ಮತಗಟ್ಟೆಯಲ್ಲೆ ಕುಳಿತು ಕರಪತ್ರ ಹಂಚುತ್ತಿರುವ ಬಿಜೆಪಿ ಕಾರ್ಯಕರ್ತರು: ಎಎಪಿ ಆರೋಪ

Date:

  • ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಬಿಜೆಪಿ ಕಾರ್ಯಕರ್ತರು
  • ಬಿಜೆಪಿ ಅಭ್ಯರ್ಥಿ ಎಂ ಕೃಷ್ಣಪ್ಪ ರೆಡ್ಡಿ ವಿರುದ್ಧ ಕ್ರಮಕ್ಕೆ ಆಗ್ರಹ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಮತದಾನ ಜೋರಾಗಿದ್ದು, ಮತದಾರರು ತಮ್ಮ ಅಭ್ಯರ್ಥಿಯ ಪರ ಮತ ಹಾಕಲು ಮತಗಟ್ಟೆಯ ಹತ್ತಿರ ಬರುತ್ತಿದ್ದಾರೆ. ಆದರೆ, ಬೆಂಗಳೂರಿನಲ್ಲಿ ಕೆಲವು ಬಿಜೆಪಿ ಕಾರ್ಯಕರ್ತರು ಮತಗಟ್ಟೆಯಲ್ಲಿಯೇ ಕುಳಿತು ಕರಪತ್ರಗಳನ್ನು ಹಂಚಿ ಅಕ್ರಮ ಮತದಾನಕ್ಕೆ ಅನುವು ಮಾಡಿಕೊಡುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಈ ಬಗ್ಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅಶೋಕ್ ಮೃತ್ಯುಂಜಯ ಮಾಧ್ಯಮಗಳೊಂದಿಗೆ ಮಾತನಾಡಿ, “ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಗೂರು ವಾರ್ಡಿನಲ್ಲಿ ಬಿಜೆಪಿ ಕಾರ್ಯಕರ್ತರು ಮತಗಟ್ಟೆಯಲ್ಲಿ ಕುಳಿತುಕೊಂಡು ಬಿಜೆಪಿಯ ಕರಪತ್ರಗಳನ್ನು ಹಂಚಿ ಅಕ್ರಮ ಮತದಾನಕ್ಕೆ ಅನುವು ಮಾಡಿಕೊಡುತ್ತಿದ್ದಾರೆ. ನನಗೆ ಈ ಘಟನೆ ನೋಡಿ ನಿಜಕ್ಕೂ ಆಶ್ಚರ್ಯವಾಯಿತು” ಎಂದಿದ್ದಾರೆ.

“ಇದು ಪ್ರಜಾಪ್ರಭುತ್ವ. ಚುನಾವಣೆ ಎಂದರೆ ಎಲ್ಲರಿಗೂ ಸಮಾನವಾದ ರೀತಿಯಲ್ಲಿ ನಡೆಯಬೇಕು. ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಈ ನಡೆ ಸ್ಪಷ್ಟವಾಗಿ ನೀತಿ ಸಂಹಿತೆ ಉಲ್ಲಂಘಿಸಿದೆ ಎಂಬುದು ಎದ್ದು ಕಾಣುತ್ತದೆ. ಕೂಡಲೇ ಚುನಾವಣಾ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮತದಾನದ ದಿನ ವೇತನ ಸಹಿತ ರಜೆ ನಿರಾಕರಿಸಿದ ಖಾಸಗಿ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ ಬಿಬಿಎಂಪಿ

“ಕೂಡಲೇ ಬಿಜೆಪಿ ಅಭ್ಯರ್ಥಿ ಎಂ ಕೃಷ್ಣಪ್ಪ ರೆಡ್ಡಿರವರ ಮೇಲೆ ಕಠಿಣ ಕ್ರಮ ತೆಗೆದುಕೊಂಡು ಈ ಮತಗಟ್ಟೆಯಲ್ಲಿ ಮರು ಮತದಾನ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕಕ್ಕೆ ನೀಡಲು ‘ಇಲ್ಲ’ ಎಂದಿದ್ದ ‘ಅಕ್ಕಿ’ ಸಿಂಗಾಪುರಕ್ಕೆ ರಫ್ತು ಮಾಡಲು ಹೊರಟ ಕೇಂದ್ರ ಸರ್ಕಾರ!

ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವಂತೆ ಕೇಳಿದಾಗ 'ನಿಮಗೆ...

ಬೆಳಗಾವಿ | ಆಪರೇಷನ್ ಹಸ್ತದ ಬಗ್ಗೆ ಲಕ್ಷ್ಮಣ್ ಸವದಿ ಮಾರ್ಮಿಕ ಹೇಳಿಕೆ

ಬಹಳಷ್ಟು ಮಂದಿ ಜೆಡಿಎಸ್‌-ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರುಲು ಸಿದ್ದರಾಗಿದ್ದಾರೆ. ಎಲ್ಲದಕ್ಕೂ ಕಾಲ...

ಕಟುಕ, ಕಟಿಕ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡಲು ಸಿಎಂಗೆ ಮನವಿ

ರಾಜ್ಯ ಕಟಿಕ ಸಮಾಜದ ನಿಯೋಗವು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ...

ಅರಣ್ಯ ಇಲಾಖೆಯ 50 ಅಧಿಕಾರಿ ಮತ್ತಿ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ವಿತರಣೆ

ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ನಡೆಯುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನೀಡುವ...