ನಗರ್ತಪೇಟೆ ಘಟನೆ | ದ್ವೇಷ ಪ್ರಚೋದಿಸುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ‘ಜಾಗೃತ ನಾಗರಿಕ’ರಿಂದ ಆಯೋಗಕ್ಕೆ ದೂರು

Date:

ಚುನಾವಣೆಯ ಹೊಸ್ತಿಲಲ್ಲಿ ಕೋಮುದ್ವೇಷ ಹೆಚ್ಚಿಸಿ, ಗಲಭೆ ಎಬ್ಬಿಸಲು ಬೆಂಗಳೂರಿನ ನಗರ್ತಪೇಟೆಯಲ್ಲಿ ದ್ವೇಷ ಭಾಷಣ ಮಾಡಿರುವ ಸಂಸದರು, ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ‘ಜಾಗೃತ ನಾಗರಿಕರು ಕರ್ನಾಟಕ’ ಸಂಘಟನೆ ಆಗ್ರಹಿಸಿದೆ.

- Advertisement -

ಸಂಘಟನೆಯ ಮುಖಂಡರಾದ ಸಾಹಿತಿ ಎಸ್.ಜಿ. ಸಿದ್ದರಾಮಯ್ಯ ಮಾವಳ್ಳಿ ಶಂಕರ್, ದಿನೇಶ್ ಅಮಿನ್‌ ಮಟ್ಟು, ವಿಮಲಾ ಕೆ.ಎಸ್., ಬಿ. ಶ್ರೀಪಾದ‌ ಭಟ್, ಜಾಣಗೆರೆ ವೆಂಕಟರಾಮಯ್ಯ, ಕಾ.ತ. ಚಿಕ್ಕಣ್ಣ, ಬಂಜಗೆರೆ ಜಯಪ್ರಕಾಶ್, ಟಿ. ಸುರೇಂದ್ರ ರಾವ್, ರವಿಕುಮಾರ್ ಬಾಗಿ, ಎಚ್. ದಂಡಪ್ಪ ಅವರು ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ಏನೂ ಇಲ್ಲ- ನಾಸೆರ್...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಇರಾನಿನ ಕವಿ ನಾಸೆರ್ ಫಯ್ಜ್ ಅವರ ಕವನವೊಂದನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಹೆಚ್‌ ಭಾಗ್ಯ ಅಳುವ ಮಗವೊಂದನು ಸುಟ್ಟು ಬೂದಿ ಮಾಡಿದರು. ಅವನು ಏನೂ ಇಲ್ಲವೆಂದ. ತನ್ನೆಲ್ಲಾ...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ...

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ ಸಂಚು ನಡೆದಿದೆ. ಕೇಂದ್ರ ಸರ್ಕಾರ (ಮೋದಿ-ಶಾ ಜೋಡಿ) ಮತ್ತು ಚುನಾವಣಾ ಆಯೋಗ (ಗ್ಯಾನೇಶ್‌ ಕುಮಾರ್‌) ಜಂಟಿಯಾಗಿ ಎಸ್‌ಐಆರ್‌ ಹೆಸರಿನಲ್ಲಿ ಅರ್ಹ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ನಗರ್ತಪೇಟೆಯ ಅಂಗಡಿಯೊಂದರಲ್ಲಿ ಜಗಳ ನಡೆದಿದ್ದು, ಅಂಗಡಿ ಮಾಲೀಕರು ಹಲಸೂರು ಗೇಟ್‌ ಪೊಲೀಸ್‌ ಠಾಣೆಗೆ ನೀಡಿದ ದೂರಲ್ಲಿ ಧಾರ್ಮಿಕ ನೆಲೆಯ ಗಲಾಟೆಗಳ ಕುರಿತ ಅಂಶಗಳಿಲ್ಲ. ಅಂಥ ಯಾವುದೇ ಘಟನೆಗಳು ನಡೆದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿರುವುದು ಕೂಡ ವರದಿಯಾಗಿದೆ.

ಈ ಘಟನೆಗೆ ಕೋಮು ಬಣ್ಣ ಬಳಿಯಲು ತೇಜಸ್ವಿ ಸೂರ್ಯ ಪ್ರಯತ್ನ ನಡೆಸಿದ್ದಾರೆ. ‘ಎಕ್ಸ್‌’ ಪೋಸ್ಟ್‌ನಲ್ಲಿರುವ ಅವರ ಹೇಳಿಕೆಯಲ್ಲಿ ಇದು ಸ್ಪಷ್ಟವಾಗುತ್ತಿದೆ. ನಗರ್ತಪೇಟೆಯಲ್ಲಿ ಹಿಂದೂ ಜಾಗರಣ ವೇದಿಕೆ, ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜಾಜಿನಗರದ ಶಾಸಕ ಸುರೇಶ್‌ ಕುಮಾರ್‌, ಸಂಸದ ತೇಜಸ್ವಿ ಸೂರ್ಯ ಭಾಗವಹಿಸಿದ್ದರು. ದ್ವೇಷ ಭಾಷಣ ಮಾಡಿದ್ದರು. ಧರ್ಮ, ಜಾತಿಗಳ ಹೆಸರಿನಲ್ಲಿ ದ್ವೇಷ, ಹಿಂಸೆ, ಗಲಭೆ ಪ್ರಚೋದಿಸುವ ಶಕ್ತಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಸುರೇಶ್‌ ಕುಮಾರ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...