ಏ.18 ರಿಂದ ಸಿಇಟಿ ಪರೀಕ್ಷೆ ಆರಂಭ : ಮಾರ್ಗಸೂಚಿಗಳೇನು?

Date:

ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏ.18 ರಿಂದ ಆರಂಭವಾಗಲಿದೆ. ಈ ಸಿಇಟಿ ಪರೀಕ್ಷೆ ಮೂರು ದಿನ ನಡೆಯಲಿದೆ.

- Advertisement -

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಅಲ್ಲದೇ, ಈ ಬಾರಿ ಒಟ್ಟು 3.27 ಲಕ್ಷ ವಿದ್ಯಾರ್ಥಿಗಳು ಸಿಇಟಿ ಬರೆಯಲು ಅರ್ಹತೆ ಹೊಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
  • ಗುರುವಾರ (ಏಪ್ರಿಲ್‌ 18) ಬೆಳಿಗ್ಗೆ 10:30ರಿಂದ 11: 50 ಗಂಟೆವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2:30 ರಿಂದ 3:50ರವರೆಗೆ ಗಣಿತ ಪರೀಕ್ಷೆಗಳು ನಡೆಯಲಿವೆ.
  • ಏ.19ರಂದು ಬೆಳಿಗ್ಗೆ 10:30ರಿಂದ 11:50 ಗಂಟೆವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2:30 ರಿಂದ 3:50ರವರೆಗೆ ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
  • ಏ.20ರಂದು ಹೊರನಾಡು ಹಾಗೂ ಗಡಿನಾಡು ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ಬೆಂಗಳೂರು, ಮಂಗಳೂರು, ಬೆಳಗಾವಿಯಲ್ಲಿ ನಡೆಯಲಿದೆ.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಕೆಲವು ಷರತ್ತು ಹಾಗೂ ಸೂಚನೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪತ್ರದೊಂದಿಗೆ ನೀಡಿದೆ. ಸಿಇಟಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಡ್ರೈವಿಂಗ್ ಲೈಸೆನ್ಸ್, ಪಾಸ್‍ ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ದ್ವಿತೀಯ ಪಿಯುಸಿ ಪ್ರವೇಶ ಪತ್ರ ಯಾವುದಾದರೂ ತೆಗೆದುಕೊಂಡು ಹೋಗಬೇಕು. ಪರೀಕ್ಷೆಗೆ ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ನು ಮಾತ್ರ ಬಳಸಬೇಕು ಎಂದು ತಿಳಿಸಿದೆ.

ಪರೀಕ್ಷಾ ಕೊಠಡಿಗೆ ಕೈಗಡಿಯಾರ, ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂಥ್, ಸ್ಲೈಡ್ ರೂಲ್ಸ್, ಕ್ಯಾಲ್ಕ್ಯುಲೇಟರ್, ವೈಟ್‍ಫ್ಲ್ಯೂಯಿಡ್, ವೈರ್ಲೆಸ್ ಸೆಟ್ಸ್, ಪೇಪರ್ ಚೀಟಿ, ಬುಕ್ಸ್, ಪುಸ್ತಕ ಸೇರಿದಂತೆ ಯಾವುದೇ ರೀತಿಯ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾಹಿತಿ ಪ್ರಕಾರ 3,81,887 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸ್‍ಗಳಿಗೆ ಸೇರಬಯಸುವವರು ಸೇರಿದ್ದಾರೆ. ಬೆಂಗಳೂರಿನ 170 ಕೇಂದ್ರಗಳು ಸೇರಿದಂತೆ ರಾಜ್ಯದಲ್ಲಿ 738 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳಲ್ಲಿ 3,49,637 ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಿದ್ದಾರೆ. 3,18.865 ವಿದ್ಯಾರ್ಥಿಗಳು ಸಿಇಟಿ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

ವಿದ್ಯಾರ್ಥಿಗಳು ಪರೀಕ್ಷೆಯು ಪ್ರಾರಂಭವಾಗುವ ಮೊದಲನೆಯ ಬೆಲ್ ಆಗುವ ಕನಿಷ್ಟ ಎರಡು ಗಂಟೆಗೂ ಮೊದಲು ಪರೀಕ್ಷಾ ಕೇಂದ್ರದ ಆವರಣದಲ್ಲಿ ಹಾಜರಿರಬೇಕು. ಮೂರನೇ ಬೆಲ್ ಆದ ನಂತರ ಪರೀಕ್ಷಾ ಕೊಠಡಿ ಪ್ರವೇಶಿಸಲು ಅಭ್ಯರ್ಥಿಗಳಿಗೆ ಅವಕಾಶವಿಲ್ಲ ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...