ರಾಜಧಾನಿಯಲ್ಲಿ ಇನ್ಮುಂದೆ ಸಂಚರಿಸಲಿವೆ ‘ಕ್ಯೂಟ್ ಟ್ಯಾಕ್ಸಿ’

Date:

  • ಏ.24ರಂದು ಅಧಿಕೃತವಾಗಿ ರಸ್ತೆಗೆ ಇಳಿಯಲಿರುವ ‘ಕ್ಯೂಟ್ ಟ್ಯಾಕ್ಸಿ’
  • 4 ಕಿ.ಮೀ ವರೆಗೆ ₹60 ಕನಿಷ್ಠ ದರ, ನಂತರ ಪ್ರತಿ ಕಿ.ಮೀಗೆ ₹16

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಪ್ರಯಾಣಿಕ ಸೇವೆ ನೀಡಲು ನಾಲ್ಕು ಚಕ್ರದ ‘ಕ್ಯೂಟ್’ (ಕ್ವಾಡ್ರಿಸೈಕಲ್‌)’ ವಾಹನಗಳು ಸೋಮವಾರ (ಏ.24)ದಿಂದ ಅಧಿಕೃತವಾಗಿ ರಸ್ತೆಗೆ ಇಳಿಯಲಿವೆ.

- Advertisement -

ಬಜಾಜ್ ಕ್ಯೂಟ್ ಕ್ವಾಡ್ರಿಸೈಕಲ್ ವಾಹನಕ್ಕೆ ಸಾರಿಗೆ ಇಲಾಖೆ ದರ ನಿಗದಿ ಮಾಡಿದ್ದು, ಮೌಲ್ಯ ಮಾಪನ‌ ಇಲಾಖೆ ಸೂಚಿಸಿರುವ ಮೀಟರ್ ಅಳವಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಬಜಾಜ್ ಕಂಪನಿ ಮುಖ್ಯಸ್ಥರು ನಾಲ್ಕು ಚಕ್ರದ ‘ಕ್ಯೂಟ್’ (ಕ್ವಾಡ್ರಿಸೈಕಲ್‌)’ ವಾಹನಗಳಿಗೆ ಸೋಮವಾರ ಚಾಲನೆ ನೀಡಲಿದ್ದಾರೆ.

ಈ ವಾಹನಗಳ ಕಾರ್ಯಾಚರಣೆಗೆ ತಿಂಗಳ ಹಿಂದೆಯೇ ಸಾರಿಗೆ ಇಲಾಖೆ ಅನುಮತಿ ನೀಡಿ, ದರ ನಿಗದಿಪಡಿಸಿದೆ. 4 ಕಿ.ಮೀ ವರೆಗೆ ₹60 ಕನಿಷ್ಠ ದರ. ನಂತರ ಪ್ರತಿ ಕಿ.ಮೀಗೆ ₹16 ಇರಲಿದೆ ಎಂದು ಸಾರಿಗೆ ಇಲಾಖೆ ಆದೇಶದಲ್ಲಿ ತಿಳಿಸಿದೆ.

“ಬಜಾಜ್ ಕ್ಯೂಟ್ ಕ್ವಾಡ್ರಿಸೈಕಲ್ ಎಂಬ ಹೊಸ ಮಾದರಿಯ ವಾಹನವು 2019ರಲ್ಲಿ ಮಾರುಕಟ್ಟೆಗೆ ಬಂದಿತ್ತು. ಇದಕ್ಕೆ ಸಾರಿಗೆ ಇಲಾಖೆ ದರ ನಿಗದಿ ಪಡಿಸಿರಲಿಲ್ಲ. ಕೇವಲ ಉಬರ್ ಸಂಸ್ಥೆಗೆ ಅವಲಂಬಿತರಾಗಿ ಚಾಲಕರು ಸೇವೆ ನೀಡುತ್ತಿದ್ದರು. ದರಗಳು ಸಹ ಸರಿಯಾದ ರೀತಿಯಲ್ಲಿ ಸಿಗುತ್ತಿರಲಿಲ್ಲ” ಎಂದು ಓಲಾ ಉಬರ್(ಓ.ಟಿ.ಯು) ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಏ.25ರಂದು ನಿಮ್ಮ ನೆರಳು ನಿಮಗೆ ಕಾಣಿಸುವುದಿಲ್ಲ!

“ವಾಹನ ಚಾಲಕರು ಮೀಟರ್ ಅಳವಡಿಸಿಕೊಂಡು ಸ್ವಾವಲಂಬಿಗಳಾಗಿ ಬದುಕಬೇಕು ಎಂಬ ಕಾರಣದಿಂದ 2020ರ ಡಿಸೆಂಬರ್‌ನಲ್ಲಿ ಸಾರಿಗೆ ಇಲಾಖೆಗೆ ಈ ವಾಹನಗಳಿಗೆ ಮೀಟರ್ ದರ ನಿಗದಿ ಪಡಿಸಿ ಕೊಡಲು ಮನವಿ ಮಾಡಿದ್ದೇನು. ಹಲವು ಅಡೆ ತಡೆಗಳ ನಂತರ ಸತತ ಎರಡು ವರ್ಷಗಳ ಬಳಿಕ 2022ರ ಮಾ. 20ರಂದು ಸಾರಿಗೆ ಇಲಾಖೆ ದರ ನಿಗದಿ ಪಡಿಸಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...