ಡೀಪ್‍ಫೇಕ್ ವಿಡಿಯೋದಲ್ಲಿ ಬಾಲಿವುಡ್ ನಟಿ ಕಾಜೋಲ್: ವಿಡಿಯೋ ವೈರಲ್

Date:

Advertisements

ಆರ್ಟಿಫಿಶಿಯಲ್ ಇಂಟಲಿಜೆನ್ಸ್‌ (ಎಐ) ಬಳಸಿಕೊಂಡು ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಮಾರ್ಪಾಡು ಮಾಡಲಾಗುತ್ತಿದೆ. ವಿಶ್ವದೆಲ್ಲೆಡೆ ಸಾಮಾಜಿಕ ಜಾಲತಾಣದಲ್ಲಿ ಈ ಡೀಪ್‌ ಫೇಕ್ ವಿಡಿಯೋ ಮತ್ತು ಫೋಟೋಗಳು ಹರಿದಾಡುತ್ತಿವೆ. ಮೊದಲಿಗೆ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ ಫೇಕ್‌ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಬಳಿಕ ನಟಿ ಕತ್ರಿಕಾ ಕೈಫ್ ಅವರ ಫೋಟೋವನ್ನು ಅಶ್ಲೀಲವಾಗಿ ಮಾರ್ಪಾಡು ಮಾಡಲಾಗಿತ್ತು. ಇದೀಗ, ಬಾಲಿವುಡ್ ನಟಿ ಕಾಜೋಲ್‌ ಅವರು ಬಟ್ಟೆ ಬದಲಾಯಿಸುವ ಡೀಪ್‌ ಫೇಕ್ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ಹಾಗೂ ನಟಿ ಕಾಜೋಲ್ ಡೀಪ್‌ಫೇಕ್ ತಂತ್ರಜ್ಞಾನಕ್ಕೆ ಬಲಿಯಾದವರು.

ನಟಿ ಕಾಜೋಲ್ ಡೀಪ್‌ ಫೇಕ್ ವಿಡಿಯೋ

Advertisements

ಬಾಲಿವುಡ್‌ ನಟಿ ಕಾಜೋಲ್‌ ದೇವಗನ್‌ ಅವರು ಕ್ಯಾಮೆರಾ ಮುಂದೆ ಬಟ್ಟೆ ಬದಲಾಯಿಸುತ್ತಿರುವ ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಈ ವಿಡಿಯೋವನ್ನು ಲಕ್ಷಾಂತರ ಸಂಖ್ಯೆಯಲ್ಲಿ ಶೇರ್ ಮಾಡಲಾಗುತ್ತಿದ್ದು, ಇದು ಸಂಪೂರ್ಣ ಡೀಪ್‌ಫೇಕ್‌ ವಿಡಿಯೊ ಆಗಿದೆ.

‘ಗೆಟ್‌ ರೆಡಿ ವಿತ್‌ ಮಿ’ ಎನ್ನುವ ಟಿಕ್‌ಟಾಕ್‌ನ ಟ್ರೆಂಡ್‌ಗಾಗಿ ಇಂಗ್ಲಿಷ್‌ ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ರೋಸಿ ಬ್ರಿನ್‌ ಅವರ ವಿಡಿಯೊಗೆ ಕಾಜೋಲ್‌ ಅವರ ಮುಖವನ್ನು ಡೀಪ್‌ಫೇಕ್‌ ಮಾಡಲಾಗಿದೆ. ಈ ವಿಡಿಯೋಗೆ ಅಶ್ಲೀಲ ಪದಗಳಿಂದ ಕ್ಯಾಪ್ಷನ್‌ ನೀಡಲಾಗುತ್ತಿದೆ. ಹಲವರು ಅಶ್ಲೀಲವಾಗಿ ಕಮೆಂಟ್‌ ಮಾಡುತ್ತಿದ್ದಾರೆ.

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ರೋಸಿ ಬ್ರಿನ್‌ ಅವರು ಇದು ತಮ್ಮದೇ ವಿಡಿಯೊ ಎಂದು ಖಚಿತಪಡಿಸಿದ್ದಾರೆ ಎಂದು ‘ದಿ ಕ್ವಿಂಟ್‌’ ಹಾಗೂ ‘ಬೂಮ್‌ಲೈವ್‌’ ಫ್ಯಾಕ್ಟ್‌ಚೆಕ್‌ ಪ್ರಕಟಿಸಿವೆ.

ನಟಿ ರಶ್ಮಿಕಾ ಮಂದಣ್ಣ ಡೀಪ್‌ ಫೇಕ್ ವಿಡಿಯೋ

ರಶ್ಮಿಕಾ ಮಂದಣ್ಣ ಅವರ ಪ್ರಕರಣದಲ್ಲಿ, ಡೀಪ್‌ಫೇಕ್ ವಿಡಿಯೋದಲ್ಲಿ ಯುವತಿಯೊಬ್ಬರು ಅಶ್ಲೀಲವಾಗಿ ಎದೆಯ ಭಾಗ ತೋರಿಸುವ ಕಪ್ಪು ಬಟ್ಟೆಯನ್ನು ಧರಿಸಿ ಲಿಫ್ಟ್‌ ಒಳಗೆ ಬರುವ ವಿಡಿಯೋಗೆ ನಟಿ ರಶ್ಮಿಕಾ ಮಂದಣ್ಣ ಅವರು ಹೋಲುವ ರೀತಿಯಲ್ಲಿ ಮಾರ್ಫ್ ಮಾಡಿ ಎಡಿಟ್ ಮಾಡಲಾಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿತ್ತು. ಈ ವೇಳೆ, ಹಲವು ಜನ ರಶ್ಮಿಕಾ ಮಂದಣ್ಣಗೆ ಬಟ್ಟೆ ಧರಿಸುವ ಬಗ್ಗೆ ಪಾಠ ಮಾಡಿದ್ದರು. ಬಳಿಕ ಇದು ಡೀಪ್ ಫೇಕ್ ವಿಡಿಯೋ ಎಂದು ಗೊತ್ತಾದಾಗ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.

ಮಾರ್ಫ್ ಮಾಡಿದ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆದ ಬಳಿಕ ಬಾಲಿವುಡ್ ಸ್ಟಾರ್ ಅಮಿತಾಭ್ ಬಚ್ಚನ್ ಕೂಡ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಶ್ಮಿಕಾ ಮಂದಣ್ಣ ಅವರು, “ಇದು ಅತ್ಯಂತ ಭಯಾನಕ” ಎಂದಿದ್ದರು.

ರಶ್ಮಿಕಾ ಮಂದಣ್ಣ ಅವರ ಮುಖ ಮಾರ್ಫ್ ಮಾಡಲಾದ ಮೂಲ ವಿಡಿಯೋದಲ್ಲಿರುವ ಜಾರಾ ಪಟೇಲ್ ಎಂಬುವವರು ಕೂಡ ಈ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಈ ನಕಲಿ ವಿಡಿಯೊಗೂ ತಮಗೂ ಸಂಬಂಧವಿಲ್ಲ ಎಂದು ಹೇಳಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ, ನ.10 ರಂದು ದೆಹಲಿ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66C ಮತ್ತು 66E ಸೇರಿದಂತೆ ನಾನಾ ಆಕ್ಟ್‌ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ, ತನಿಖೆ ಆರಂಭಿಸಿದ್ದರು.

