2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭವಾಗಿದೆ. ಈ ಹಿನ್ನೆಲೆ, ಜುಲೈ 15 ರವರೆಗೆ ವಿದ್ಯಾರ್ಥಿಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಟಿಸಿ, “ರಾಜ್ಯ ಸರ್ಕಾರದ ನಿರ್ದೇಶನದಂತೆ ವಿದ್ಯಾಸಂಸ್ಥೆಗಳು ಶೈಕ್ಷಣಿಕ ಚಟುವಟಿಕೆ ಪ್ರಾರಂಭಿಸಿವೆ. ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ” ಎಂದು ತಿಳಿಸಿದೆ.
“1 ರಿಂದ 12 ನೇ ತರಗತಿವರೆಗೆ ಪದವಿ, ವೃತ್ತಿಪರ, ಸ್ನಾತಕೋತ್ತರ ಪದವಿ, ಸಂಜೆ ಕಾಲೇಜು, ಪಿಎಚ್ಡಿ ವಿದ್ಯಾರ್ಥಿಗಳು 2022-23 ನೇ ಸಾಲಿನ ವಿದ್ಯಾರ್ಥಿ ಪಾಸು ಅಥವಾ 2023-24 ನೇ ಸಾಲಿನ ಶಾಲಾ, ಕಾಲೇಜಿನ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿ ತೋರಿಸಿ ಬಸ್‌ನಲ್ಲಿ ಪ್ರಯಾಣಿಸಬಹುದಾಗಿದೆ” ಎಂದು ಹೇಳಿದೆ.