ಸರ್ಕಾರ ಬಿದ್ದರೆ ಬೀಳಲಿ. ಕರ್ನಾಟಕದಲ್ಲಿ ಜಾತಿಗಣತಿ ಜಾರಿ ಮಾಡಲೇಬೇಕು ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಇದೆ. ಆದರೆ ಜಾತಿಗಣತಿ ಜಾರಿಗೆ ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೀನಾಮೇಷ ಎಣಿಸದೆ ಮೊದಲು ಜಾತಿಗಣತಿ ಜಾರಿ ಮಾಡಲಿ ಎಂದು ಆಗ್ರಹಿಸಿದರು.ಜಾತಿಗಣತಿ ಜಾರಿಯಿಂದ ಎಲ್ಲ ಸಮುದಾಯಗಳಿಗೆ ಅನುಕೂಲ ಆಗಲಿದೆ. ಜಾತಿಗಣತಿ ಜಾರಿಯಿಂದಲೇ ಸರ್ಕಾರ ಉರುಳುತ್ತದೆ ಎಂದಾದರೆ ಹಾಗೆಯೇ ಆಗಲಿ ಎಂದು ಹರಿಪ್ರಸಾದ್ ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರೋಪ-ಪ್ರತ್ಯಾರೋಪಗಳೆಷ್ಟು ಕಾಲ? ಆಡಳಿತ, ಅಭಿವೃದ್ಧಿ, ಕಲ್ಯಾಣಕ್ಕೆಷ್ಟು ಸಮಯ?
ರಾಹುಲ್ ಗಾಂಧಿ ಪ್ರಣಾಳಿಕೆ ಬಗ್ಗೆ ಗೌರವ ಇರುವವರು. ಅವರು ಜಾತಿ ಗಣತಿಗೆ ಬೆಂಬಲ ಕೋಡಬೇಕು. ಕಾಂಗ್ರೆಸ್ ಪಕ್ಷದ ಪ್ರಣಾಳಿಯಲ್ಲೇ ಜಾತಿಗಣತಿ ಜಾರಿ ಬಗ್ಗೆ ಉಲ್ಲೇಖಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಕೂಡ ಆ ಬಗ್ಗೆ ಪ್ರಸ್ತಾಪಿಸಿದ್ದರು. ಪ್ರಪಂಚವೇ ಬಿದ್ದುಹೋದರೂ ಜಾತಿಗಣತಿ ಜಾರಿಯಾಗಬೇಕು ಎಂದು ರಾಹುಲ್ ಗಾಂಧಿಯವರೇ ಹೇಳಿದ್ದಾರೆ. ಅದೇ ರೀತಿ ಪ್ರಪಂಚ ತಲೆ ಕೆಳಗಾದರೆ ಆಗಲಿ, ಜಾತಿ ಜನಗಣತಿ ಜಾರಿಗೆ ತರಬೇಕು. ಸರ್ಕಾರ ಬಿದ್ದರೆ ಬಿಳಲಿ ಯಾಕೆ ಹೆದರಬೇಕು ಎಂದು ಅವರು ಪ್ರಶ್ನಿಸಿದ್ದಾರೆ. ಹರಿಪ್ರಸಾದ್ ಈ ಹಿಂದೆ ಕೂಡ ಜಾತಿ ಗಣತಿ ಜಾರಿಗೆ ಆಗ್ರಹಿಸಿದ್ದರು.
