ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿರುವ ಅನುಮಾನ ಇದೆ: ಮುಖ್ಯಮಂತ್ರಿ ಚಂದ್ರು

Date:

  • ಅಧಿಕಾರಿಗಳ ಮೇಲೆ ಒತ್ತಡ ಹೇರಿ ವಸೂಲಿ ಮಾಡುವುದೊಂದೇ ಈಗಿರುವ ಏಕೈಕ ಮಾರ್ಗ
  • ಚುನಾವಣಾ ಅಕ್ರಮಗಳಿಗಾಗಿ ಖರ್ಚು ಮಾಡಿರುವ ಹಣವನ್ನು ವಸೂಲಿ ಮಾಡುವ ಧಾವಂತ

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳುಗಳಲ್ಲಿಯೇ ಎಗ್ಗಿಲ್ಲದ ವರ್ಗಾವಣೆ ದಂಧೆ ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಸರ್ಕಾರದ ಮಂತ್ರಿ ಮಹೋದಯಗಳ ವರ್ಗಾವಣೆ ದಂಧೆ ನಿಜವೆಂಬುದು ಅವರದೇ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ್‌ ಅವರ ಪತ್ರದಿಂದ ಸಾಬೀತಾಗುತ್ತಿದೆ. ಸರ್ಕಾರವು ವರ್ಗಾವಣೆ ದಂಧೆಯಲ್ಲಿ ಮುಳುಗಿರುವ ಅನುಮಾನ ಇದೆ” ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ನವರಿಗೆ ಕೇವಲ ಆಮ್ ಆದ್ಮಿ ಪಕ್ಷದ ಕಾರ್ಯಕ್ರಮಗಳನ್ನು ಕಳ್ಳತನ ಮಾಡುವುದು ಗೊತ್ತಿದೆಯೇ ಹೊರತು, ಭ್ರಷ್ಟಾಚಾರ ಮುಕ್ತ ಸರ್ಕಾರ ಇದ್ದಲ್ಲಿ ಮಾತ್ರ ಈ ರೀತಿಯ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಬಹುದು ಮತ್ತು ದೆಹಲಿ ಮಾದರಿಯ ಸಾಲ ಮುಕ್ತ ಬಜೆಟ್‌ಗಳನ್ನು ಘೋಷಿಸಬಹುದು ಎಂಬುದು ಗೊತ್ತಿಲ್ಲ” ಎಂದು ವ್ಯಂಗ್ಯವಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಚುನಾವಣಾ ಅಕ್ರಮಗಳಿಗಾಗಿ ಖರ್ಚು ಮಾಡಿರುವ ಹಣವನ್ನು ಕೂಡಲೇ ಹೇಗಾದರೂ ಮಾಡಿ ವಸೂಲಿ ಮಾಡಿಕೊಳ್ಳಬೇಕೆಂಬ ಧಾವಂತ ಕಾಂಗ್ರೆಸ್ ಶಾಸಕರುಗಳಲ್ಲಿ ಇರುವುದು ಬಿ.ಆರ್.ಪಾಟೀಲ್ ಅವರ ಪತ್ರದಿಂದ ಸ್ಪಷ್ಟವಾಗುತ್ತಿದೆ ಎಂಬ ಅನುಮಾನ ರಾಜ್ಯದ ಜನತೆಯಲ್ಲಿ ಹಾಗೂ ನಮ್ಮಲ್ಲೂ ಕಾಡುತ್ತಿದೆ” ಎಂದರು.

“ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸರ್ಕಾರದಲ್ಲಿ ಯೋಜನೆಗಳಿಗಾಗಿ ಯಾವುದೇ ಹಣವಿಲ್ಲ. ಶಾಸಕರುಗಳಾರೂ ಅನುದಾನಕ್ಕಾಗಿ ಒತ್ತಾಯ ಮಾಡಬಾರದೆಂದು ಹೇಳುತ್ತಾರೆ. ಯೋಜನೆಗಳಲ್ಲಿ ಯಾವುದೇ ಕಮಿಷನ್ ಬಾರದ ಈ ಪರಿಸ್ಥಿತಿಯಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆಯೇ ಇವರಿಗೆ ಗಟ್ಟಿ. ಅಧಿಕಾರಿಗಳ ಮೇಲೆ ಒತ್ತಡ ಹೇರಿ ವಸೂಲಿ ಮಾಡುವುದೊಂದೇ ಈಗಿರುವ ಏಕೈಕ ಮಾರ್ಗ. ಇದರಿಂದಾಗಿ ಮುಂದಿನ ದಿನಗಳಲ್ಲಿ ಜನಸಾಮಾನ್ಯರು ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರಗಳಿಂದಾಗಿ ಪರಿತಪಿಸುವುದು ಗ್ಯಾರಂಟಿ” ಎಂದು ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿದ್ಯಾರ್ಥಿಗಳಿಂದ ಹಣ ಸುಲಿಗೆ ಮಾಡುತ್ತಿದ್ದ ಮೂವರು ಪೊಲೀಸ್‌ ಮಾಹಿತಿದಾರರ ಬಂಧನ

“ಜೆಡಿಎಸ್ ಪಕ್ಷದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಯಾರೊಂದಿಗೂ ನಾವು ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರೆ ಅದಕ್ಕೆ ತದ್ವಿರುದ್ಧವಾಗಿ ಅವರ ಮಗ ಕುಮಾರಸ್ವಾಮಿ ಬಿಜೆಪಿಯೊಂದಿಗೆ ಹೊಂದಾಣಿಕೆಯ ಮಾತುಕತೆ ನಡೆಯುತ್ತಿದೆ ಎಂಬ ಹೇಳಿಕೆ ನೀಡುತ್ತಿರುವುದು ದ್ವಂದ್ವದಿಂದ ಕೂಡಿದೆ. ಇಬ್ಬರು ಒಟ್ಟಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಜನತೆಗೆ ಯಾರೊಂದಿಗೆ ಕೈಜೋಡಿಸುತ್ತೇವೆ ಎಂಬುದನ್ನು ರಾಜ್ಯದ ಜನತೆಗೆ ಸ್ಪಷ್ಟಪಡಿಸಲಿ” ಎಂದು ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...

ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಗ್ಯಾನೇಶ್ ಕುಮಾರ್ ಕಳೆದ 10 ತಿಂಗಳಲ್ಲಿ...

ಲಗ್ಗೆರೆ | ಜೆಡಿಎಸ್ ನಾಯಕ ಅಂದಾನಪ್ಪ ನಿವಾಸದಲ್ಲಿ ವಾಚ್‌ಮ್ಯಾನ್ ಆತ್ಮಹತ್ಯೆ

ಜೆಡಿಎಸ್ ಮುಖಂಡ ಅಂದಾನಪ್ಪ ಅವರ ಬೆಂಗಳೂರಿನ ಲಗ್ಗೆರೆ ನಿವಾಸದಲ್ಲಿ ವಾಚ್‌ಮ್ಯಾನ್ ಆಗಿ...

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಹಸಿರು ನಿಶಾನೆ; ಚಾಲಕರ ಸಂಘದಿಂದ ಸುಪ್ರೀಂಗೆ ಮೇಲ್ಮನವಿ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹಸಿರು ನಿಶಾನೆ ತೋರಿಸಿದ್ದ ಹೈಕೋರ್ಟ್ ತೀರ್ಪು...