ಬೆಂಗಳೂರು | ನಗರ್ತಪೇಟೆ ಘಟನೆಗೆ ಕೋಮು ಬಣ್ಣ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Date:

ಲೋಕಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ದುರುದ್ದೇಶದಿಂದ ಬೆಂಗಳೂರಿನ ನಗರ್ತ ಪೇಟೆಯಲ್ಲಿ ಪ್ರತಿಭಟನೆ ನಡೆಸಲು ಪ್ರಚೋದಿಸುವ ಹೇಳಿಕೆ ನೀಡಿ, ಕೋಮು ದ್ವೇಷ ಹರಡಲು ಯತ್ನಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಈ ಕುರಿತು ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಆಯೋಗದ ಕಚೇರಿಗೆ ತೆರಳಿ ದೂರು ನೀಡಿದ್ದು, ಬೆಂಗಳೂರಿನ ನಗರ್ತ ಪೇಟೆಯಲ್ಲಿ ಅಂಗಡಿ ಮಾಲೀಕರೊಬ್ಬರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಕೋಮು ದ್ವೇಷ ಮೂಡಿಸುವ ಸಲುವಾಗಿ ಬಿಜೆಪಿಯ ನಾಯಕರು ತಿರುಚುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ದೂರಿನಲ್ಲಿ, ಮಾ.18ರಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಬಸವನಗುಡಿ ಶಾಸಕ ರವಿಸುಬ್ರಮಣ್ಯ ಭೇಟಿ ನೀಡಿ ಅಂಗಡಿಯ ಮುಂದೆ ಗುಂಪು ಸೇರಿಸಿ 19 ಮಾರ್ಚ್ 2024 ರ ಮಧ್ಯಾಹ್ನ 12 ಗಂಟೆಗೆ ಹನುಮಾನ್ ಚಾಲೀಸ ಪಠನ ಮಾಡಲು ಕರೆ ನೀಡಿ ಧಾರ್ಮಿಕ ಘೋಷಣೆಗಳನ್ನು ಕೂಗಿರುತ್ತಾರೆ. ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು ಚುನಾವಣಾ ಆಯೋಗದ ಪ್ರಕಾರ ಚುನಾವಣೆಯ ಸಂದರ್ಭದಲ್ಲಿ ಕೋಮು, ಮತ, ಧಾರ್ಮಿಕ ಭಾವನೆಗಳನ್ನು ಕೆರಳಿಸುವಂತಹ ಕೃತ್ಯವೆಸಗುವುದು ಅಪರಾಧ. ನೀತಿ ಸಂಹಿತೆ ಉಲ್ಲಂಘಿಸಿ ಪ್ರತಿಭಟನೆಗೆ ಕರೆ ನೀಡಿರುವ ತೇಜಸ್ವಿ ಸೂರ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋರುತ್ತೇನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಗರ್ತಪೇಟೆಯಲ್ಲಿ ನಡೆದ ಗಲಾಟೆ ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಲೀ, ಆಜಾನ್ ಪ್ರಾರ್ಥನೆಗೆ ಅಡ್ಡಿಯಾಗುತ್ತಿದೆ ಎಂಬ ಕಾರಣಕ್ಕಾಗಲೀ ನಡೆದಿದ್ದಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡುವುದರೊಂದಿಗೆ ಪ್ರಕರಣಕ್ಕೆ ಕೋಮುಬಣ್ಣ ಹಚ್ಚಿ ಲಾಭ ಪಡೆಯಲು ಯತ್ನಿಸಿದ ಬಿಜೆಪಿ ನಾಯಕರಿಗೆ ಭಾರೀ ಮುಖಭಂಗವಾಗಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಲೌಡ್ ಸ್ಪೀಕರ್ ಜಗಳಕ್ಕೆ ಕೋಮು ಬಣ್ಣ ಬಳಿಯಲೆತ್ನಿಸಿದ ಬಿಜೆಪಿ; ಎಫ್‌ಐಆರ್‌ನಲ್ಲಿ ಇರೋದೇನು?

ಆಜಾನ್ ಪ್ರಾರ್ಥನೆಗೆ ಅಂಗಡಿಯೊಂದರಲ್ಲಿ ಹಾಕಲಾದ ಹನುಮಾನ್ ಚಾಲೀಸಾ ಅಡ್ಡಿಯಾಗುತ್ತಿದೆ ಎಂದು ಹಿಂದೂಗಳ ಮೇಲೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂಬ ಕಥೆ ಕಟ್ಟಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿ ನಾಯಕರು ಪ್ರಕರಣಕ್ಕೆ ಕೋಮುಬಣ್ಣ ಹಚ್ಚಿ ಅದರ ಲಾಭ ಪಡೆಯಲು ಮುಂದಾಗಿದ್ದರು. ಆದರೆ ಘಟನೆಯಲ್ಲಿ ಹಲ್ಲೆ ನಡೆಸಿದ ಆರೋಪಿಗಳಲ್ಲಿ ಹಿಂದೂಗಳೂ ಇರುವುದು, ಇಡೀ ಪ್ರಕರಣದಲ್ಲಿ ಕೋಮುಸಂಘರ್ಷದ ಕೋನ ಇಲ್ಲದೇ ಇರುವುದು ಬಿಜೆಪಿ ಮುಖಂಡರನ್ನು ಮುಜುಗರಕ್ಕೀಡು ಮಾಡಿದೆ. ಅಲ್ಲದೇ, ಈ ಘಟನೆಗೆ ಸಂಬಂಧಿಸಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ...

ಏ.29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ : ಹವಾಮಾನ ಇಲಾಖೆ

ಏಪ್ರಿಲ್ 29ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ...

ಲೋಕಸಭಾ ಚುನಾವಣೆ | ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭ: ಉತ್ಸಾಹದಿಂದ ಮತ ಚಲಾಯಿಸುತ್ತಿರುವ ಮತದಾರರು

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26ರಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...