ಏ.18 ರಿಂದ ಸಿಇಟಿ ಪರೀಕ್ಷೆ ಆರಂಭ : ಮಾರ್ಗಸೂಚಿಗಳೇನು?

Date:

Advertisements

ವೃತ್ತಿಪರ ಕೋರ್ಸ್ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏ.18 ರಿಂದ ಆರಂಭವಾಗಲಿದೆ. ಈ ಸಿಇಟಿ ಪರೀಕ್ಷೆ ಮೂರು ದಿನ ನಡೆಯಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಅಲ್ಲದೇ, ಈ ಬಾರಿ ಒಟ್ಟು 3.27 ಲಕ್ಷ ವಿದ್ಯಾರ್ಥಿಗಳು ಸಿಇಟಿ ಬರೆಯಲು ಅರ್ಹತೆ ಹೊಂದಿದ್ದಾರೆ.

  • ಗುರುವಾರ (ಏಪ್ರಿಲ್‌ 18) ಬೆಳಿಗ್ಗೆ 10:30ರಿಂದ 11: 50 ಗಂಟೆವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2:30 ರಿಂದ 3:50ರವರೆಗೆ ಗಣಿತ ಪರೀಕ್ಷೆಗಳು ನಡೆಯಲಿವೆ.
  • .19ರಂದು ಬೆಳಿಗ್ಗೆ 10:30ರಿಂದ 11:50 ಗಂಟೆವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2:30 ರಿಂದ 3:50ರವರೆಗೆ ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
  • .20ರಂದು ಹೊರನಾಡು ಹಾಗೂ ಗಡಿನಾಡು ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ಬೆಂಗಳೂರು, ಮಂಗಳೂರು, ಬೆಳಗಾವಿಯಲ್ಲಿ ನಡೆಯಲಿದೆ.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಕೆಲವು ಷರತ್ತು ಹಾಗೂ ಸೂಚನೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪತ್ರದೊಂದಿಗೆ ನೀಡಿದೆ. ಸಿಇಟಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ದ್ವಿತೀಯ ಪಿಯುಸಿ ಪ್ರವೇಶ ಪತ್ರ ಯಾವುದಾದರೂ ತೆಗೆದುಕೊಂಡು ಹೋಗಬೇಕು. ಪರೀಕ್ಷೆಗೆ ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ನು ಮಾತ್ರ ಬಳಸಬೇಕು ಎಂದು ತಿಳಿಸಿದೆ.

Advertisements

ಪರೀಕ್ಷಾ ಕೊಠಡಿಗೆ ಕೈಗಡಿಯಾರ, ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂಥ್, ಸ್ಲೈಡ್ ರೂಲ್ಸ್, ಕ್ಯಾಲ್ಕ್ಯುಲೇಟರ್, ವೈಟ್ಫ್ಲ್ಯೂಯಿಡ್, ವೈರ್ಲೆಸ್ ಸೆಟ್ಸ್, ಪೇಪರ್ ಚೀಟಿ, ಬುಕ್ಸ್, ಪುಸ್ತಕ ಸೇರಿದಂತೆ ಯಾವುದೇ ರೀತಿಯ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾಹಿತಿ ಪ್ರಕಾರ 3,81,887 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸ್ಗಳಿಗೆ ಸೇರಬಯಸುವವರು ಸೇರಿದ್ದಾರೆ. ಬೆಂಗಳೂರಿನ 170 ಕೇಂದ್ರಗಳು ಸೇರಿದಂತೆ ರಾಜ್ಯದಲ್ಲಿ 738 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳಲ್ಲಿ 3,49,637 ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಿದ್ದಾರೆ. 3,18.865 ವಿದ್ಯಾರ್ಥಿಗಳು ಸಿಇಟಿ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

ವಿದ್ಯಾರ್ಥಿಗಳು ಪರೀಕ್ಷೆಯು ಪ್ರಾರಂಭವಾಗುವ ಮೊದಲನೆಯ ಬೆಲ್ ಆಗುವ ಕನಿಷ್ಟ ಎರಡು ಗಂಟೆಗೂ ಮೊದಲು ಪರೀಕ್ಷಾ ಕೇಂದ್ರದ ಆವರಣದಲ್ಲಿ ಹಾಜರಿರಬೇಕು. ಮೂರನೇ ಬೆಲ್ ಆದ ನಂತರ ಪರೀಕ್ಷಾ ಕೊಠಡಿ ಪ್ರವೇಶಿಸಲು ಅಭ್ಯರ್ಥಿಗಳಿಗೆ ಅವಕಾಶವಿಲ್ಲ ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X