ಬೆಂಗಳೂರು | ವಯೋಸಹಜ ಅನಾರೋಗ್ಯದ ನೋವು; ಪತ್ನಿಯನ್ನು ಕೊಂದು 85ರ ವೃದ್ಧ ಆತ್ಮಹತ್ಯೆ

Date:

ವಯೋಸಹಜ ಮತ್ತು ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬೇಸತ್ತ 85 ವರ್ಷದ ವೃದ್ಧರೊಬ್ಬರು, ತಮ್ಮ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆಗೈದು, ತಾವೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ‌ ನಡೆದಿದೆ.

- Advertisement -

ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಮೂಲತಃ ಬಿಹಾರದ ದಂಪತಿಗಳಾದ ಶಿವಾನಂದನ್ ಪ್ರಸಾದ್ (85) ಮತ್ತು ಅವರ ಪತ್ನಿ ಸುಮಿತ್ರಾ ದೇವಿ (77) ಮೃತಪಟ್ಟ ದುರ್ದೈವಿಗಳು. ಸುಮಿತ್ರಾ ದೇವಿ ಅವರು ದೀರ್ಘಕಾಲದಿಂದ ಕಣ್ಣು ಮತ್ತು ಕಿವಿ ಸಂಬಂಧಿತ ತೀವ್ರ ಸಮಸ್ಯೆಗಳಿಂದ ಬಳಲುತ್ತಿದ್ದರು. ಶಿವಾನಂದನ್ ಪ್ರಸಾದ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ನರಳುತ್ತಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಕೆಲ ದಿನಗಳ ಹಿಂದಷ್ಟೇ ಈ ವಯೋವೃದ್ಧ ದಂಪತಿ ಬೆಂಗಳೂರಿನಲ್ಲಿ ನೆಲೆಸಿರುವ ತಮ್ಮ ಪುತ್ರ ಕಿರಣ್ ಕುಮಾರ್ ಕಶ್ಯಪ್ ಅವರ ಮನೆಗೆ ಬಂದಿದ್ದರು. ತಮಗೆ ಕಾಡುತ್ತಿದ್ದ ವಯೋಸಹಜ ಕಾಯಿಲೆಗಳಿಂದಾಗಿ ತಾವಿಬ್ಬರೂ ಮಕ್ಕಳಿಗೆ ಹೊರೆಯಾಗಬಾರದು ಎಂಬ ತೀವ್ರ ಖಿನ್ನತೆಗೆ ಒಳಗಾಗಿ ಈ ಕಠಿಣ ನಿರ್ಧಾರ ಕೈಗೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಸೋಮವಾರ ತಡರಾತ್ರಿ ಶಿವಾನಂದನ್ ಪ್ರಸಾದ್ ಅವರು ಮಲಗಿದ್ದ ಪತ್ನಿಯ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಆ ಬಳಿಕ ತಾವೂ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮಾಜಿ ಯೋಧರಾಗಿರುವ ಮಗ ಕಿರಣ್ ಕುಮಾರ್ ಪ್ರಸ್ತುತ ಖಾಸಗಿ ಭದ್ರತಾ ಸಂಸ್ಥೆಯೊಂದರಲ್ಲಿ ಹಿರಿಯ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಪತ್ನಿ ಮತ್ತು ಮಗ ಸಂಬಂಧಿಕರ ಮದುವೆಗಾಗಿ ಊರಿಗೆ ತೆರಳಿದ್ದರಿಂದ, ಮನೆಯಲ್ಲಿ ಕಿರಣ್ ಹಾಗೂ ಅವರ ಪೋಷಕರು ಮಾತ್ರ ಇದ್ದರು. ಸೋಮವಾರ ರಾತ್ರಿ 9 ಗಂಟೆಯ ಸುಮಾರಿಗೆ ಕಿರಣ್ ಪೋಷಕರಿಗೆ ಊಟ ನೀಡಿ ತಮ್ಮ ಕೋಣೆಗೆ ಮಲಗಲು ತೆರಳಿದ್ದರು. ಮರುದಿನ ಮಂಗಳವಾರ ಬೆಳಗ್ಗೆ ಪೋಷಕರನ್ನು ಎಬ್ಬಿಸಲು ಅವರು ಹಲವು ಬಾರಿ ಪ್ರಯತ್ನಿಸಿದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದರಿಂದ ಅನುಮಾನಗೊಂಡು ಸುತ್ತಿಗೆಯಿಂದ ಬಾಗಿಲು ಒಡೆದು ಒಳಗೆ ನೋಡಿದಾಗ ದಂಪತಿಗಳಿಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ.

ತಕ್ಷಣವೇ ಸ್ಥಳಕ್ಕೆ ಧಾವಿಸಿದ ಸಂಪಿಗೆಹಳ್ಳಿ ಠಾಣಾ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೊಲೆ ಹಾಗೂ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಮುದಾಯಗಳ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಮೂಲಕ...

ಬೀದರ್‌ | ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಅಣಕು ಶವಯಾತ್ರೆ

ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಹಾಗೂ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ...

ಬೀದರ್‌ | ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026–27ನೇ ಸಾಲಿನ ಧನಶ್ರೀ,...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್ ಶಾ ಏನು?

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ...