ಕಟ್ಟಡ ದುರಂತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ, ₹5 ಲಕ್ಷ ಪರಿಹಾರ ಘೋಷಣೆ

Date:

ಬೆಂಗಳೂರಿನ ಹೆಣ್ಣೂರು ಸಮೀಪದ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಗುರುವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಘಟನಾ ಸ್ಥಳ ಪರಿಶೀಲನೆ ಬಳಿಕ‌ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಗತ್ಯ ಇರುವ ಎಲ್ಲ ಆಧುನಿಕ ವ್ಯವಸ್ಥೆ ಬಳಿಸಿ ಕಾರ್ಮಿಕರಿಗೆ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಪರಿಶೀಲನೆ ಬಳಿಕ ಸುದ್ದಿಗಾರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಕುಸಿದ ಕಟ್ಟಡದಿಂದ ಮೃತಪಟ್ಟ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು. ಕಾರ್ಮಿಕ ಇಲಾಖೆಯಿಂದ ತಲಾ ₹3 ಲಕ್ಷ, ಬಿಬಿಎಂಪಿಯಿಂದ ತಲಾ ₹2 ಲಕ್ಷ ಪರಿಹಾರವನ್ನು ಮೃತರ ಕುಟುಂಬಕ್ಕೆ ನೀಡಲಾಗುತ್ತದೆ. ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನು ಸಂಪೂರ್ಣವಾಗಿ ಇಲಾಖೆಗಳಿಂದಲೇ ಭರಿಸಲಾಗುವುದು” ಎಂದು ಘೋಷಿಸಿದರು.

“ನಿಯಮಬಾಹಿರವಾಗಿ, ಸೂಕ್ತ ಅನುಮತಿ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ವಿಭಾಗೀಯ ಅಧಿಕಾರಿಗೂ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು” ಎಂದು ಸಿಎಂ ಸೂಚಿಸಿದರು.

“ಅನಧಿಕೃತ ನಿರ್ಮಾಣ ನಿಲ್ಲಿಸುವಂತೆ ನೋಟಿಸ್ ನೀಡಿದ್ದರೂ ನಿರ್ಮಾಣ ಮುಂದುವರೆಸಿದ ಮಾಲೀಕರು, ಗುತ್ತಿಗೆದಾರ, ಎಂಜಿನಿಯರ್ ಎಲ್ಲರ ವಿರುದ್ಧವೂ ಕಠಿಣ ಕಾನೂನು ಕ್ರಮ ಆಗಬೇಕು” ಎಂದು ಬಿಬಿಎಂಪಿ‌ ಆಯುಕ್ತ ತುಷಾರ ಗಿರಿನಾಥ್ ಅವರಿಗೆ ಸಿಎಂ ಸೂಚನೆ ನೀಡಿದರು.

ಸಚಿವ ಬೈರತಿ ಸುರೇಶ್, ಎಂ ಸಿ ಸುಧಾಕರ್, ಶಾಸಕ ಬೈರತಿ ಬಸವರಾಜ ಹಾಗೂ ಬಿಬಿಎಂಪಿ ಆಯುಕ್ತರು ಮತ್ತು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೇಂದ್ರದಿಂದ 2 ಲಕ್ಷ ರೂ. ಪರಿಹಾರ

ಬೆಂಗಳೂರಿನ ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ ಪ್ರಕಟಿಸಿದೆ. ಮೃತ 8 ಜನರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದ್ದು, ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುತ್ತದೆ. ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ ಎಂದಿದ್ದಾರೆ. ಜತೆಗೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...