ಬೆಂಗಳೂರು ವಿಭಜನೆಗೆ ಬಿಜೆಪಿ-ಜೆಡಿಎಸ್‌ ಬಿಡಲ್ಲ, ತಿದ್ದುಪಡಿಗೆ ಒಪ್ಪದಿದ್ದರೆ ಹೋರಾಟ: ಆರ್‌ ಅಶೋ‌ಕ್‌

Date:

Advertisements

ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ವಿಭಜನೆಯಾಗಬಾರದು. ಈ ನಗರ ಕನ್ನಡಿಗರಿಗಾಗಿಯೇ ಇರಬೇಕು ಎಂಬ ಕಾರಣಕ್ಕೆ ರಾಜ್ಯ ಸರ್ಕಾರದ ಬೆಂಗಳೂರು ವಿಭಜನೆ ತೀರ್ಮಾನವನ್ನು ವಿರೋಧಿಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ರಾಜ್ಯ ಸರ್ಕಾರದಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಸ್ಥಾಪನೆಗೆ ಸಂಬಂಧಿಸಿದಂತೆ ಸಾಧಕ-ಬಾಧಕ ಚರ್ಚಿಸಲು ಆಯೋಜಿಸಿದ್ದ ಪ್ರಾತ್ಯಕ್ಷಿಕೆಯಲ್ಲಿ ಅವರು ಪಾಲ್ಗೊಂಡ‌ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಬೆಂಗಳೂರು ಭಾಗ ಭಾಗವಾಗದೇ ಹೀಗೆಯೇ ಉಳಿಯಬೇಕು. ಇಲ್ಲಿ ಕನ್ನಡಿಗರೇ ಸಾರ್ವಭೌಮರಾಗಿದ್ದು, ಇದು ಕನ್ನಡಿಗರಿಗಾಗಿಯೇ ಉಳಿಯಬೇಕು” ಎಂದರು.

“ಇಲ್ಲಿ ಕನ್ನಡದವರೇ ಮೇಯರ್‌ ಆಗಬೇಕು. ಇದಕ್ಕಾಗಿ ಬೆಂಗಳೂರು ವಿಭಜನೆಯನ್ನು ಬಿಜೆಪಿ ಮತ್ತು ಜೆಡಿಎಸ್‌ ವಿರೋಧಿಸುತ್ತವೆ. ಬಿಬಿಎಂಪಿ ಅಡಿಯಲ್ಲಿ ಸ್ಲಂ ಬೋರ್ಡ್‌, ಜಲಮಂಡಳಿ, ಬಿಎಂಟಿಸಿ ಬರುವುದಿಲ್ಲ. ಇವೆಲ್ಲವೂ ಒಂದೇ ಕಡೆ ಬಂದು, ಬಿಬಿಎಂಪಿಯೇ ನಿರ್ವಹಣೆ ಮಾಡಿದರೆ ಪ್ರತ್ಯೇಕವಾಗಿ ಐಎಎಸ್‌ ಅಧಿಕಾರಿಗಳನ್ನು ನೇಮಕ ಮಾಡುವುದು ತಪ್ಪುತ್ತದೆ. ಸರ್ಕಾರಕ್ಕೆ ಖರ್ಚು ಕಡಿಮೆಯಾಗುವುದರ ಜೊತೆಗೆ, ಜನರು ಒಂದೇ ಕಡೆ ಸೇವೆಗಳನ್ನು ಪಡೆಯಬಹುದು. ಬೇರೆ ನಗರಗಳಲ್ಲೂ ಇದೇ ರೀತಿಯಿದ್ದು, ಬೆಂಗಳೂರಿಗೂ ಇಂತಹ ವ್ಯವಸ್ಥೆ ತರಬೇಕಿದೆ” ಎಂದು ಹೇಳಿದರು.

