ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಂದ ಮತ್ತೊಂದು ಅಸಹ್ಯಕರ ಹೇಳಿಕೆ: ವ್ಯಾಪಕ ಖಂಡನೆ

Date:

ಮುಸ್ಲಿಮರು ಹೆಚ್ಚಾಗಿ ವಾಸಿಸುತ್ತಿರುವ ಬೆಂಗಳೂರಿನ ಗೋರಿಪಾಳ್ಯ ಪ್ರದೇಶವನ್ನು ಪಾಕಿಸ್ತಾನ ಎಂದು ಕರೆದಿದ್ದ ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶ ವೇದವ್ಯಾಸಾಚಾರ್ ಶ್ರೀಷಾನಂದ ವಿರುದ್ಧ ಸುಪ್ರೀಂ ಕೋರ್ಟ್‌ ‘ಸು ಮೋಟೋ’ ಪ್ರಕರಣ ದಾಖಲಿಸಿಕೊಂಡಿದೆ. ಪ್ರತಿಕ್ರಿಯೆ ಕೇಳಿ ಶ್ರೀಷಾನಂದ ಅವರಿಗೆ ನೋಟಿಸ್ ಜಾರಿ ಮಾಡಿದೆ.

- Advertisement -

ಇತ್ತೀಚೆಗೆ, ಅವರ ಪಾಕಿಸ್ತಾನ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದೀಗ, ಶ್ರೀಷಾನಂದ ಅವರು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿರುವ ಇನ್ನೊಂದು ವಿಡಿಯೋ ವೈರಲ್‌ ಆಗಿದೆ. ನ್ಯಾಯಮೂರ್ತಿ ಶ್ರೀಷಾನಂದ ಅವರು ಪುರುಷ ವಕೀಲ ಧರಿಸಿರುವ ಅಂಡರ್‌ ಗಾರ್ಮೆಂಟ್‌ (ಒಳ ಉಡುಪು)‌ ಯಾವುದು ಎಂದೂ ನಾಳೆ ಹೇಳ್ತೀರಿ ಎಂದು ಮಹಿಳಾ ವಕೀಲೆಗೆ ಅಪಮಾನಿಸಿರುವ ವಿಡಿಯೋ ವೈರಲ್‌ ಆಗಿದೆ. ಶ್ರೀಷಾನಂದ ಅವರು ಮತ್ತೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿ ಶ್ರೀಷಾನಂದ ಅವರು, ಪುರುಷ ವಕೀಲನಿಗೆ ‘ನೀವು ಇನ್‌ಕಮ್‌ ಟ್ಯಾಕ್ಸ್‌ ಅಸೆಸ್ಸಿಯೇ’ ಎಂದು ಇಂಗ್ಲಿಷ್‌ನಲ್ಲಿ ಕೇಳಿದ್ದಾರೆ. ಆಗ, ತಕ್ಷಣ ಪ್ರತಿಕ್ರಿಯಿಸಿದ ಮಹಿಳಾ ವಕೀಲೆ, “ಹೌದು. ಅವರು ಇನ್‌ಕಮ್‌ ಟ್ಯಾಕ್ಸ್‌ ಅಸೆಸ್ಸಿ” ಎಂದು ಹೇಳಿದ್ದಾರೆ.

ಮಹಿಳಾ ವಕೀಲೆ ಮಾತಿಗೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, “ವೇಯ್ಟ್‌ ಅಮ್ಮ. ನೀವು ಯಾಕೆ ಹೇಳುತ್ತಿದ್ದೀರಿ? ಅವರ ಬಗ್ಗೆ ನಿಮಗೆ ಎಲ್ಲವೂ ತಿಳಿದಿದೆ. ನಾಳೆ ಬೆಳಿಗ್ಗೆ ಅವರು ಯಾವ ಬಣ್ಣದ ಅಂಡರ್‌ ಗಾರ್ಮೆಂಟ್ (ಒಳ ಉಡುಪು) ಧರಿಸುತ್ತಾರೆ ಎಂದೂ ನೀವು ಹೇಳುತ್ತೀರಿ” ಎಂದು ಹೇಳಿದ್ದಾರೆ. ಮಹಿಳಾ ವಕೀಲೆಯನ್ನು ಅಪಮಾನಿಸಿದ್ದಾರೆ.

ಈ ವರದಿ ಓದಿದ್ದೀರಾ?: ಬೆಂಗಳೂರು | ಮುಸ್ಲಿಮರು ವಾಸಿಸುವ ಪ್ರದೇಶವನ್ನು ಪಾಕಿಸ್ತಾನ ಎಂದ ಹೈಕೋರ್ಟ್‌ ನ್ಯಾಯಾಧೀಶ

ಮಹಿಳಾ ವಕೀಲೆಗೆ ಮತ್ತೊಬ್ಬ ಪುರುಷನ ಒಳ ಉಡುಪನ್ನು ಉಲ್ಲೇಖಿಸಿ ಅಪಮಾನಿಸಿರುವ ನ್ಯಾಯಾಧೀಶ ಶ್ರೀಷಾನಂದ ಅವರ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನ್ಯಾಯಾಂಗದಲ್ಲಿ ಉನ್ನತ ಸ್ಥಾನದಲ್ಲಿರುವವರು ಮಹಿಳೆಯರೊಂದಿಗೆ ಯಾವ ರೀತಿ ವರ್ತಿಸಬೇಕು. ಹೇಗೆ ಮಾತನಾಡಬೇಕು ಎಂಬ ಸಾಮಾನ್ಯ ಜ್ಞಾನ ಹಾಗೂ ಲಿಂಗ ಸೂಕ್ಷ್ಮತೆ ಅರಿಯದೇ ಇರುವುದು ಕಳವಳಕಾರಿಯಾಗಿದೆ” ಎಂದು ಕಿಡಿಕಾರಿದ್ದಾರೆ.

ನ್ಯಾಯಾಧೀಶರ ಹೇಳಿಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌ ಹಿರಿಯ ವಕೀಲೆ ಇಂದಿರಾ ಜೈಸಿಂಗ್, “ಈ ನ್ಯಾಯಾಧೀಶರ ವಿರುದ್ಧ ಸ್ವಯಂಪ್ರೇರಿತ ಕ್ರಮ ಕೈಗೊಳ್ಳಬೇಕು. ಅವರನ್ನು ಲಿಂಗ ಸಂವೇದನೆ ತರಬೇತಿಗೆ ಕಳುಹಿಸಬೇಕೆಂದು ನಾವು ಭಾರತದ ಮುಖ್ಯ ನ್ಯಾಯಮೂರ್ತಿಗಳಲ್ಲಿ ಮನವಿ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...