ಜೀವ ವೈವಿಧ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲಾತಿ ತಯಾರಿಸಬೇಕು; ತುಷಾರ್ ಗಿರಿನಾಥ್

Date:

ನಗರದಲ್ಲಿ ಕೃಷಿ, ಅರಣ್ಯ ಹಾಗೂ ವನ್ಯಜೀವಿ ವಿಭಾಗದಲ್ಲಿ ಜೀವ ವೈವಿಧ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲಾತಿ ತಯಾರಿಸಬೇಕು ಎಂದು ಜೀವವೈವಿಧ್ಯ ನಿರ್ವಹಣಾ ಸಮಿತಿಯ ಸದಸ್ಯ ಕಾರ್ಯದರ್ಶಿ ಮತ್ತು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಜೀವ ವೈವಿಧ್ಯ ನಿರ್ವಹಣಾ ಸಮತಿ ಸದಸ್ಯರಿಗೆ ಸೂಚಿಸಿದರು.

- Advertisement -

“ಕೃಷಿ ಕ್ಷೇತ್ರದಲ್ಲಿ ಸಂಬಂಧಪಟ್ಟ ನರ್ಸರಿಗೆ ಭೇಟಿ ನೀಡಿ ವಿಶಿಷ್ಟವಾದ ತಳಿಗಳ ಬಗ್ಗೆ ಸಮೀಕ್ಷೆ ನಡೆಸಬೇಕು. ಜತೆಗೆ ನಮ್ಮ ಬೆಂಗಳೂರಿನ ವಾತಾವರಣಕ್ಕೆ ತಕ್ಕಂತೆ ಬೆಳೆಯುತ್ತಿರುವ ಹೊಸ ತಳಿಗಳ ಬಗ್ಗೆ ಪಟ್ಟಿ ಮಾಡಬೇಕು. ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ಮರಗಳ ಬಗ್ಗೆ ಸಮೀಕ್ಷೆ ನಡೆಸಿ ಯಾವ ಮರಗಳು ವಿನಾಶದ ಅಂಚಿನಲ್ಲಿದೆ. ಯಾವ ಮರಗಳು ಹೆಚ್ಚಿವೆ ಎಂಬುದರ ಬಗ್ಗೆ ವಿವರ ಪಡೆಯಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

“ವನ್ಯಜೀವಿಗಳಿಗೆ ಸಂಬಂಧಿಸಿದಂತೆ ಅಪಾಯದ ಅಂಚಿನಲ್ಲಿರುವ ಪಕ್ಷಿಗಳು ಹಾಗೂ ವಿಶಿಷ್ಟ ಜೀವಿಗಳ ಬಗ್ಗೆ ಸಮಿಕ್ಷೆ ನಡೆಸಿ ಅದರ ಉಳಿವಿಗಾಗಿ ಬೇಕಾಗುವ ಎಲ್ಲ ರೀತಿಯ ಕ್ರಮಗಳ ಬಗ್ಗೆ ಸಂಪೂರ್ಣ ವಿವರ ನೀಡಬೇಕು”ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಸಿದ್ದಪಡಿಸಿರುವ ಜನತಾ ಜೀವ ವೈವಿಧ್ಯ ದಾಖಲಾತಿಯನ್ನು ಪುನರ್‌ವಿಮರ್ಶಿಸಿ ಸಲಹೆ ಸೂಚನೆಗಳನ್ನು ಸ್ವೀಕರಿಸಿ, ನವೀಕರಿಸಲು ಜೀವವೈವಿಧ್ಯ ನಿರ್ವಹಣಾ ಸಮಿತಿಯ ಅಧ್ಯಕ್ಷರು ಹಾಗೂ ಆಡಳಿತಗಾರರಾದ ರಾಕೇಶ್ ಸಿಂಗ್ ರವರು ಅಧಿಕಾರಿಗಳಿಗೆ ಸೂಚಿಸಿದರು.

