ತಿಂಗಳಿಗೆ ₹6 ಕೋಟಿ ಲಾಭ ಗಳಿಸುತ್ತಿರುವ ಬಿಎಂಆರ್‌ಸಿಎಲ್‌ : ಡಿಸಿಎಂ ಡಿಕೆ ಶಿವಕುಮಾರ್

Date:

  • ಪ್ರಯಾಣಿಕರ ಹೊರತಾಗಿ ಇತರೆ ಮೂಲಗಳಿಂದ ಲಾಭ ಪಡೆಯಲು ಸಲಹೆ
  • ಸರ್ಜಾಪುರದಿಂದ ಹೆಬ್ಬಾಳದವರೆಗೆ ಮೂರನೇ ಹಂತದ ಯೋಜನೆಗಾಗಿ ಸಮೀಕ್ಷೆ

ದೇಶದಲ್ಲಿ ಎರಡನೇ ಅತಿ ದೊಡ್ಡದಾಗಿರುವ ಬೆಂಗಳೂರಿನ ‘ನಮ್ಮ ಮೆಟ್ರೋ’ ತಿಂಗಳಿಗೆ ₹48 ಕೋಟಿ ಆದಾಯ ಗಳಿಸುತ್ತಿದ್ದರೂ, ಅದರ ನಿರ್ವಹಣೆಯ ವೆಚ್ಚವೇ ₹42 ಕೋಟಿಯಾಗುತ್ತಿದೆ. ₹6 ಕೋಟಿಯಷ್ಟೇ ಲಾಭ ಬರುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.

ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಕಚೇರಿ ಸಭಾಂಗಣದಲ್ಲಿ ಮೆಟ್ರೋ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, “ನಮ್ಮ ಮೆಟ್ರೋ ತಿಂಗಳಿಗೆ ತನ್ನ ಎಲ್ಲ ವೆಚ್ಚಗಳನ್ನು ಕಳೆದು ₹6 ಕೋಟಿ ಲಾಭ ಗಳಿಸುತ್ತಿದೆ. ಹಾಗಾಗಿ, ಪ್ರಯಾಣಿಕರ ಹೊರತಾಗಿ ಯಾವ ರೀತಿ ಲಾಭ ಪಡೆಯುವುದು ಅಥವಾ ಇತರೆ ಮೂಲಗಳಿಂದ ಹೇಗೆ ಆದಾಯ ಗಳಿಸಬಹುದು ಎಂಬ ಬಗ್ಗೆ ಕೆಲವು ಸಲಹೆಗಳನ್ನು ನೀಡಿದ್ದೇನೆ. ಮೆಟ್ರೋ ನಿಲ್ದಾಣ ಹೊರಗೆ ಮತ್ತು ಒಳಗೆ ಜಾಹೀರಾತು ಹಾಕಲು ಇರುವ ಸಮಸ್ಯೆ ಬಗೆಹರಿಸಲು ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದೇವೆ” ಎಂದರು.

“ನಮ್ಮ ಮೆಟ್ರೋಗೆ ಸಬ್ಸಿಡಿಯಲ್ಲಿ ಸಿಗುತ್ತಿರುವ ವಿದ್ಯುತ್ ಅನ್ನು ಮತ್ತಷ್ಟು ಕಡಿಮೆ ದರಕ್ಕೆ ಹೇಗೆ ಪಡೆಯಬೇಕು ಎಂಬ ಬಗ್ಗೆ ಸಲಹೆ ನೀಡಿದ್ದೇನೆ ಹಾಗೂ ನಗರದಲ್ಲಿ ಎಲ್ಲೆಲ್ಲಿ ಮೆಟ್ರೋ ವಿಸ್ತರಣೆ ಮಾಡಬಹುದು ಎಂಬ ಬಗ್ಗೆ ಸಮೀಕ್ಷೆಯಾಗಬೇಕು. ಈಗಾಗಲೇ ಎರಡನೇ ಹಂತದ ಮೆಟ್ರೋ ಯೋಜನೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಒಪ್ಪಿಗೆ ದೊರೆಯಬೇಕಿದೆ. ಸರ್ಜಾಪುರದಿಂದ ಹೆಬ್ಬಾಳದವರೆಗೆ ಮೂರನೇ ಹಂತದ ಯೋಜನೆಗಾಗಿ ಸಮೀಕ್ಷೆ ನಡೆಯುತ್ತಿದೆ” ಎಂದು ವಿವರಿಸಿದರು.

2026ರಲ್ಲಿ ವಿಮಾನ ನಿಲ್ದಾಣಕ್ಕೆ ಮೆಟ್ರೊ

“ನಮ್ಮ ಮೆಟ್ರೋ ರೈಲು ಮಾರ್ಗದ ಹಂತ 3ಎ ಯೋಜನೆಯಲ್ಲಿ ಸರ್ಜಾಪುರದಿಂದ ಹೆಬ್ಬಾಳದವರೆಗೆ ಮಾರ್ಗ ವಿಸ್ತರಿಸಲು ಸರ್ವೆ ನಡೆಯುತ್ತಿದೆ. ಎಲ್ಲೆಲ್ಲಿ ಮೆಟ್ರೋ ಮಾರ್ಗ ವಿಸ್ತರಿಸಲು ಸಾಧ್ಯವೋ ಅಲ್ಲಿ ಸರ್ವೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 2026ರ ಜೂನ್‌ ವೇಳೆಗೆ ವಿಮಾನ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕ ಮಾರ್ಗ ಪೂರ್ಣಗೊಳ್ಳಲಿದೆ” ಎಂದು ತಿಳಿಸಿದರು.