Advertisements

“ಇಡೀ ದೇಶಕ್ಕೆ ಒಬ್ಬ ಪ್ರಧಾನಿ, ರಾಜ್ಯಕ್ಕೆ ಒಬ್ಬರೇ ಮುಖ್ಯಮಂತ್ರಿ ಇರುವಂತೆ ಬೆಂಗಳೂರು ನಗರಕ್ಕೆ ಒಬ್ಬ ಮೇಯರ್ ಇರಲಿ. ಅವರ ಅಧಿಕಾರಾವಧಿ ಎರಡೂವರೆ ವರ್ಷ ಅಥವಾ ಐದು ವರ್ಷ ನಿಗದಿಪಡಿಸಿದರೂ ಅಡ್ಡಿಯಿಲ್ಲ. ಕಾಂಗ್ರೆಸ್ ಸರ್ಕಾರ ತಜ್ಞರು ನೀಡಿರುವ ವರದಿಯ ಶೇಕಡಾ ಇಒ್ಪತ್ತರಿಂದ ಮುವತ್ತರಷ್ಟನ್ನು ಮಾತ್ರ ವಿಧೇಯಕದಲ್ಲಿ ಅಳವಡಿಸಿಕೊಂಡಿದೆ ಎಂಬುದನ್ನು ವಿ.ರವಿಚಂದ್ರ ಅವರು ಸ್ಪಷ್ಟಪಡಿಸಿದ್ದಾರೆ. ಜತೆಗೆ ಯಾರಾದರೂ ಕೊಟ್೯ನಲ್ಲಿ ಪ್ರಶ್ನೆ ಮಾಡಿದರೆ ಬಿದ್ದು ಹೋಗುತ್ತದೆ ಎಂದೂ ತಿಳಿಸಿದ್ದಾರೆ” ಎಂದರು.

ಸಿಎಂ ಬದಲಾವಣೆ

“ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯನವರು ಸಂಗೊಳ್ಳಿ ರಾಯಣ್ಣನವರ ಉದಾಹರಣೆ ಮೂಲಕ ಬೆನ್ನಿಗೆ ಚೂರಿ ಹಾಕಲಾಗುತ್ತಿದೆ ಎಂದು ಎರಡು ಸಲ ಹೇಳಿಕೆ ನೀಡಿದ್ದಾರೆ. ಅವರ ಪಕ್ಷದವರೇ ಅವರಿಗೆ ಮೋಸ ಮಾಡುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ನಾವ್ಯಾರೂ ಆರ್‌ಟಿಐ ಅರ್ಜಿ ಹಾಕಿಲ್ಲ, ಅವರ ಪಕ್ಷದವರೇ ಎಲ್ಲ ದಾಖಲೆಗಳನ್ನು ಹೊರಗೆ ತಂದಿದ್ದಾರೆ. ಮ್ಯೂಸಿಕಲ್‌ ಚೇರ್‌ ಮಾಡುತ್ತಿರುವವರು ಪಟಾಕಿ ಇಡುತ್ತಿದ್ದಾರೆ. ಅವರು ಪಟಾಕಿ ಒಡೆದಾಗ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ” ಎಂದು ಹೇಳಿದರು.

“ರಾಜ್ಯದಲ್ಲಿ 60 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಲು ತಯಾರಿ ನಡೆದಿದೆ. ಇದರಿಂದ ಸರ್ಕಾರಕ್ಕೆ ಹಣ ಉಳಿತಾಯವಾಗಲಿದೆ. ಈಗಾಗಲೇ ಬಿಪಿಎಲ್‌ ಕಾರ್ಡುದಾರರಿಗೆ ಅಧಿಕಾರಿಗಳು ಕಿರುಕುಳ ನೀಡಲಾರಂಭಿಸಿದ್ದಾರೆ. ಇದಕ್ಕಾಗಿ ಖಾಸಗಿ ಏಜೆನ್ಸಿ ನೇಮಕ ಮಾಡಿ, ಆ ಮೂಲಕ ಕಾರ್ಡ್‌ ರದ್ದುಪಡಿಸಿ ಗ್ಯಾರಂಟಿಗೆ ಹಣ ಉಳಿಸಲಾಗುತ್ತಿದೆ. ಜನರಿಗೆ ಗೊತ್ತಾಗದಂತೆ ತೆರಿಗೆ ವಿಧಿಸುವುದು ಹೇಗೆಂದು ತಂತ್ರ ಮಾಡಲು ಸಮಿತಿ ನೇಮಿಸಲಾಗಿದೆ. ಇದರ ವಿರುದ್ಧ ಬಿಜೆಪಿ ಹೋರಾಡಲಿದೆ” ಎಂದು ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X