ಚಪ್ಪಲಿ ಧರಿಸಿ ರಾಷ್ಟ್ರಧ್ವಜದ ಮೇಲೆ ನಿಂತ ಪ್ರಕರಣ; ಶಾಲಾ ಪ್ರಾಂಶುಪಾಲರ ವಿರುದ್ಧದ ದೂರು ರದ್ದು: ಹೈಕೋರ್ಟ್

Date:

ಗಾಂಧಿ ಜಯಂತಿಯ ದಿನದಂದು ಶಾಲೆಯ ಪ್ರಾಂಶುಪಾಲರು ಚಪ್ಪಲಿ ಧರಿಸಿ ರಾಷ್ಟ್ರಧ್ವಜದ ಮೇಲೆ ನಿಂತಿರುವ ತಿರುಚಿದ ಚಿತ್ರವನ್ನು ವಿದ್ಯಾರ್ಥಿಯೊಬ್ಬರು ಹಂಚಿಕೊಂಡಿದ್ದರು. ಆ ಚಿತ್ರದ ಆಧಾರದ ಮೇಲೆ ಪ್ರಾಂಶುಪಾಲರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

- Advertisement -

ಬೆಂಗಳೂರಿನ ನಾಗಸಂದ್ರದ ಸರ್ಕಾರಿ ಪ್ರೌಢಶಾಲೆಯ ಪ್ರಾಂಶುಪಾಲ ವೇಣುಗೋಪಾಲ್ ಬಿ.ಸಿ ವಿರುದ್ಧ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪ ಹೇಳಿಬಂದಿತ್ತು. ಅದೇ ಶಾಲೆಯ ವಿದ್ಯಾರ್ಥಿಯೊಬ್ಬ ತಮ್ಮ ಪ್ರಾಂಶುಪಾಲರು ಚಪ್ಪಲಿ ಧರಿಸಿ ರಾಷ್ಟ್ರಧ್ವಜದ ಮೇಲೆ ನಿಂತಿರುವಂತೆ ಚಿತ್ರವನ್ನು ತಿರುಚಿ ತಮ್ಮ ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ ಹಂಚಿಕೊಂಡಿದ್ದರು. ಆ ಚಿತ್ರವನ್ನು ಆಧರಿಸಿ 2024ರ ಅಕ್ಟೋಬರ್ 5ರಂದು ಮಾನವ ಹಕ್ಕುಗಳ ರಕ್ಷಣಾ ಸಮಿತಿಯ ಅಧ್ಯಕ್ಷರು ಬಾಗಲಗುಂಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿದ ಪ್ರಾಂಶುಪಾಲರ ವಿರುದ್ಧ ‘ರಾಷ್ಟ್ರೀಯ ಸಂಕೇತಗಳ ಅವಮಾನ ತಡೆ ಕಾಯ್ದೆ-1971ರ ಸೆಕ್ಷನ್ 2ರ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ತಮ್ಮ ವಿರುದ್ಧ ದಾಖಲಾದ ಪ್ರಕರಣದ ಕಾನೂನುಬದ್ದತೆಯನ್ನುಪ್ರಶ್ನಿಸಿ ವೇಣುಗೋಪಾಲ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.ತಮ್ಮ ಚಿತ್ರವನ್ನು ಎಡಿಟ್‌ ಮಾಡಿ, ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವಂತೆ ಚಿತ್ರಿಸಲಾಗಿದೆ ಎಂದು ವಾದಿಸಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು, ಅರ್ಜಿದಾರ ಪ್ರಾಂಶುಪಾಲರು ಸಲ್ಲಿಸಿದ್ದ ಮೂಲ ಚಿತ್ರ ಮತ್ತು ಎಡಿಟ್‌ ಮಾಡಿದ ಚಿತ್ರಗಳನ್ನು ಹೋಲಿಸಿ ಪರಿಶೀಲಿಸಿದ್ದಾರೆ. ಬೇರೆಡೆ ತೆಗೆದ ಚಿತ್ರವನ್ನು ಎಡಿಟ್‌ ಮಾಡಲಾಗಿದೆ ಎಂಬುದನ್ನು ಗಮನಿಸಿದ್ದಾರೆ. ಬಳಿಕ, ಪ್ರಾಂಶುಪಾಲರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿದ್ದಾರೆ.

ಪ್ರಾಂಶುಪಾಲರ ಚಿತ್ರವನ್ನು ಸಂಪಾದಿಸಿದ್ದಾರೆ ಎನ್ನಲಾದ ವಿದ್ಯಾರ್ಥಿ ಕೂಡ, ಘಟನೆ ಬೆಳಕಿಗೆ ಬಂದ ನಂತರ ಲಿಖಿತ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...

ಹಿಂಗಾರು ಆರ್ಭಟ; ಮುಂದಿನ 4 ದಿನ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿ, ಹಿಂಗಾರು ಮಾರುತಗಳ ಚಟುವಟಿಕೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು...