Breaking News- ಬೆಂಗಳೂರು | ಭಾರೀ ಮಳೆ; ಬೌರಿಂಗ್ ಆಸ್ಪತ್ರೆ ಕಾಂಪೌಂಡ್‌ ಕುಸಿತ: ಮೂವರು ಮಕ್ಕಳು ಸೇರಿ 8 ಮಂದಿ ಸಾವು

Date:

ಬೆಂಗಳೂರು ನಗರದ ಹಲವೆಡೆ ಭಾರೀ ಮಳೆಯಾಗಿದ್ದು ಬೌರಿಂಗ್ ಆಸ್ಪತ್ರೆ ಆವರಣ ಗೋಡೆ ಕುಸಿತಗೊಂಡಿದೆ. ಈ ಅವಘಡದಲ್ಲಿ ಮೂವರು ಮಕ್ಕಳು ಸೇರಿ 8 ಮಂದಿ ಸಾವನ್ನಪ್ಪಿದ್ದಾರೆ. ಅವಶೇಷದಡಿಯಲ್ಲಿ ಇನ್ನೂ ಎಂಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

- Advertisement -

ಮೃತರ ಪೈಕಿ ಕೆಲವರು ಫುಟ್‌ಪಾತ್‌ ಬಳಿ ತಳ್ಳುಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಮೃತರಲ್ಲಿ ಪಾದಚಾರಿಗಳೂ ಇರಬಹುದು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಇದನ್ನು ಓದಿದ್ದೀರಾ? ಬೆಂಗಳೂರು | ಗುಡುಗು, ಗಾಳಿ ಸಹಿತ ಆಲಿಕಲ್ಲು ಮಳೆ: ಮೂರು ಗಂಟೆ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇನ್ನು ಗೋಡೆ ಕುಸಿಯುತ್ತಿದ್ದಂತೆ ಸಾರ್ವಜನಿಕರು ರಕ್ಷಣಾ ಕಾರ್ಯ ನಡೆಸಿದ್ದಾರೆ ಎಂದು ವರದಿಯಾಗಿದೆ. 11 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಧಾವಿಸಿದ್ದಾರೆ. ಜೆಸಿಬಿ ಮೂಲಕ ಗೋಡೆಯ ಅವಶೇಷಗಳನ್ನು ತೆರವುಗೊಳಿಸಿ, ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯುವ ಪ್ರಯತ್ನ ನಡೆಸಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ರಾಮನಗರದಿಂದ ಬೆಂಗಳೂರಿಗೆ ಹೊರಟಿದ್ದಾರೆ. ನಂತರ ಅವರು ನೇರವಾಗಿ ಗಾಯಾಳುಗಳನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಪಿಎಫ್‌ಒ ವೇತನ ಮಿತಿ 25,000 ರೂಪಾಯಿಗೆ ಏರಿಕೆ: ಕೇಂದ್ರ ಸಂಪುಟ ಒಪ್ಪಿಗೆ

ಸಂಘಟಿತ ವಲಯದ ಲಕ್ಷಾಂತರ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಭಾರಿ ಸಿಹಿ ಸುದ್ದಿ...

ಸಿಜೆಪಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ: ಸೆ.17ರಿಂದ ಶಾಲೆಗಳ ಪರಿಶೀಲನೆ

ದೇಶದ ಅರಣ್ಯ ಮತ್ತು ಮೂಲನಿವಾಸಿ ಪ್ರದೇಶಗಳ ಶಾಲೆಗಳಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮತ್ತು...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ...

ಸೌದಿ ಅರಾಮ್ಕೋ ತೈಲ ಘಟಕ, ವಾಯುನೆಲೆ ಮೇಲೆ ಕ್ಷಿಪಣಿ ದಾಳಿ: ಹೌತಿಗಳ ಪ್ರತಿಪಾದನೆ

ಸೌದಿ ಅರೇಬಿಯಾದ ಪ್ರಮುಖ ತೈಲ ಸಂಸ್ಥೆ ಸೌದಿ ಅರಾಮ್ಕೋ (Saudi Aramco)...