ನ್ಯಾಯಾಲಯದ ಆಜ್ಞೆಗೆ ಕಿಮ್ಮತ್ತಿಲ್ಲ; ಮಾಹಿತಿ ನೀಡಲು ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳ ಹಿಂದೇಟು

Date:

ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಜ್ಞೆಗಳನ್ನು ಗಾಳಿಗೆ ತೂರಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆವಿಕಂ) ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಜಲಮಂಡಳಿ) ಅಧಿಕಾರಿಗಳ ಉದ್ಧಟತನ ಬೆಳಕಿಗೆ ಬಂದಿದೆ. ನ್ಯಾಯಾಲಯದ ಆದೇಶ ಸಂಖ್ಯೆ 79/2021 ಪಾಲನೆ ಮಾಡದ ಈ ಸಾರ್ವಜನಿಕ ಸೇವಕರು ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸದೆ ಕಳ್ಳಾಟ ಆಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

- Advertisement -

​ಸರ್ಕಾರಿ ಕಚೇರಿಗಳಲ್ಲಿ ನಡೆಯುವ ಭ್ರಷ್ಟಾಚಾರ ತಡೆಯುವ ನಿಟ್ಟಿನಲ್ಲಿ ಹಿಂದಿನ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ 2021ನೇ ಸಾಲಿನಲ್ಲಿ ಮಹತ್ವದ ಆದೇಶ ಹೊರಡಿಸಿದ್ದರು. ಇದರ ಅನ್ವಯ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ‘ನಗದು ಘೋಷಣೆ ವಹಿ’ಯನ್ನು ಕಡ್ಡಾಯವಾಗಿ ನಿರ್ವಹಣೆ ಮಾಡುವುದು ಅವರ ಆದ್ಯ ಕರ್ತವ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

​ಆದರೆ, ಈ ನಿಯಮದ ಪಾಲನೆ ಕುರಿತು ಮಾಹಿತಿ ಹಕ್ಕು ಕಾಯಿದೆಯಡಿ ಮಾಹಿತಿ ಕೋರಿದಾಗ ಜಲಮಂಡಳಿ ಹಾಗೂ ಬೆವಿಕಂ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಉಡಾಫೆಯ ಹಿಂಬರಹ ನೀಡಿದ್ದಾರೆ. ಬೆವಿಕಂನ ಕೇಂದ್ರ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಉಪ ಪ್ರಧಾನ ವ್ಯವಸ್ಥಾಪಕಿ (ಪ್ರಭಾರ) ಪುಷ್ಪಲತಾ ಎ. ಅವರು ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 8(1)(ಇ) ಹಾಗೂ 8(1)(ಜೆ) ಅಡಿ ಇದು ‘ವೈಯಕ್ತಿಕ ಮಾಹಿತಿ’ ಎಂದು ನೆಪವೊಡ್ಡಿ ಮಾಹಿತಿ ನೀಡಲು ನಿರಾಕರಿಸಿದ್ದಾರೆ.

ಜಲಮಂಡಳಿಯ ಮುಖ್ಯ ಅಭಿಯಂತರರ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಯು ಕೂಡ ಸಾರ್ವಜನಿಕ ಹಿತಾಸಕ್ತಿ ಇಲ್ಲವೆಂದು ಸಬೂಬು ಹೇಳಿ ಮಾಹಿತಿ ನಿರಾಕರಿಸಿದ್ದಾರೆ. ​ರಾಜ್ಯದಲ್ಲಿ ಕೆಲವು ಭ್ರಷ್ಟ ಅಧಿಕಾರಿಗಳು ಸರ್ಕಾರಿ ಕಚೇರಿಗಳನ್ನು ತಮ್ಮ ಪಿತ್ರಾರ್ಜಿತ ಆಸ್ತಿಯಂತೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಾರ್ವಜನಿಕರು ಭ್ರಷ್ಟಾಚಾರದ ವಿರುದ್ಧ ಕರಾರುವಕ್ಕಾದ ಮಾಹಿತಿ ಕೇಳಿದಾಗ, ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 8(1)(ಜೆ) ಜೊತೆಗೆ (ಇ) ನಿಯಮಗಳನ್ನು ಮುಂದಿಟ್ಟುಕೊಂಡು ಜಾರಿಕೊಳ್ಳುವುದು ಈಚೆಗೆ ಸಾಮಾನ್ಯವಾಗಿದೆ. ಮೇಲಧಿಕಾರಿಗಳು, ವಾರ್ಷಿಕ ವರದಿ ಕೇಳುವ ಮಾಹಿತಿ ಆಯೋಗಗಳು ಸರಿಯಾದ ರೀತಿಯಲ್ಲಿ ನಿಗಾವಹಿಸದೆ ಇರುವುದೇ ಇಂತಹ ಅಧಿಕಾರಿಗಳ ಉದ್ಧಟತನಕ್ಕೆ ಮುಖ್ಯ ಕಾರಣ.

ಇದನ್ನೂ ಓದಿ: ಬೆಂಗಳೂರು | ಹಾರ್ನ್‌ ವಿಚಾರ: ವೃದ್ಧನ ಮೇಲೆ ಅಮಾನುಷವಾಗಿ ಹಲ್ಲೆಗೈದ ಆರೋಪಿ ಬಂಧನ

​ಇಂತಹ ಅಧಿಕಾರಿಗಳು ಸಾರ್ವಜನಿಕ ಸೇವೆಗೆ ನೇರ ದ್ರೋಹ ಬಗೆಯುತ್ತಿದ್ದಾರೆ. ಬೆವಿಕಂ ಹಾಗೂ ಜಲಮಂಡಳಿಯಲ್ಲಿ ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ. ಈ ಕೂಡಲೇ ಸಂಬಂಧಪಟ್ಟ ಉನ್ನತ ಮೇಲಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಇಂತಹ ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...