ಚಿಲುಮೆ ಪ್ರಕರಣ | ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ವಿರುದ್ಧ ತನಿಖೆಗೆ ಮುಂದಾದ ಸರ್ಕಾರ

Date:

Advertisements

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ, ಚಿಲುಮೆ ಸಂಸ್ಥೆಗೆ ಮತದಾರರ ಖಾಸಗಿ ಮಾಹಿತಿ ಸಂಗ್ರಹಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅವಕಾಶ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಇದೀಗ ಮುಖ್ಯ ಆಯುಕ್ತರ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮಾಜಿ ಎಂಎಲ್​ಸಿ ರಮೇಶ್ ಬಾಬು ಪತ್ರ ಬರೆದು ತನಿಖೆ ನಡೆಸುವಂತೆ ಆಗ್ರಹಿಸಿದ್ದರು. ಇದೀಗ ಮುಖ್ಯಮಂತ್ರಿ ಅವರ ಸೂಚನೆ ಮೇರೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ (ಸಿಎಸ್) ವಂದಿತಾ ಶರ್ಮಾ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಿ ವರದಿ ನೀಡುವಂತೆ ಕೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್‌ನಲ್ಲಿ ಸರ್ಕಾರ ವರದಿ ಕೇಳಿದೆ.

ಸರ್ಕಾರಕ್ಕೆ ಪತ್ರ ಬರೆದ ಕಾಂಗ್ರೆಸ್ ವಕ್ತಾರ

Advertisements

ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಯಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಈ ವೇಳೆ, ತುಷಾರ್ ಗಿರಿನಾಥ್ ಅವರು ಚಿಲುಮೆ ಸಂಸ್ಥೆಗೆ ಮತಪಟ್ಟಿ ಪರಿಷ್ಕರಣೆಗೆ ಅವಕಾಶ ನೀಡಿದ್ದಾರೆ. ಚಿಲುಮೆ ಸಂಸ್ಥೆ ಮತದಾರರ ಪರಿಷ್ಕರಣೆಯ ಹೆಸರಿನಲ್ಲಿ ಜನರ ವೈಯಕ್ತಿಕ ಮಾಹಿತಿ ಸಂಗ್ರಹ ಮಾಡಿ, ದುರುಪಯೋಗಪಡಿಸಿಕೊಂಡಿದೆ.

ಖಾಸಗಿ ಸಂಸ್ಥೆಯಾದ ಚಿಲುಮೆಗೆ ಮತದಾರರ ಖಾಸಗಿ ವಿಷಯ ಸಂಗ್ರಹಣೆಗೆ ಅವಕಾಶ ನೀಡಿ, ಕರ್ತವ್ಯಲೋಪ ಎಸಗಿದ್ದಾರೆ. ಚುನಾವಣಾ ಅಧಿಕಾರಿ ಅಕ್ರಮಗಳಲ್ಲಿ‌ ಭಾಗಿಯಾಗಿದ್ದರೆ, ಅವರ ವಿರುದ್ಧ ಸೆಕ್ಷನ್ 32 ಆರ್ ಪಿ ಆಕ್ಟ್ 1950 ಅಡಿಯಲ್ಲಿ ಕ್ರಮಕ್ಕೆ ಅವಕಾಶ ಇದೆ. ಹಾಗಾಗಿ, ತುಷಾರ್ ಗಿರಿನಾಥ್ ಅವರನ್ನು ಚುನಾವಣಾ ಕಾರ್ಯ ನಿರ್ವಹಣೆ ಹುದ್ದೆಯಿಂದ ಬಿಡುಗಡೆ ಮಾಡಬೇಕು ಜತೆಗೆ ಅವರನ್ನು ಅಮಾನತು ಮಾಡಲು ಶಿಫಾರಸ್ಸು ಮಾಡಬೇಕು. ಚಿಲುಮೆ ಸಂಸ್ಥೆಯ ಲೋಪದ ಬಗ್ಗೆ ಪೂರ್ಣ ಪ್ರಮಾಣದ ತನಿಖೆ ನಡೆಸಬೇಕು” ಎಂದು ಆರೋಪಿಸಿ ಕಾಂಗ್ರೆಸ್ ವಕ್ತಾರರಾದ ರಮೇಶ್ ಬಾಬು ಅವರು ಕೇಂದ್ರ ಚುನಾವಣಾ ‌ಆಯೋಗಕ್ಕೆ ಪತ್ರ ಬರೆದಿದ್ದರು. ಅದರಂತೆ ಈಗ ತನಿಖೆ ನಡೆಸಲು ಸರ್ಕಾರ ಮುಂದಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್; ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯ

ಏನಿದು ಚಿಲುಮೆ ಪ್ರಕರಣ?

ಮತದಾರರಿಗೆ ಜಾಗೃತಿ ಮೂಡಿಸುವ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಚಿಲುಮೆ ಸಂಸ್ಥೆ ಬಿಎಲ್‌ಓ (ಬೂತ್‌ ಮಟ್ಟದ ಅಧಿಕಾರಿ) ಹೆಸರಿನಲ್ಲಿ ಗುರುತಿನ ಚೀಟಿಯನ್ನು ಸೃಷ್ಟಿಸಿಕೊಂಡು ಮತದಾರರ ಮನೆಗಳಿಗೆ ತೆರಳಿ ವೈಯಕ್ತಿಕ ಮಾಹಿತಿಗಳನ್ನು ಪಡೆದುಕೊಂಡಿದೆ. ಜತೆಗೆ ಈ ಮಾಹಿತಿಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪ ಇದೆ. ಬಿಎಲ್‌ಒ ಗುರುತಿನ ಚೀಟಿಯನ್ನು ಸರ್ಕಾರಿ ನೌಕರರು ಅಥವಾ ಅರೆ ಸರ್ಕಾರಿ ಸಿಬ್ಬಂದಿ ಅಲ್ಲದೆ ಬೇರೆಯವರು ಪಡೆದುಕೊಳ್ಳುವುದು ಅಪರಾಧವಾಗಿದೆ.

ಮತದಾರರ ಪರಿಷ್ಕರಣೆ ಅಕ್ರಮದಲ್ಲಿ ಚಿಲುಮೆ ಎಂಟರ್‌ ಪ್ರೈಸಸ್ ಪ್ರೈ.ಲಿ ಹಾಗೂ ಡಿಎಪಿ ಹೊಂಬಾಳೆ ಪ್ರೈ.ಲಿ ಎಂಬ ಸಂಸ್ಥೆಗಳೂ ಇದರಲ್ಲಿ ಭಾಗಿಯಾಗಿವೆ. ಈ ಸಂಸ್ಥೆ ಡಿಜಿಟಲ್‌ ಸಮೀಕ್ಷಾ ಎಂಬ ಆಪ್ ಮೂಲಕ ದತ್ತಾಂಶವನ್ನು ಸಂಗ್ರಹ ಮಾಡಿದೆ. ಬಿಎಲ್‌ಒ ಅಧಿಕಾರಿಗಳ ಹೆಸರಿನಲ್ಲಿ ಮತದಾರರ ಜಾತಿ, ಲಿಂಗ, ಆಧಾರ್ ಸಂಖ್ಯೆ, ಮೊಬೈಲ್ ನಂಬರ್‌ ಮತ್ತಿತರ ಮಾಹಿತಿಯನ್ನು ಸಂಗ್ರಹ ಮಾಡಿದೆ ಎಂಬ ಆರೋಪ ಇದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X