ಸಮುದಾಯಗಳ ನಿರೀಕ್ಷೆ ಈಡೇರಿಸುವುದೇ ‘ಜಾತಿ ಸಮೀಕ್ಷೆ–2’; ಶನಿವಾರ ವಿಚಾರ ಸಂಕಿರಣ

Date:

ಕರ್ನಾಟಕ ಸರ್ಕಾರವು 2ನೇ ಜಾತಿ ಸಮೀಕ್ಷೆ ನಡೆಸಲು ತೀರ್ಮಾನಿಸಿದೆ. ಅದಕ್ಕಾಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ತಯಾರಿ ಆರಂಭಿಸಿದೆ. ಈ ಸಮೀಕ್ಷೆಯು ರಾಜ್ಯದ ಎಲ್ಲ ಸಮುದಾಯಗಳ ನಿರೀಕ್ಷೆಗಳನ್ನು ಈಡೇರಿಸುಬಹುದೇ ಎಂಬ ಚರ್ಚೆಗಳು ನಡೆಯುತ್ತಿದೆ. ಈ ಬಗ್ಗೆ ಚರ್ಚಿಸುವ ಉದ್ದೇಶದಿಂದ ಜಾಗೃತ ಕರ್ನಾಟಕ ಸಂಘಟನೆಯು ಆಗಸ್ಟ್‌ 30ರ ಶನಿವಾರ ‘ವಿಚಾರ ಸಂಕಿರಣವನ್ನು ಆಯೋಜಿಸಿದೆ. ಕಾರ್ಯಕ್ರಮವು ಬೆಂಗಳೂರಿನ ಗಾಂಧಿಭವನದಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

- Advertisement -

ಕಾರ್ಯಕ್ರಮದ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಜಾಗೃತ ಕರ್ನಾಟಕದ ಧರಣೀಶ್‌ ಬೂಕನಕೆರೆ ಮತ್ತು ಪೃಥ್ವಿರಾಜ್‌, “ಜಾತಿ ಸಮೀಕ್ಷೆಯಲ್ಲಿ ವಿವಿಧ ಸಮುದಾಯಗಳ ಸಂಖ್ಯೆಯ ಪ್ರಶ್ನೆಯೂ ಬರುತ್ತದೆ. ಅಂತಿಮವಾಗಿ, ಸಾಮಾಜಿಕ ನ್ಯಾಯದ ಕುರಿತ ಈ ಮಹತ್ವದ ಪ್ರಕ್ರಿಯೆಯು, ಸಂಖ್ಯೆ, ಮೀಸಲಾತಿಯ ಪ್ರಮಾಣ, ರಾಜಕೀಯ ಪ್ರಾಬಲ್ಯ ಇತ್ಯಾದಿಗಳ ಮೇಲಾಟದಲ್ಲಿ ದಿಕ್ಕು ತಪ್ಪುತ್ತದೆ. ಹೀಗಾಗಬಾರದು ಎಂದರೆ, ನಾಡಿನ ಸಮಸ್ತ ಸಮುದಾಯಗಳೂ ಇದರಲ್ಲಿ ಸಕಾರಾತ್ಮಕವಾಗಿ ಪಾಲ್ಗೊಳ್ಳುವುದು ಅಗತ್ಯ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಆದ್ದರಿಂದ, ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ, ಜಾತಿ ಸಮೀಕ್ಷೆ ಕುರಿತು ಪ್ರಾಧ್ಯಾಪಕ ಡಾ. ಎ ನಾರಾಯಣ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ‘ಜಾತಿ ಸಮೀಕ್ಷೆ ಏಕೆ ಬೇಕು? ಸರ್ವ ಸಮುದಾಯಗಳಿಗೂ ಇದರಿಂದ ಇರುವ ಅನುಕೂಲಗಳೇನು?’ ಎಂಬ ವಿಚಾರದ ಬಗ್ಗೆ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ ಅತೀಕ್ ಮತ್ತು ಶೋಷಿತ ವರ್ಗಗಳ ಒಕ್ಕೂಟದ ರಾಮಚಂದ್ರಪ್ಪ ಅವರು ವಿಚಾರ ಮಂಡಿಸಲಿದ್ದಾರೆ. ‘ಜಾತಿ ಸಮೀಕ್ಷೆ ಸಮರ್ಪಕವಾಗಿ ನಡೆಯಲು ಏನು ಮಾಡಬೇಕು?’ ಎಂಬ ವಿಷಯದ ಬಗ್ಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಕೆ.ಎನ್‌ ಲಿಂಗಪ್ಪ ಮತ್ತು ವಕೀಲೆ ರಾಜಲಕ್ಷ್ಮಿ ಅಂಕಲಗಿ ಮಾತನಾಡಲಿದ್ದಾರೆ” ಎಂದು ತಿಳಿಸಿದ್ದಾರೆ.

WhatsApp Image 2025 08 29 at 1.51.07 PM

“ಮಧ್ಯಾಹ್ನದ ಗೋಷ್ಠಿಯಲ್ಲಿ ‘ಜಾತಿ ಸಮೀಕ್ಷೆಯ ಫಲಿತಾಂಶ ಪರಿಣಾಮಕಾರಿಯಾಗಿ ಜಾರಿಯಾಗಲು ಏನು ಮಾಡಬೇಕು?’ ಎಂಬ ವಿಚಾರದ ಕುರಿತು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ. ಸಿ.ಎಸ್‌ ದ್ವಾರಕಾನಾಥ್, ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎನ್ ಶ್ರೀನಿವಾಸಾಚಾರಿ, ಕಾಂಗ್ರೆಸ್‌ ಮುಖಂಡ ರವಿ ಬೋಸರಾಜು, ಅಹಿಂದ ಮುಖಂಡ ಸಾಸಲು ಸತೀಶ್, ಕೆ.ಜೆ ಜಯಲಕ್ಷ್ಮಿ ನಾಯಕ, ಇನ್‌ಸೈಟ್‌ ಅಕಾಡೆಮಿಯ ಜಿ.ಬಿ ವಿಜಯ್, ಬಸವ ಚಿಂತಕ ಸಿದ್ದಪ್ಪ ಮೂಲಗೆ ಮಾತನಾಡಲಿದ್ದಾರೆ” ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.

ಕಾರ್ಯಕ್ರಮವು ಶನಿವಾರ ಬೆಳಗ್ಗೆ 10:30ಕ್ಕೆ ಆರಂಭವಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...