ಬೆಂಗಳೂರು ಮೆಟ್ರೋ ಸ್ಟೇಷನ್ ಗೆ ಬಾಂಬ್‌ ಬೆದರಿಕೆ

Date:

ಬೆಂಗಳೂರು ಮೆಟ್ರೋದ ಒಂದು ಸ್ಟೇಷನ್ ಸ್ಫೋಟಿಸಿ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿ ಅಪರಿಚಿತ ವ್ಯಕ್ತಿಯೊಬ್ಬರು ಬಿಎಂಆರ್‌ಸಿಎಲ್‌ನ ಅಧಿಕೃತ ಇಮೇಲ್‌ಗೆ ಸಂದೇಶ ಕಳುಹಿಸಿದ್ದಾರೆ.

- Advertisement -

ಈ ಬೆದರಿಕೆ ಇಮೇಲ್ ನವೆಂಬರ್ 14ರ ರಾತ್ರಿ 11.30ರ ಸುಮಾರು ಬಂದಿದೆ. ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಿನ್ನೆಲೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಬಿಎಂಆರ್‌ಸಿಎಲ್ ಎಫ್‌ಐಆರ್ ದಾಖಲಿಸಿದೆ. ನವೆಂಬರ್ 14ರಂದೇ ಇಮೇಲ್ ಬಂದಿದ್ದರೂ ಇಮೇಲ್ ಪರಿಶೀಲನೆ ನಡೆಸಿ ಬಳಿಕ ಬಿಎಂಆರ್ ಸಿಎಲ್ ಅಧಿಕಾರಿ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ನನ್ನ ವಿಚ್ಛೇದಿತ ಪತ್ನಿಗೆ ಮೆಟ್ರೋ ಸಿಬ್ಬಂದಿ ಕಿರುಕುಳ ಕೊಡ್ತಿದ್ದಾರೆ. ನಿಮ್ಮ ಒಂದು ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡಬೇಕಾಗುತ್ತೆ. ನಾನು ಒಬ್ಬ ಉಗ್ರಗಾಮಿ ಇದ್ದಂತೆ, ಅದರಲ್ಲೂ ಕನ್ನಡಿಗರ ವಿರುದ್ಧ” ಎಂದು ಇಮೇಲ್‌ನಲ್ಲಿ ಅಪರಿಚಿತ ವ್ಯಕ್ತಿ ಬರೆದುಕೊಂಡಿದ್ದಾನೆ.

ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ. ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿಯ ಐಪಿ ವಿಳಾಸ, ಇಮೇಲ್ ಖಾತೆಯ ಮಾಹಿತಿ ಹಾಗೂ ಇತರ ತಾಂತ್ರಿಕ ವಿವರಗಳನ್ನು ಪಡೆದು ಸೈಬರ್ ತಜ್ಞರ ತಂಡ ಆಗುಂತಕ ಪತ್ತೆಗೆ ಮುಂದಾಗಿದ್ದಾರೆ.

ಬೆದರಿಕೆ ಹಿನ್ನೆಲೆ ಮೆಟ್ರೋ ನಿಲ್ದಾಣಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಮೆಟ್ರೋ ಸೇವೆ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಮೆಟ್ರೋ ನಿಲ್ದಾಣಕ್ಕೆ ಸ್ಫೋಟದ ಬೆದರಿಕೆ ಬಂದಿರುವುದು ಗಂಭೀರ ಆತಂಕಕ್ಕೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...