- ಟಿಟಿಎಂಸಿಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 6:30 ರವರೆಗೆ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ
- ವಿದ್ಯಾರ್ಥಿನಿಯರು ಶಕ್ತಿ ಯೋಜನೆಯಡಿ ಆಧಾರಕಾರ್ಡ್ ತೋರಿಸಿ ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ
2023-24ನೇ ಸಾಲಿನ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್ಲೈನ್ ಮತ್ತು ಆಫ್ಲೈನ್ನ ಮುಖಾಂತರ ಸ್ಮಾರ್ಟ್ ಕಾರ್ಡ್ ಪಾಸ್ ವಿತರಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಾರಂಭಿಸಿದೆ.
ಬಿಎಂಟಿಸಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುವುದು ವಿಳಂಬವಾದ ಹಿನ್ನೆಲೆ, ಕಳೆದ ವರ್ಷದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿತ್ತು. ಇದೀಗ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಆರಂಭವಾಗಿದ್ದು, ವಿದ್ಯಾರ್ಥಿಗಳು ರಿಯಾಯಿತಿ ದರದಲ್ಲಿ ಸ್ಮಾರ್ಟ್ ಕಾರ್ಡ್ ಪಾಸ್ ಪಡೆಯಬಹುದು.
ಬಿಎಂಟಿಸಿ ಬಸ್ ನಿಲ್ದಾಣ, ಟ್ರಾಫಿಕ್ ಮತ್ತು ಟ್ರಾನ್ಸಿಟ್ ಮ್ಯಾನೇಜ್ಮೆಂಟ್ ಸೆಂಟರ್ಗಳಲ್ಲಿ ವಿದ್ಯಾರ್ಥಿಗಳು ಸ್ಮಾರ್ಟ್ ಕಾರ್ಡ್ ಪಾಸ್ಗಳನ್ನು ಆಫ್ಲೈನ್ನ ಮುಖಾಂತರ ಪಡೆಯಬಹುದು. ಆನ್ ಲೈನ್ ಮುಖಾಂತರ ಪಾಸ್ ಪಡೆಯಲು ಬಯಸುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಅಥವಾ ಬಿಎಂಟಿಸಿ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಸುದ್ದಿ ಓದಿದ್ದೀರಾ? 40 ವಿದ್ಯಾರ್ಥಿಗಳ ಶಿಕ್ಷಣದ ಭವಿಷ್ಯಕ್ಕೆ ಬಂಡೇಪಾಳ್ಯ ಪೊಲೀಸ್ ಠಾಣೆ ನೆರವು
ಟಿಟಿಎಂಸಿಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 6:30 ರವರೆಗೆ ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯಬಹುದು.
ವಿದ್ಯಾರ್ಥಿನಿಯರು ಶಕ್ತಿ ಯೋಜನೆಯಡಿ ತಮ್ಮ ಆಧಾರ ಕಾರ್ಡ್ಗಳನ್ನು ತೋರಿಸಿ ಬಿಎಂಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.