ರಶ್ಮಿಕಾ ಅವರ ನಕಲಿ ವೀಡಿಯೊವನ್ನು ಅಪ್‌ಲೋಡ್ ಮಾಡಿದ ಬಗ್ಗೆ ವಿವರ ನೀಡುವಂತೆ ಪೊಲೀಸರು ಫೇಸ್‌ಬುಕ್‌ನ ಮೆಟಾಗೆ ಪತ್ರ ಬರೆದು ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಫೇಸ್ ಬುಕ್ ಇತ್ತೀಚೆಗಷ್ಟೇ ಮೊದಲ ಬಾರಿಗೆ ಈ ವಿಡಿಯೋ ಶೇರ್ ಮಾಡಿದವರ ವಿವರವನ್ನು ಪೊಲೀಸರಿಗೆ ನೀಡಿತ್ತು.

ರಶ್ಮಿಕಾ ನಕಲಿ ವೀಡಿಯೊವನ್ನು ಬಿಹಾರದ 19 ವರ್ಷದ ಯುವಕ ಮೊದಲು ಅವನ ಖಾತೆಯಿಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಈ ಬಗ್ಗೆ ಯುವಕನನ್ನು ಪೊಲೀಸರು ವಿಚಾರಣೆ ನಡೆಸಿದಾಗ ಆತ ‘ಈ ವಿಡಿಯೋವನ್ನು ಬೇರೊಂದು ಸಾಮಾಜಿಕ ಜಾಲತಾಣದಿಂದ ಡೌನ್‌ಲೋಡ್ ಮಾಡಿ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವುದಾಗಿ’ ಹೇಳಿದ್ದಾನೆ.

ಆದರೆ, ಈ ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಿಲ್ಲ, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟಿ ಕತ್ರಿನಾ ಕೈಫ್ ಅವರ ಡೀಪ್‌ಫೇಕ್ ಚಿತ್ರ

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್‌ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಬಾಲಿವುಡ್‌ ನಟಿ ಕತ್ರಿನಾ ಕೈಫ್‌ ಅವರ ಡೀಪ್‌ಫೇಕ್‌ ಚಿತ್ರ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಟೈಗರ್ 3 ಚಿತ್ರದ ಕತ್ರಿನಾ ಕೈಫ್ ಅವರ ಟವೆಲ್ ದೃಶ್ಯವನ್ನು ಮಾರ್ಫಿಂಗ್ ಮಾಡಿದ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ನಟ ಪುನೀತ್ ಹೆಸರು

ಇಷ್ಟೇ ಅಲ್ಲದೇ, ನಟಿಯರಾದ ಕಿಯಾರ ಅಡ್ವಾನಿ, ದೀಪಿಕಾ ಪಡುಕೋಣೆ, ಆಲಿಯಾ ಭಟ್‌ ಸೇರಿದಂತೆ ಹಲವು ನಟಿಯ ಡೀಪ್‌ಫೇಕ್‌ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ತಂತ್ರಜ್ಞಾನವನ್ನು ದುರುದ್ದೇಶಕ್ಕಾಗಿ ಬಳಸಿರುವುದರ ವಿರುದ್ಧ ಅಭಿಮಾನಿಗಳು, ಚಿತ್ರ ನಟರು ಮತ್ತು ಇತರ ಗಣ್ಯರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸಲು ಕೃತಕ ಬುದ್ಧಿಮತ್ತೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಏನಿದು ಡೀಪ್‌ ಫೇಕ್?

ಡೀಪ್‌ಫೇಕ್ ಎನ್ನುವುದು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಬಳಸಿಕೊಂಡು ರಚಿಸಲಾದ ಕುಶಲತೆಯಿಂದ ಮಾಡಿದ ವಿಡಿಯೊ, ಫೋಟೋ ಅಥವಾ ಆಡಿಯೊವಾಗಿದೆ. ಈ ಅತ್ಯಾಧುನಿಕ ಉಪಕರಣಗಳು ಮೂಲ ವ್ಯಕ್ತಿಯ ಹೋಲಿಕೆಯನ್ನು ಮತ್ತೊಬ್ಬರೊಂದಿಗೆ ಬದಲಿಸಲು ಅವಕಾಶ ಮಾಡಿಕೊಡುತ್ತವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X