ಉದ್ಯೋಗಾಕಾಂಕ್ಷಿಗಳಿಗೆ ತರಬೇತಿ-ಉದ್ಯೋಗ ಕೊಡಿಸುತ್ತಿದೆ BSVT: ಸಂತೋಷ್‌ ಕುಮಾರ್

Date:

ಉದ್ಯೋಗಾಕಾಂಕ್ಷಿಗಳಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗಗಳನ್ನು ಒದಗಿಸುವ ಸಂಸ್ಥೆ ‘ಭಾರತ್ ಸ್ಕೂಲ್ ಆಫ್ ವರ್ಟಿಕಲ್ ಟ್ರಾನ್ಸ್‌ಪೋಟ್ರೇಷನ್’ (BSVT) ತನ್ನ ಮೊದಲ ಬ್ಯಾಚ್‌ ವಿದ್ಯಾರ್ಥಿಗಳಿಗೆ ತರಬೇತಿ ಪೂರ್ಣಗೊಳಿಸಿದೆ. ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ದುಬೈ ಮತ್ತು ಯುರೋಪ್‌ನಲ್ಲಿನ ಕಂಪನಿಗಳಲ್ಲಿ ಉದ್ಯೋಗಗಳನ್ನು ಕೊಡಿಸಿದೆ ಎಂದು ಬಿಎಸ್‌ವಿಟಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ್ ಕುಮಾರ್ ಕೆ.ಎಸ್ ತಿಳಿಸಿದ್ದಾರೆ.

- Advertisement -

2024ರಲ್ಲಿ ಆರಂಭವಾದ ಸಂಸ್ಥೆಯು ತಮ್ಮ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ಯಶಸ್ವಿ ತರಬೇತಿ ಮತ್ತು ಉದ್ಯೋಗಗಳನ್ನು ಕೊಡಿಸಿದ್ದನ್ನು ಗುರುತಿಸಲು ಬೆಂಗಳೂರಿನಲ್ಲಿ ಶನಿವಾರ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಶಾಸಕ ಎನ್‌.ಎ ಹ್ಯಾರಿಸ್, ಮಾಜಿ ಐಪಿಎಸ್‌ ಅಧಿಕಾರಿ, ಬಿಜೆಪಿ ಮುಖಂಡ ಭಾಸ್ಕರ್ ರಾವ್ ಸೇರಿದಂತೆ ಇತರರು ಭಾಗಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
bsvt1

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಾಧನೆ ಬಗ್ಗೆ ವಿವರಿಸಿದ ಸಂತೋಷ್‌ ಕುಮಾರ್, “ಬೆಂಗಳೂರಿನಲ್ಲಿ ಕಳೆದ ವರ್ಷ  ಆರಂಭವಾದ ಬಿಎಸ್‌ವಿಟಿ, ತನ್ನ ಮೊದಲ ಬ್ಯಾಚ್ ವಿದ್ಯಾರ್ಥಿಗಳ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ತರಬೇತಿ ಪಡೆದ ಎಲ್ಲ ವಿದ್ಯಾರ್ಥಿಗಳು ದುಬೈ ಮತ್ತು ಯುರೋಪ್‌ನಲ್ಲಿರುವ ಪ್ರಮುಖ ಕಂಪನಿಗಳಲ್ಲಿ ಉದ್ಯೋಗ ಪಡೆದಿದ್ದಾರೆ. ಇನ್ನೂ ಹಲವಾರು ವಿದ್ಯಾರ್ಥಿಗಳು ತಮ್ಮ ವೃತ್ತಿಪರ ಬೆಳವಣಿಗೆಯನ್ನು ಬಲಪಡಿಸಲು ಭಾರತದ ಪ್ರಮುಖ ಎಂಎನ್‌ಸಿ ಕಂಪನಿಗಳಲ್ಲಿ ‘ಇಂಟರ್ನ್‌ಶಿಪ್’ಗೆ ಸೇರಿದ್ದಾರೆ” ಎಂದು ತಿಳಿಸಿದ್ದಾರೆ.

“ಜಗತ್ತಿನಲ್ಲಿ ವೇಗವಾಗಿ ಬೆಳೆಯುತ್ತಿರುವ ಎಂಜಿನಿಯರಿಂಗ್ ವಲಯದಲ್ಲಿ ಯಶಸ್ವಿ ವೃತ್ತಿಜೀವನ ಕಟ್ಟಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಅಗತ್ಯ ತರಬೇತಿಯನ್ನು ಬಿಎಸ್‌ವಿಟಿ ನೀಡುತ್ತಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಸಹಯೋಗದಲ್ಲಿ ಯುವಜನರಿಗೆ ಅಗತ್ಯ ತರಬೇತಿ, ಮಾರ್ಗದರ್ಶನ ಹಾಗೂ ಉದ್ಯೋಗಗಳನ್ನು ಕೊಡಿಸುತ್ತಿದೆ. ಪಿಯುಸಿಯಲ್ಲಿ ಉತ್ತೀರ್ಣರಾದ ಮತ್ತು ಪದವಿಗಳಲ್ಲಿ ಅರ್ಧಕ್ಕೆ ತಮ್ಮ ವಾಸಂಗವನ್ನು ಕಡಿತಗೊಳಿಸಿದ ಅಭ್ಯರ್ಥಿಗಳು ನಮ್ಮಲ್ಲಿ ತರಬೇತಿಗೆ ಸೇರಬಹುದು” ಎಂದು ಅವರು ತಿಳಿಸಿದ್ದಾರೆ.

bstv2

BSVT ವಿನ ಪಠ್ಯ ಕ್ರಮವು ಅತ್ಯಾಧುನಿಕ ತಾಂತ್ರಿಕ ತರಬೇತಿ, ಉದ್ಯಮ ತಜ್ಞರನ್ನೊಳಗೊಂಡ ಗಣ್ಯರಿಂದ ಪ್ರಾಯೋಗಿಕ ಮಾರ್ಗದರ್ಶನದಿಂದ ಪ್ರಮುಖ ಉತ್ತಮ ಕಂಪನಿಗಳಲ್ಲಿ 100% ಉದ್ಯೋಗ ನೀಡಲಾಗುತ್ತದೆ ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮೊಹಮ್ಮದ್ ಮುಷ್ತಾಕ್ ಸೇರಿದಂತೆ ಮೆಹರುಸ್ ಖಾನ್, ಶಾಲಿನಿ ಸಿಂಗ್, ಶ್ರೀ ದೇವಿ, ಆಸೀಫ್ ಹಯಾತ್ ಮತ್ತು ಇತರ ಗಣ್ಯ ವ್ಯಕ್ತಿಗಳು ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...