ಬೌರಿಂಗ್ ಆಸ್ಪತ್ರೆ ದುರಂತ : ಕಾರ್ಯಪಾಲಕ ಇಂಜಿನಿಯರ್ ಅಮಾನತುಗೊಳಿಸಲು ಸಿಎಂ ಸೂಚನೆ

Date:

ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

- Advertisement -

ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ದುರಂತದ ಹಿನ್ನೆಲೆಯಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ಜಿಬಿಎ ಆಯುಕ್ತರುಗಳ ಸಭೆ ಜರುಗಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದಿಂದ ನಿನ್ನೆ ಏಳು ಜನ ಮೃತಪಟ್ಟಿರುವ ಕುರಿತಂತೆ ಜಿಬಿಎ ಆಯುಕ್ತರೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು ಗೋಡೆಗೆ ಹಾನಿ ಆಗಲಿದೆ ಎಂದು ತಿಳಿದಿದ್ದರೂ ಕಾಮಗಾರಿ ನಡೆಯುವಾಗ ಮಣ್ಣು ಸುರಿದದ್ದು ಏಕೆ ಎಂದು ಪ್ರಶ್ನಿಸಿದರು.

ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದು ನೀವು ಏಕೆ ನೋಡಿಕೊಳ್ಳಲಿಲ್ಲ ಎಂದು ಆಸ್ಪತ್ರೆ ಮುಖ್ಯಸ್ಥರನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಸೂಚಿಸಿದ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದರು.

ನಿನ್ನೆ ಬೆಂಗಳೂರಿನಲ್ಲಿ ಉಂಟಾದ ಮಳೆಯಲ್ಲಿ ಸಾಕಷ್ಟು ಹಾನಿಯಾಗಿದ್ದು, 250 ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಏಳು ಜನ ಸಾವನ್ನಪ್ಪಿದ್ದಾರೆ. ಈಗಾಗಲೇ ಸತ್ತವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಸಿದ್ಧತೆ ಕೈಗೊಳ್ಳಿ

ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬೆಂಗಳೂರಿನ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು . ಒಣಗಿರುವ ಅಪಾಯಕಾರಿ ಮರಗಳ ರೆಂಬೆಗಳನ್ನು ಕತ್ತರಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ರಾಜಕಾಲುವೆಗಳಲ್ಲಿ ಹೂಳು ತೆಗೆಯುವುದು, ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದರು. ಮಳೆಯಿಂದ ರಸ್ತೆಯಲ್ಲಿ ಬಿದ್ದಿರುವ ಕಸ, ರೆಂಬೆಗಳನ್ನು ಕೂಡಲೇ ತೆರವು ಮಾಡಲು ಸೂಚಿಸಿದರು.

ಅಂಡರ್ ಪಾಸ್ ಗಳಲ್ಲಿ ಮಳೆ ನೀರು ನಿಲ್ಲದಂತೆ ಹಾಗೂ ಜನ ಅಂಡರ್ ಪಾಸ್ ಬಳಸದಂತೆ ಕೂಡಲೇ ಬ್ಯಾರಿಕೇಡ್ ಹಾಕಿ ಎಂದು ಅವರು ಸೂಚಿಸಿದರು.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಬಿಎ ಆಯುಕ್ತ ಮಹೇಶ್ವರ ರಾವ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | SIR ರದ್ದತಿಗೆ ಆಗ್ರಹ: ಚುನಾವಣಾ ಆಯೋಗ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...