ಜೂನ್‌ 12 ಅಥವಾ 14 ರಂದು ಸಿಇಟಿ ಪ್ರವೇಶ ಪರೀಕ್ಷೆಯ ಫಲಿತಾಂಶ

Date:

  • ಪರೀಕ್ಷೆಗೆ ಹಾಜರಾಗಿದ್ದ 2 ಲಕ್ಷದ 39 ಸಾವಿರದ 716 ವಿದ್ಯಾರ್ಥಿಗಳು
  • ಕೆಲವೇ ದಿನಗಳಲ್ಲಿ ಅಧಿಕೃತ ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ

2023ರ ಯುಜಿಸಿಇಟಿ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಜೂ.12 ಅಥವಾ 14 ರಂದು ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ಧಾರ ಮಾಡಿರುವುದಾಗಿ ಕೆಇಎ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದಾರೆ.

ಫಲಿತಾಂಶವನ್ನು ಪ್ರಕಟಿಸಲು ಕೆಇಎ ಅಧಿಕಾರಿಗಳು ಅಂತಿಮ ಹಂತದ ಸಿದ್ಧತೆ ಮಾಡಿಕೊಂಡಿದ್ದಾರೆ. ಒಟ್ಟು 2 ಲಕ್ಷದ 39 ಸಾವಿರದ 716 ವಿದ್ಯಾರ್ಥಿಗಳು ಅಂದರೆ, ಶೇ. 93ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ತಿಳಿಸಿದ್ದಾರೆ.

ಮೇ 21, 22 ರಂದು ‌ಸಿಇಟಿ ಪರೀಕ್ಷೆ ನಡೆದಿತ್ತು. ಕೀ ಉತ್ತರಗಳನ್ನು ಈಗಾಗಲೇ ಪ್ರಕಟಿಸಲಾಗಿದೆ. ಕೀ ಉತ್ತರಗಳನ್ನು ಪರೀಕ್ಷಿಸಿ ತಮಗೆ ಫಲಿತಾಂಶ ಎಷ್ಟು ಲಭಿಸಿರಬಹುದು ಎಂದು ಯೋಚಿಸುತ್ತಿರುವ ವಿದ್ಯಾರ್ಥಿಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಅಧಿಕೃತ ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ ದೊರೆಯಲಿದೆ.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟವಾದ ದಿನ ಕೆಇಎ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/ಗೆ ಭೇಟಿ ನೀಡಿ ಫಲಿತಾಂಶ ಪಡೆಯಬಹುದಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಯುಜಿಸಿಇಟಿ ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆಯಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಈ ಪರೀಕ್ಷೆಯನ್ನು ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್‌ಸಿ ನರ್ಸಿಂಗ್ ಸೇರಿದಂತೆ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಅಭಿ-ಅವಿ ಮದುವೆ | ನೂತನ ವಧು-ವರರಿಗೆ ಆಶೀರ್ವದಿಸಿದ ಗಣ್ಯರು

ಯುಜಿಸಿಇಟಿ-2023ರ ಫಲಿತಾಂಶವನ್ನು ಆನ್‌ಲೈನ್‌ ಮೂಲಕ ಪ್ರಕಟಿಸಲಾಗುತ್ತದೆ. ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/ ಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ. ಕೋರ್ಸ್‌ಗಳಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ಶ್ರೇಣಿಗಳನ್ನು ನಿಗದಿಪಡಿಸಲಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿನಗರದಲ್ಲಿ 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿಷೇಧ: ಡಿಸಿಎಂ ಡಿ.ಕೆ. ಶಿವಕುಮಾರ್

“ಸುಗಮ ಸಂಚಾರ ಹಾಗೂ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಗಾಂಧಿನಗರದ 1 ಕಿ.ಮೀ...

ಬೆಂಗಳೂರು | 65 ಕೆಜಿಗೂ ಅಧಿಕ ಗಾಂಜಾ ವಶ ; ಇಬ್ಬರ ಬಂಧನ

ಐದು ದಿನಗಳ ಕಾಲ ಚಲಿಸುತ್ತಿದ್ದ ರೈಲುಗಳ ಮೇಲೆ ದಾಳಿ ನಡೆಸಿ 65.47ಕೆಜಿ...

ದರ್ಶನ್ ಪ್ರಕರಣ | ಮೊಬೈಲ್‌ಗಾಗಿ ಪೌರಕಾರ್ಮಿಕರನ್ನು ರಾಜಕಾಲುವೆಗೆ ಇಳಿಸಿದ ಪೊಲೀಸರು; ದಸಂಸ ಖಂಡನೆ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಕ್ಷನಾಶದ ಸಲುವಾಗಿ ಮೃತ ವ್ಯಕ್ತಿ...

ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣದ ಅಗತ್ಯವಿದೆ: ಸಚಿವ ಎಂ ಬಿ ಪಾಟೀಲ್‌

ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ...