ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

Date:

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ. ಈ ಮೂಲಕ ಆಟೋ, ಕಾರ್‌ ಟ್ಯಾಕ್ಸಿಗೆ ದುಬಾರಿ ದರ ನೀಡುತ್ತಿದ್ದವರಿಗೆ ತುಸು ಸಮಾಧಾನವಾಗಲಿದೆ.

- Advertisement -

ಸುರಕ್ಷಿತೆಯ ಕಾರಣಕ್ಕೆ ಜೂನ್ 16 ರಿಂದ ರಾಜ್ಯ ಸರ್ಕಾರವು ಬೈಕ್ ಟ್ಯಾಕ್ಸಿಗಳ ಮೇಲೆ ನಿಷೇಧ ಹೇರಿತ್ತು. ಆ ಬಳಿಕ ಎಲ್ಲ ಬೈಕ್‌ ಟ್ಯಾಕ್ಸಿಗಳು ಸೇವೆ ಸ್ಥಗಿತಗೊಳಿಸಿದ್ದವು. ಆ ಸಂದರ್ಭದಲ್ಲಿ ಅನಧಿಕೃತವಾಗಿ ಸಂಚರಿಸಿದ ಬೈಕ್‌ ಟ್ಯಾಕ್ಸಿಗಳ ಮೇಲೆ ಆರ್‌ಟಿಓ ಅಧಿಕಾರಿಗಳು ಕ್ರಮಕೈಗೊಂಡಿದ್ದರು. ಭಾರಿ ದಂಡ ವಿಧಿಸಿದ್ದರಿಂದ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಆ್ಯಪ್ ಆಧಾರಿತ ಸೇವೆ ಒದಗಿಸುವ ಕಂಪನಿಗಳಿಗೆ ಸೂಚಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈಗಾಗಲೇ ಎರಡು ಫ್ಲಾಟ್‌ಫಾರಂಗಳಲ್ಲಿ ಬುಕ್ಕಿಂಗ್ ಆಯ್ಕೆ ತೋರಿಸುತ್ತಿದ್ದು, ಓಲಾ ಹೊರತುಪಡಿಸಿ ರ‍್ಯಾಪಿಡೋ ಹಾಗೂ ಊಬರ್ ಕಂಪನಿಗಳಿಂದ ಸೇವೆ ಆರಂಭವಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸದನದ ಘನತೆಯನ್ನು ಮಣ್ಣುಪಾಲು ಮಾಡಿದ ಮಹನೀಯರು

ಈ ಬೆನ್ನಲ್ಲೆ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳ ಮೇಲಿನ ಸಂಪೂರ್ಣ ನಿಷೇಧವನ್ನು ಪ್ರಶ್ನಿಸಿ ಆ್ಯಪ್ ಆಧಾರಿತ ಸೇವೆ ಒದಗಿಸುವ ಕಂಪನಿಗಳು ಕರ್ನಾಟಕ ಹೈಕೋರ್ಟ್ ಅನ್ನು ಸಹ ಸಂಪರ್ಕಿಸಿದ್ದವು. ಸದ್ಯ ಹೈಕೋರ್ಟ್‌ ಸೆಪ್ಟೆಂಬರ್ 22 ರವರೆಗೆ ವಿಚಾರಣೆಯನ್ನು ಮುಂದೂಡಿದೆ. ಈ ವಿಷಯವು ಲಕ್ಷಾಂತರ ಜನರ ಜೀವನದ ಮೇಲೆ ಪರಿಣಾಮ ಬೀರುವುದರಿಂದ ಗಂಭೀರವಾಗಿ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ.

ಬೆಂಗಳೂರು ನಗರದಲ್ಲಿ ಸುಮಾರು 1.20 ಲಕ್ಷ ಖಾಸಗಿ ಬೈಕ್‌ಗಳು ಆ್ಯಪ್ ಆಧಾರಿತ ಸೇವೆ ಒದಗಿಸುವ ಕಂಪನಿಗಳೊಂದಿಗೆ ನೋಂದಾಯಿಸಿಕೊಂಡಿದ್ದವು. ರಾಜ್ಯದಲ್ಲಿ ಆರು ಲಕ್ಷ ಜನರು ಬೈಕ್ ಟ್ಯಾಕ್ಸಿಗಳನ್ನೇ ತಮ್ಮ ಜೀವನೋಪಾಯಕ್ಕೆ ನೆಚ್ಚಿಕೊಂಡಿದ್ದಾರೆ. ನಿಷೇಧದಿಂದ ಸಾವಿರಾರು ಮಂದಿಗೆ ಸಮಸ್ಯೆಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...