ಬಿಜೆಪಿ ಸರ್ಕಾರವಿದ್ದಾಗ BBMPಯಲ್ಲಿ ಭ್ರಷ್ಟಾಚಾರ; ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ

Date:

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ 2019-20 ಮತ್ತು 2022-23 ನಡುವೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಭ್ರಷ್ಟಾಚಾರ ಆರೋಪಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ ದಾಸ್ ಅವರ ಆಯೋಗವು ತನಿಖೆ ನಡೆಸಿದೆ. ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.

- Advertisement -

ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಭ್ರಷ್ಟಾಚಾರಗಳ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು 2023ರ ಜುಲೈ 13ರಂದು ಮನವಿ ಸಲ್ಲಿಸಿದ್ದರು. ಅವರ ಮನವಿಗೆ ಸ್ಪಂದಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭದಲ್ಲಿ ತನಿಖೆಗಾಗಿ ನಾಲ್ಕು ವಿಶೇಷ ತನಿಖಾ ಸಮಿತಿಗಳನ್ನು ರಚಿಸಿದ್ದರು. ಆದರೆ, ಆ ಸಮಿತಿಗಳನ್ನು 2023ರ ಡಿಸೆಂಬರ್ 15ರಂದು ಹಿಂಪಡೆದು, ತನಿಖೆಯನ್ನು ನಾಗಮೋಹನ ದಾಸ್ ನೇತೃತ್ವದ ವಿಚಾರಣಾ ಆಯೋಗಕ್ಕೆ ವರ್ಗಾಯಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಆಪಾದಿತ ಭ್ರಷ್ಟಾಚಾರಗಳ ಬಗ್ಗೆ ತನಿಖೆ ನಡೆಸಿರುವ ಆಯೋಗವು, ಒಟ್ಟು 8,900 ಪುಟಗಳ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ತನಿಖೆ ವೇಳೆ, ಕಾಮಗಾರಿಗಳ ಕಡತ, ಕಾಮಗಾರಿ ನಡೆದ ಸ್ಥಳ ಹಾಗೂ ಕಾಮಗಾರಿಗಳ ಲೆಕ್ಕಪತ್ರಗಳನ್ನು ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ತನಿಖೆ ವೇಳೆ, ರ‍್ಯಾಂಡಮ್ ಆಯ್ಕೆ ಮೂಲಕ 528 ಮತ್ತು ಇತರೆ 233 ಒಟ್ಟು 761 ಪೂರ್ಣಗೊಂಡ ಕಾಮಗಾರಿಗಳ ತನಿಖೆ ನಡೆಸಲಾಗಿದೆ. ಈ ವೇಳೆ, ಕಾಮಗಾರಿಯಲ್ಲಿ ಹಲವು ನ್ಯೂನತೆಗಳನ್ನು ಪತ್ತೆ ಮಾಡಲಾಗಿದೆ ಎಂದು ವರದಿಯಾಗಿದೆ.

ತನಿಖಾ ವರದಿಯಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನಿನ ಅಡಿಯಲ್ಲಿ ಕ್ರಮಕೈಗೊಳ್ಳಲು ಆಯೋಗವು ಶಿಫಾರಸು ಮಾಡಿದೆ. ಮಾತ್ರವಲ್ಲದೆ, ಕಳಪೆ ಕಾಮಗಾರಿ ನಡೆದಿರುವಲ್ಲಿ ಸುಧಾರಣಾ ಕ್ರಮಕೈಗೊಳ್ಳಲು ಕೈಗೊಳ್ಳುವಂತೆಯೇ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...