ಹುದ್ದೆಗೆ 20-30 ಲಕ್ಷ ಲಂಚ ಪಡೆದ ಭ್ರಷ್ಟ ಶಾಸಕ ನಂಜೇಗೌಡ ರಾಜೀನಾಮೆ ನೀಡಬೇಕು: ಎಎಪಿ ಒತ್ತಾಯ

Date:

ಕೋಚಿಮುಲ್ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಸಿಎಂ ಸಿದ್ಧರಾಮಯ್ಯ ಸೂಚಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ‌ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆಗ್ರಹಿಸಿದ್ದಾರೆ.

- Advertisement -

ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, “ಭ್ರಷ್ಟಾಚಾರ ಮುಕ್ತ ಆಡಳಿತ ಕೊಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇದೀಗ ಮಾತಿಗೆ ತಪ್ಪಿದೆ. ಕಾಂಗ್ರೆಸ್ ಶಾಸಕರೊಬ್ಬರು ಭ್ರಷ್ಟಾಚಾರದಲ್ಲಿ ತೊಡಗಿರುವುದು ಸಾಬೀತಾಗಿದೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ರಾಜ್ಯ ಸರ್ಕಾರವು ಶಾಸಕನ ರಕ್ಷಣೆಗೆ ಧಾವಿಸದೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಕೋಚಿಮುಲ್ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಮತ್ತು ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಈ ವಿಚಾರದಲ್ಲಿ ಅಗತ್ಯ ತನಿಖೆಯಾಗಿ ಸತ್ಯಾಂಶ ಹೊರಬರಬೇಕಿದೆ” ಎಂದು ಆಗ್ರಹಿಸಿದರು.

“ಇಡಿ ಅಧಿಕಾರಿಗಳೇ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರು ಅಕ್ರಮದಲ್ಲಿ ಭಾಗಿಯಾಗಿರುವ ಬಗ್ಗೆ ಹೇಳಿದ್ದು, ಸರ್ಕಾರ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು. ಅವ್ಯವಹಾರದಲ್ಲಿ ಭಾಗಿಯಾಗಿರುವ ಶಾಸಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಎಎಪಿ ಈ ವಿಚಾರವಾಗಿ ಹೋರಾಟ ನಡೆಸಲಿದೆ. ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಸರ್ಕಾರ ನೀಡಬೇಕಿದೆ. ಭ್ರಷ್ಟಾಚಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಜಗದೀಶ್ ವಿ ಸದಂ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮನೆಗೆ ಮರ ಅಡ್ಡಿ; ಬುಡಕ್ಕೆ ಆ್ಯಸಿಡ್ ಹಾಕಿದ ದುರುಳರು; ಇಬ್ಬರ ವಿರುದ್ಧ ಬಿಬಿಎಂಪಿಗೆ ಸ್ಥಳೀಯರ ದೂರು

“ಕೋಚಿಮುಲ್ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರತಿ ಹುದ್ದೆಯು 20 ಲಕ್ಷದಿಂದ 30 ಲಕ್ಷ ರೂಪಾಯಿಗೆ ಮಾರಾಟವಾಗಿರುವುದು ಪತ್ತೆಯಾಗಿದೆ. ನೇಮಕಾತಿ ಸಮಿತಿಯು ಸಂದರ್ಶನ ಪ್ರಕ್ರಿಯೆಯನ್ನು ತಿರುಚಿರುವುದಷ್ಟೇ ಅಲ್ಲದೆ ಅಂತಿಮ ಪಟ್ಟಿಯನ್ನು ಸಾರ್ವಜನಿಕಗೊಳಿಸುವ ಮುನ್ನವೇ ತಮಗೆ ಬೇಕಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿ ತರಬೇತಿಗೆ ಕಳುಹಿಸಿದ್ದಾರೆ. ಇದನ್ನೆಲ್ಲಾ ಗಮನಿಸಿದರೆ ಇದರ ಹಿಂದೆ ಇನ್ನು ಯಾರೆಲ್ಲಾ ಇದ್ದಾರೆ ಎನ್ನುವ ಬಗ್ಗೆ ಗುಮಾನಿ ಮೂಡುತ್ತದೆ. ಹೀಗಾಗಿ, ಈ ವಿಚಾರದಲ್ಲಿ ವಿಳಂಬ ಮಾಡದೆ ನಿಷ್ಪಕ್ಷಪಾತ ತನಿಖೆಗೆ ಆದ್ಯತೆ ನೀಡಬೇಕಿದೆ. ಸರ್ಕಾರವು ಯಾವುದೇ ಮುಲಾಜಿಲ್ಲದೆಯೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರಾಮಾಣಿಕ ಉದ್ಯೋಗಾಕಾಂಕ್ಷಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಆದ್ಯತೆಯಾಗಬೇಕು” ಎಂದು ಅವರು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...