ಉದ್ಯಮಿ ನಾಯ್ಡು ಕಾರಿಗೆ ಬೆಂಕಿ ಪ್ರಕರಣ; ಮುತ್ತಪ್ಪ ರೈ ಮಗ ಸೇರಿ 8 ಮಂದಿ ವಿರುದ್ಧ ಚಾರ್ಜ್‌ಶೀಟ್

Date:

Advertisements
  • ನ್ಯಾಯಾಲಯಕ್ಕೆ 188 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ ಸದಾಶಿವನಗರ ಪೊಲೀಸರು
  • 2021ರಲ್ಲಿ ಕೋಟ್ಯಂ ರ ಬೆಲೆ ಬಾಳುವ ಐಷಾರಾಮಿ ಕಾರಿಗೆ ಬೆಂಕಿದ್ದ ಕಿಡಿಗೇಡಿಗಳು

ರಾಜಧಾನಿ ಬೆಂಗಳೂರಿನಲ್ಲಿ ಉದ್ಯಮಿ ಶ್ರೀನಿವಾಸ್ ನಾಯ್ಡು ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಸದಾಶಿವನಗರ ಪೊಲೀಸರು 188 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ.

ಮುತ್ತಪ್ಪ ರೈ ಮಗ ರಿಕ್ಕಿ ರೈ, ನಾರಾಯಣಸ್ವಾಮಿ, ಅಭಿನಂದನ್​, ಮುನಿಯಪ್ಪ, ಗಣೇಶ್​​, ಶಶಾಂಕ್​, ನಿರ್ಮಲ್​​, ರೋಹಿತ್​​, ರಾಕೇಶ್​​ ಸೇರಿದಂತೆ ಒಟ್ಟು 8 ಜನರ ಹೆಸರನ್ನು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಮಾಡಲಾಗಿದೆ.

ಏನಿದು ಹಿನ್ನೆಲೆ?

Advertisements

ಒಂದಾನೊಂದು ಕಾಲದಲ್ಲಿ ಬೆಂಗಳೂರಿನ ಕುಖ್ಯಾತ ರೌಡಿ ಮುತ್ತಪ್ಪ ರೈ ಮಗ ರಿಕ್ಕಿ ರೈ ಹಾಗೂ ಶ್ರೀನಿವಾಸ್ ನಾಯ್ಡು ಆತ್ಮೀಯ ಸ್ನೇಹಿತರಾಗಿದ್ದರು. ಮುತ್ತಪ್ಪ ರೈ ನಿಧನದ ಬಳಿಕ ರೈ ಗ್ರೂಪ್‌ನಿಂದ ಶ್ರೀನಿವಾಸ್ ನಾಯ್ಡು ಹೊರಬಂದಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಾಳಿ-ಮಳೆಗೆ ನೆಲಕಚ್ಚಿದ 546 ವಿದ್ಯುತ್ ಕಂಬಗಳು

ಇದರಿಂದ ಕೋಪಗೊಂಡಿದ್ದ ರಿಕ್ಕಿ ರೈ ನಾಯ್ಡುನನ್ನು ದ್ವೇಷ ಮಾಡಲು ಪ್ರಾರಂಭಿಸಿದ್ದನು. ನಾಯ್ಡು ಬಳಸುತ್ತಿದ್ದ ಬ್ಲಾಕ್ ಕಲರ್ ರೇಂಜ್ ರೋವರ್ ಕಾರನ್ನು ನೋಡಿ ಅವನ ಕೋಪ ಇನ್ನಷ್ಟು ಹೆಚ್ಚಿತ್ತು. ಈ ಬಗ್ಗೆ ರೈ ನಾಯ್ಡುಗೆ ತಾಕೀತು ಮಾಡಿದ್ದನು. 2021ರ ಅಕ್ಟೋಬರ್‌ನಲ್ಲಿ ಸದಾಶಿವನಗರದ ಸಪ್ತಗಿರಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ಶ್ರೀನಿವಾಸ್ ನಾಯ್ಡುಗೆ ಸೇರಿದ ಕೋಟ್ಯಂತರ ರೂ ಬೆಲೆ ಬಾಳುವ ಐಷಾರಾಮಿ ಕಾರಿಗೆ ನಾರಾಯಣ ಸ್ವಾಮಿ ಎಂಬಾತನ ಮೂಲಕ ಬೆಂಕಿ ಹಚ್ಚಿ ಪರಾರಿಯಾಗಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X