ಗ್ಯಾರಂಟಿ ಯೋಜನೆಗೆ ಎಸ್‌ಸಿ/ಟಿಎಸ್‌ಪಿ ಹಣ ಬಳಕೆ; ಸರ್ಕಾರದ ವಿರುದ್ಧ ಭೀಮ್ ಆರ್ಮಿ ಆಕ್ರೋಶ

Date:

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಕಾಂಗ್ರೆಸ್‌ ಸರ್ಕಾರವು ಎಸ್‌ಸಿ/ಟಿಎಸ್‌ಪಿ ನಿಧಿಯನ್ನು ಬಳಸಿಕೊಳ್ಳಲು ನಿರ್ಧರಿಸಿದೆ. ದಲಿತ-ಬಡ ಸಮುದಾಯಗಳ ಹಣವನ್ನು ಇತರ ಯೋಜನೆಗಳಿಗೆ ಬಳಸಿಕೊಳ್ಳುವುದು ದಲಿತ ಸಮುದಾಯಕ್ಕೆ ಎಸಗುವ ದ್ರೋಹ. ಸರ್ಕಾರದ ಈ ನಡೆ ನಿಂದನೀಯ ಮತ್ತು ಅಸಂವಿಧಾನಿಕ ಎಂದು ಭೀಮ್‌ ಆರ್ಮಿ ರಾಜ್ಯಾಧ್ಯಕ್ಷ ರಾಜ್‌ಗೋಪಾಲ್ ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಬೆಂಗಳೂರಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಎಸ್‌ಸಿ/ಟಿಎಸ್‌ಪಿ ಯೋಜನೆಗಳನ್ನು ಸಮಾಜದಲ್ಲಿ ಹಿಂದುಳಿದಿರುವ ಎಸ್‌ಸಿ/ಎಸ್‌ಟಿ ಸಮುದಾಯಗಳ ಸಬಲೀಕರಣಕ್ಕಾಗಿ ರೂಪಿಸಲಾಗಿದೆ. ಈ ಯೋಜನೆಗಳ ವಿಶೇಷ ಮೀಸಲು ಅನುದಾನವನ್ನು ಸಾರ್ವಜನಿಕ ಗ್ಯಾರಂಟಿ ಯೋಜನೆಗಳಿಗೆ ಬಳಸುವುದು ನ್ಯಾಯೋಚಿತಲ್ಲ. ಎಸ್‌ಸಿ/ಟಿಎಸ್‌ಪಿ ಹಣವನನ್ನು ಇತರ ಉದ್ದೇಶಕ್ಕೆ ಬಳಸುವುದು ನೈತಿಕತೆಗೂ, ಸಂವಿಧಾನಕ್ಕೂ ವಿರುದ್ಧವಾದದ್ದು” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

“ದಲಿತ ಅಭಿವೃದ್ಧಿಗಾಗಿ ಮೀಸಲಾದ ಹಣವನ್ನು ಇತರ ಉದ್ದೇಶಗಳಿಗೆ ಬಳಸುವುದು ಅಂಬೇಡ್ಕರ್ ವರ ದೃಷ್ಟಿಕೋನ ಮತ್ತು ಸಾಮಾಜಿಕ ನ್ಯಾಯದ ತತ್ವಗಳಿಗೆ ಸಿಡುಗು ಹಾಕುವ ಕ್ರಮವಾಗಿದೆ. ಬಡ ದಲಿತ ಮತ್ತು ಆದಿವಾಸಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಾಗಿರುವ ಅನುದಾನವನ್ನು ಬೇರೆಯವರಿಗೆ ಹಂಚುವುದು ಸಮಾಜವನ್ನು ಹಿನ್ನಡೆಗೆ ದೂಡುತ್ತದೆ” ಎಂದು ಎಚ್ಚರಿಸಿದ್ದಾರೆ.

“ಸರ್ಕಾರವು ಯಾವುದೇ ಕಾರಣಕ್ಕೂ ಎಸ್‌ಸಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳು ಅಥವಾ ಬೇರೆ ಯಾವುದೇ ಯೋಜನೆಗಳಿಗೆ ಬಳಸಬಾರದು. ಸರ್ಕಾರ ಈ ಹಣವನ್ನು ನಿಗದಿತ ಗುರಿಗಳಿಗಾಗಿ ಮಾತ್ರವೇ ಬಳಸುತ್ತದೆ ಎಂಬ ಖಚಿತತೆ ನೀಡಬೇಕು. ಸಂವಿಧಾನಾತ್ಮ,ಕ ಹಕ್ಕುಗಳನ್ನು ಭಂಗಗೊಳಿಸುವ ಯಾವುದೇ ತೀರ್ಮಾನವನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಆಪರೇಷನ್ ಸಿಂಧೂರ | ವಿಪಕ್ಷಗಳ ಗಂಭೀರ ಪ್ರಶ್ನೆಗಳಿಗೆ ಮೋದಿ ನಿರುತ್ತರ!

 “ಎಸ್‌ಸಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುವುದಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಮಾಜ ಕಲ್ಯಾಣ ಸಚಿವ ಎಚ್‌.ಸಿ ಮಹದೇವಪ್ಪ ಸ್ಪಷ್ಟನೆ ನೀಡದಿದ್ದಲ್ಲಿ, ರಾಜ್ಯವ್ಯಾಪಿ ಬೃಹತ್ ಹೋರಾಟ, ಕಾನೂನು ಹೋರಾಟ ಹಾಗೂ ಸಾಮೂಹಕ ಚಳವಳಿ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಬೆಂಗಳೂರು ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಅನಿಲ್ ಕುಮಾರ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...