“ಜೆ.ಪಿ.ನಗರ 4ನೇ ಹಂತದಿಂದ ಕೆಂಪಾಪುರ (32.15 ಕಿ.ಮೀ) ಮತ್ತು 2ನೇ ಕಾರಿಡಾರ್‌ನಲ್ಲಿ ಹೊಸಹಳ್ಳಿ- ಕಡಬಗೆರೆ(12.50 ಕಿ.ಮೀ) ವರೆಗೆ ಮಾರ್ಗ ನಿರ್ಮಿಸಲು ಉದ್ದೇಶಿಸಲಾಗಿದೆ. ಬೈಯಪ್ಪನಹಳ್ಳಿ-ಕೆ.ಆರ್‌.ಪುರಂ ಮೆಟ್ರೋ ಜುಲೈ ವೇಳೆಗೆ ವಾಣಿಜ್ಯ ಸಂಚಾರ ಆರಂಭಿಸಲಿದೆ. ಕೆಂಗೇರಿ-ಚಲ್ಲಘಟ್ಟ ಆಗಸ್ಟ್‌-ಸೆಪ್ಟೆಂಬರ್‌, ನಾಗಸಂದ್ರ-ಮಾದಾವರ ಸೆಪ್ಟೆಂಬರ್‌ ಅಕ್ಟೋಬರ್‌ನಲ್ಲಿ ಆಗಬಹುದು. ಹೊಸ ಮಾರ್ಗ ಆರ್‌.ವಿ.ರೋಡ್‌-ಬೊಮ್ಮಸಂದ್ರ ಅಕ್ಟೋಬರ್‌-ನವೆಂಬರ್‌ನಲ್ಲಿ ವಾಣಿಜ್ಯ ಸಂಚಾರ ಆರಂಭಿಸುವ ಸಾಧ್ಯತೆ ಇದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಫೇಸ್‌ಬುಕ್ ಯುವತಿ ಬಲೆಗೆ ಬಿದ್ದು ₹37 ಲಕ್ಷ ಕಳೆದುಕೊಂಡ ಕಂಬಾಳು ಸ್ವಾಮೀಜಿ

“ರಾತ್ರಿ ವೇಳೆ ಈ ಕಾಮಗಾರಿಗಳು ನಡೆಯುತ್ತಿವೆ. ಅಧಿಕಾರಿಗಳು ಕಾಮಗಾರಿ ವಿಳಂಬದ ಬಗೆಗಿನ ಸಮಸ್ಯೆ ಹೇಳಿಕೊಂಡಿದ್ದಾರೆ. ಹಗಲಲ್ಲಿ ಸಿಮೆಂಟ್‌, ಸಾಮಗ್ರಿ ತಲುಪಿಸಲು ಆಗುತ್ತಿಲ್ಲ. ಈ ವಿಚಾರವಾಗಿ ಪೊಲೀಸ್‌ ಜತೆ ಸಭೆ ಮಾಡಬೇಕಿದ್ದು, ಪೊಲೀಸರು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಿದೆ” ಎಂದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಂಜುಮ್‌ ಪರ್ವೇಜ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಸಾಲು ಸಾಲು ರಜೆ; ಮೂರು ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್‌ನಲ್ಲಿ ಸಿಲುಕಿದ ಜನ

ರಾಜ್ಯ ರಾಜಧಾನಿ ಬೆಂಗಳೂರಿಗೆ ಹಲವಾರು ಜನ ಕೆಲಸ ಅರಸಿ ಬಂದು ನಗರದಲ್ಲಿರುವ...

ಬೆಂಗಳೂರು | ಪ್ರತಿಭಟನೆ ಹೆಸರಿನಲ್ಲಿ ಹೋಟೆಲ್‌ಗೆ ನುಗ್ಗಿ ದಾಂಧಲೆ; ಬಿಜೆಪಿ ಕಾರ್ಯಕರ್ತರ ಬಂಧನ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಸೆ.26 ರಂದು ಹಲವಾರು...

ಬೆಂಗಳೂರು | ಹಳೆ ದ್ವೇಷಕ್ಕೆ ಸಂಗಡಿಗನ ಹತ್ಯೆ; ನಾಲ್ವರ ಬಂಧನ

ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಹಾಕಿಕೊಂಡಾಗ ತಮ್ಮ ಹೆಸರು ಬಾಯಿಬಿಟ್ಟ ಎಂಬ ದ್ವೇಷದಿಂದ...

ಬೆಂಗಳೂರು | ಸೆ.29 ರಂದು ಮೈಸೂರು ರಸ್ತೆ-ಕೆಂಗೇರಿ ನಡುವೆ ಮೆಟ್ರೋ ಸಂಚಾರ ಸ್ಥಗಿತ

ಸೆ.29 ರಂದು ನೇರಳೆ ಮಾರ್ಗದ ಮೈಸೂರು ರಸ್ತೆ ಮತ್ತು ಕೆಂಗೇರಿ ನಿಲ್ದಾಣಗಳ...