂಗ್ ಗೀಳಿಗೆ ಬಿದ್ದು ಸಂಸಾರವನ್ನು ಬೀದಿಗೆ ತಂದಿದ್ದ ದುರುಳನೊಬ್ಬ,ತನ್ನ ಪತ್ನಿಯನ್ನು ಭೀಕರವಾಗಿ ಇರಿದು ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ಬೆಂಗಳೂರಿನ ಮಹಾದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೀಕರ ಘಟನೆ ನಡೆದಿದೆ. ಮಹಾದೇವಪುರ ಪೊಲೀಸ್ ಠಾಣೆಯಲ್ಲೇ ಹೋಂ ಗಾರ್ಡ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಂಜುಳಾ (32) ಅವರನ್ನು ಆಕೆಯ ಪತಿ ಕೊಲೆಗೈದಿದ್ದಾನೆ. ಆರೋಪಿ ಪ್ರದೀಪ್‌ನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಅತಿದೊಡ್ಡ ಕ್ರಿಪ್ಟೋ ದರೋಡೆ; ₹60 ಸಾವಿರ ಕೋಟಿ ಏನಿದು,...

ದೋಚಿದ ಇಷ್ಟೊಂದು ಅಗಾಧ ಪ್ರಮಾಣದ ಹಣವನ್ನು ಮರೆಮಾಚಲು ಹ್ಯಾಕರ್‌ಗಳು ಅತ್ಯಂತ ಸಂಕೀರ್ಣವಾದ ಜಾಲವನ್ನು ಹಾಗೂ ತಂತ್ರಗಾರಿಕೆಯನ್ನು ಬಳಸಿದ್ದಾರೆ. ಬಿಡುಗಡೆಯಾಗಿರುವ ತಾಂತ್ರಿಕ ವಿಶ್ಲೇಷಣೆಯ ಪ್ರಕಾರ, ಬೈನಾನ್ಸ್‌ನಿಂದ ಕದ್ದ ಈ ಹಣವನ್ನು ಹ್ಯಾಕರ್‌ಗಳು ಈ ಹಿಂದೆ...

ಪ್ರದೀಪ್ ಮತ್ತು ಮಂಜುಳಾ 15 ವರ್ಷಗಳ ಹಿಂದೆ ವಿವಾಹವಾಗಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಪ್ರದೀಪ್ ಆನ್‌ಲೈನ್ ಆ್ಯಪ್‌ಗಳಲ್ಲಿ ಬೆಟ್ಟಿಂಗ್ ಆಡುವ ಚಟಕ್ಕೆ ದಾಸನಾಗಿದ್ದ. ಇದರಿಂದಾಗಿ ಇಡೀ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಇದರ ಜೊತೆಗೆ ಪತ್ನಿಯ ನಡತೆಯ ಮೇಲೂ ಪ್ರದೀಪ್ ಸದಾ ಅನುಮಾನ ಪಡುತ್ತಾ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಪ್ರದೀಪನ ದೈಹಿಕ ಮತ್ತು ಮಾನಸಿಕ ಹಿಂಸೆ ತಾಳಲಾರದೆ ಮಂಜುಳಾ ಅವರು ಮಕ್ಕಳೊಂದಿಗೆ ಪ್ರತ್ಯೇಕವಾಗಿ ಪುಷ್ಪಾಂಜಲಿ ಥಿಯೇಟರ್ ಬಳಿಯ ಮನೆಯೊಂದರಲ್ಲಿ ವಾಸವಿದ್ದರು. ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಮಂಜುಳಾ ಅವರ ಮನೆಗೆ ಬಂದ ಪ್ರದೀಪ್, ತಾನು ಮಾಡಿದ ತಪ್ಪುಗಳಿಗೆ ಕ್ಷಮೆ ಕೇಳುವಂತೆ ನಟಿಸಿದ್ದಾನೆ. ‘ಕೊನೆಯದಾಗಿ ನಿನ್ನ ಕಾಲು ಹಿಡಿಯುತ್ತೇನೆ, ತಪ್ಪಾಯಿತು ಮನೆಗೆ ಬಾ’ ಎಂದು ಕಾಲಿಗೆ ಬಿದ್ದವನು, ಜರ್ಕಿನ್ ಒಳಗಡೆ ಅಡಗಿಸಿಟ್ಟುಕೊಂಡು ಬಂದಿದ್ದ ಚಾಕುವನ್ನು ತೆಗೆದು ಮಂಜುಳಾ ಅವರ ಮೇಲೆ ಮುಗಿಬಿದ್ದಿದ್ದಾನೆ. ಇಬ್ಬರು ಮಕ್ಕಳೂ ನೋಡನೋಡುತ್ತಿದ್ದಂತೆಯೇ ಮಂಜುಳಾ ಅವರಿಗೆ 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದಿದ್ದಾನೆ. ರಕ್ತಸ್ರಾವದಿಂದ ಮಂಜುಳಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಹತ್ಯೆ ಮಾಡುವ ಮುನ್ನ ಆರೋಪಿ ಪ್ರದೀಪ್ ವಿಡಿಯೋ ಒಂದನ್ನು ರೆಕಾರ್ಡ್ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಅದರಲ್ಲಿ, “ನನ್ನ ಬೆಟ್ಟಿಂಗ್ ಚಟದಿಂದ ಹೆಂಡತಿ, ಮಕ್ಕಳು ಬೀದಿಗೆ ಬಂದರು. ಅತ್ತೆ ಮತ್ತು ನಾದಿನಿಯಿಂದಾಗಿ ನನ್ನ ಹೆಂಡತಿ ಹಾಳಾದಳು. ಈಗ ನಾನೂ ಸಾಯುತ್ತೇನೆ, ನನ್ನ ಹೆಂಡತಿಯೂ ಸಾಯುತ್ತಾಳೆ” ಎಂದು ಹೇಳಿಕೊಂಡಿದ್ದ ಎನ್ನಲಾಗಿದೆ.

ಮಂಜುಳಾ ಅವರನ್ನು ಬರ್ಬರವಾಗಿ ಕೊಂದ ನಂತರ ಪ್ರದೀಪ್ ತಾನು ಕೂಡ ಚಾಕುವಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ವರದಿಯಾಗಿದೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಮಹಾದೇವಪುರ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆರೋಪಿ ಪ್ರದೀಪ್‌ನನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | SIR ರದ್ದತಿಗೆ ಆಗ್ರಹ: ಚುನಾವಣಾ ಆಯೋಗ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...