ಜೀವ ವೈವಿದ್ಯ ದಾಖಲಾತಿಗೆ ಸಂಬಂಧಿಸಿದಂತೆ ನ.17 ರಂದು ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಿತು. ಈ ವೇಳೆ, ಮಾತನಾಡಿದ ಅವರು, “ಜೀವವೈವಿದ್ಯ ಉಳಿಸುವ ಅಂಗವಾಗಿ ಯಾವುದು ಯಶಸ್ಸು ಕಂಡಿದೆ. ಅದನ್ನು ದಾಖಲಿಸುವಂತಹ ಕೆಲಸವಾಗಬೇಕು. ಬೆಂಗಳೂರಿನಲ್ಲಿರುವ ಪಾರಂಪರಿಕವಾಗಿ ಇರುವಂತಹ ಜಾಗಗಳು, ಹಸಿರು ವನಗಳ ಬಗ್ಗೆ ಸಮಿಕ್ಷೆ ನಡೆಸಿ ವರದಿ ಸಲ್ಲಿಸಬೇಕು. ಕ್ರಮಬದ್ಧವಾಗಿ ಜೀವ ವೈವಿಧ್ಯ ನಿರ್ವಹಣೆಗೆ ಬೇಕಾಗುವ ಎಲ್ಲ ಅಗತ್ಯ ಸೌಲಭ್ಯವನ್ನು ಪಾಲಿಕೆ ಒದಗಿಸಲಿದೆ” ಎಂದು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಡೀಪ್‍ಫೇಕ್ ವಿಡಿಯೋದಲ್ಲಿ ಬಾಲಿವುಡ್ ನಟಿ ಕಾಜೋಲ್: ವಿಡಿಯೋ ವೈರಲ್

ಸಭೆಯಲ್ಲಿ ಕೈಗೊಂಡ ನಿರ್ಣಯಗಳು

1. 2020ನೇ ಸಾಲಿನಲ್ಲಿ ಪ್ರಕಟಿಸಿರುವ ಜನತಾ ಜೀವ ವೈವಿಧ್ಯ ದಾಖಾಲಾತಿಯನ್ನು ಪುನರ್‌ವಿಮರ್ಶಿಸಿ ಸಲಹೆ ಸೂಚನೆಗಳನ್ನು ಸ್ವೀಕರಿಸಿ ನವೀಕರಿಸುವುದು.

2. ಬಿಬಿಎಂಪಿ ವ್ಯಾಪ್ತಿಯಲ್ಲಿ ಜೀವವೈವಿಧ್ಯತೆ ಉಳಿಸಲು ಕಾರ್ಯತಂತ್ರ ರೂಪಿಸುವುದು ಮತ್ತು ಕಾರ್ಯಗತಗೊಳಿಸುವುದು.

3. ಬಿಬಿಎಂಪಿ ವ್ಯಾಪ್ತಿಯಲ್ಲಿ ಜೀವ ವೈವಿಧ್ಯತೆ ಉಳಿಸಲು ಹಾಗೂ ಜನತಾ ಜೀವ ವೈವಿಧ್ಯತೆ ದಾಖಾಲಾತಿ ನವೀಕರಿಸಲು ಆಸಕ್ತ ಸ್ವಯಂಸೇವಕರನ್ನು ಒಳಗೊಂಡ ತಂಡ ರೂಪಿಸುವುದು.

ಸಭೆಯಲ್ಲಿ ಅರಣ್ಯ ವಿಭಾಗದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್, ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಬಿ.ಜಿ.ಎಲ್.ಸ್ವಾಮಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ್, ಸಮಿತಿಯ ಸದಸ್ಯರುಗಳಾದ ಅಕ್ಷಯ್ ಹೆಬ್ಲಿಕರ್, ಡಾ.ನಂದಿನಿ.ಎನ್. ಡಾ. ಉಷಾ ಆನಂದಿ, ವಿಜಯ್ ನಿಶಾಂತ್, ಭಾರ್ಗವ್.ಆರ್ ಸೇರಿದಂತೆ ಸಮಿತಿಯ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...