ಬಮೂಲ್ ಅಧ್ಯಕ್ಷರಾಗಿ ಡಿ ಕೆ ಸುರೇಶ್ ಅವಿರೋಧ ಆಯ್ಕೆ

Date:

ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ ಕೆ ಸುರೇಶ್ ಅವರು ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಿಕಟಪೂರ್ವ ಸಂಸದ ಡಿ ಕೆ ಸುರೇಶ್ ಅವರು ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದರು. ಈ ಸ್ಥಾನಕ್ಕೆ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಂತರ ಸುರೇಶ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬೆಂಗಳೂರು ಸಹಕಾರ ಹಾಲು ಒಕ್ಕೂಟ ನಿಯಮಿತ (ಬಮೂಲ್)ನಲ್ಲಿ 16 ನಿರ್ದೇಶಕರ ಪೈಕಿ 14 ಜನ ಚುನಾವಣೆ ಮೂಲಕ ಆರಿಸಲಾಗಿದ್ದು, ಇಬ್ಬರು ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದಾರೆ. ಬಮೂಲ್ ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನನ್ನನ್ನು ಅಧ್ಯಕ್ಷನನ್ನಾಗಿ, ಮಾಗಡಿ ತಾಲೂಕಿನ ಕುದೂರು ರಾಜಣ್ಣ ಅವರನ್ನು ಉಪಾಧ್ಯಕ್ಷರನ್ನಾಗಿ ಎಲ್ಲಾ ನಿರ್ದೇಶಕರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೌಢ್ಯ ಬಿತ್ತುವ ಕಾವೇರಿ ಆರತಿ ಯಾವ ಪುರುಷಾರ್ಥಕ್ಕೆ?

“ನಮ್ಮ ಪಕ್ಷದ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ, ಶಾಸಕರಾದ ಬಾಲಕೃಷ್ಣ, ಸಿ.ಪಿ. ಯೋಗೇಶ್ವರ್, ಇಕ್ಬಾಲ್ ಹುಸೇನ್, ಶಿವಣ್ಣ, ಶರತ್ ಬಚ್ಚೇಗೌಡ, ಕೃಷ್ಣಭೈರೇಗೌಡರು ಸೇರಿದಂತೆ ಬಮೂಲ್‌ ವ್ಯಾಪ್ತಿಯಲ್ಲಿ ಬರುವ ಎಲ್ಲ ಶಾಸಕರ ಸರ್ವಸಮ್ಮತದ ತೀರ್ಮಾನದಂತೆ ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ” ಎಂದರು.

“ಈ ಸಂದರ್ಭದಲ್ಲಿ ಎಲ್ಲರಿಗೂ ನಾನು ವೈಯಕ್ತಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇಂದು ನಡೆದ ಚುನಾವಣೆಯಲ್ಲಿ ಸಹಕಾರ ಸಂಸ್ಥೆ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ. ಈ ಒಕ್ಕೂಟದ ಹಾಲು ಉತ್ಪಾದಕರು, ರೈತ ಬಾಂಧವರು ನಮ್ಮ ಮೇಲೆ ನಿರೀಕ್ಷೆ ಇಟ್ಟು ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಅವರಿಗೂ ಧನ್ಯವಾದ ತಿಳಿಸುತ್ತೇನೆ. ಹಾಲು ಉತ್ಪಾದಕರು, ನಿರ್ದೇಶಕರು ಬದಲಾವಣೆ ತರುವ ನಿರೀಕ್ಷೆ ಹೊಂದಿದ್ದು, ಎಲ್ಲರ ಸಹಕಾರ ಪಡೆದು ಬೆಂಗಳೂರು ಸಹಕಾರ ಹಾಲು ಒಕ್ಕೂಟ ಹಾಗೂ ರೈತರಿಗೆ ನ್ಯಾಯ ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...