ದಾಸರಹಳ್ಳಿ ಡಬಲ್ ಮರ್ಡರ್ ಕೇಸ್‌: ಅಪ್ಪನ ಹತ್ಯೆ ನೋಡಿದ್ದಕ್ಕೆ 4 ವರ್ಷದ ಮಗನ ಕೊಲೆಯೇ?

Date:

ರಾಜಧಾನಿ ಬೆಂಗಳೂರಿನ ಚಿಕ್ಕಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದ್ದ ತಂದೆ ಹಾಗೂ ನಾಲ್ಕು ವರ್ಷದ ಮಗನ ಶಂಕಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಯಿಂದ ಬೆಚ್ಚಿಬೀಳಿಸುವ ಮಾಹಿತಿ ಹೊರಬಿದ್ದಿದೆ. ವಿವಾಹೇತರ ಸಂಬಂಧ ಹಾಗೂ ಆಸ್ತಿಯ ಆಸೆಗೆ ಬಿದ್ದು ಪತ್ನಿಯೇ ಪ್ರಿಯಕರನ ಜೊತೆಗೂಡಿ ಗಂಡನನ್ನು ಹತ್ಯೆ ಮಾಡಿದ್ದು, ಇದನ್ನು ಕಣ್ಣಾರೆ ಕಂಡ ಮಗನನ್ನೂ ಉಸಿರುಗಟ್ಟಿಸಿ ಕೊಂದಿರುವ ಶಂಕೆ ವ್ಯಕ್ತವಾಗಿದೆ.

- Advertisement -

ಮೃತರನ್ನು ಅಭಿನಂದನ್ (35) ಹಾಗೂ ಅವರ ನಾಲ್ಕು ವರ್ಷದ ಪುತ್ರ ಯದುವೀರ್ ಎಂದು ಗುರುತಿಸಲಾಗಿದೆ. ಸೋಮವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅಭಿನಂದನ್ ಅವರ ಪತ್ನಿ ಹರಿಣಿ (26) ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿ, ಗಂಡ ಮತ್ತು ಮಗ ಹಾಸಿಗೆಯ ಮೇಲೆ ಅಪ್ರಜ್ಞಾಸ್ಥಿತಿಯಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಳು. ಆದರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ ಅನುಮಾನಾಸ್ಪದ ಕುರುಹುಗಳು ಕಂಡುಬಂದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿ: ಚಿತ್ರದುರ್ಗ ಅಪಘಾತ : ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಕ್ಕೆ ಹೊರಟಿದ್ದ 42 ವಿದ್ಯಾರ್ಥಿಗಳು!

ತನಿಖೆ ಕೈಗೆತ್ತಿಕೊಂಡ ಪೊಲೀಸರಿಗೆ ಮನೆಗೆ ಯಾವುದೇ ಬಲವಂತದ ಪ್ರವೇಶ ಆಗದಿರುವುದು ಕಂಡುಬಂದಿದೆ. ಅಲ್ಲದೆ, ಭಾನುವಾರ ರಾತ್ರಿ 10 ಗಂಟೆಯ ನಂತರ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಬಂದ್ ಮಾಡಲಾಗಿತ್ತು. ಹರಿಣಿ ತನ್ನ ಮೊಬೈಲ್‌ನಲ್ಲಿದ್ದ ಕಾಲ್ ಹಿಸ್ಟರಿ, ಸಂದೇಶಗಳು ಹಾಗೂ ಫೋಟೋಗಳನ್ನು ಸಂಪೂರ್ಣವಾಗಿ ಡಿಲೀಟ್ ಮಾಡಿದ್ದಳು. ತನಿಖೆ ವೇಳೆ ಆಕೆ ಪದೇ ಪದೇ ಹೇಳಿಕೆಗಳನ್ನು ಬದಲಾಯಿಸುತ್ತಿದ್ದುದು ಪೊಲೀಸರ ಅನುಮಾನವನ್ನು ಮತ್ತಷ್ಟು ಬಲಪಡಿಸಿತು.

ತನಿಖೆ ವೇಳೆ ಹರಿಣಿ ಹಾಗೂ ವಿನಯ್ ಎಂಬಾತನ ನಡುವೆ ಅವಿವಾಹೇತರ ಸಂಬಂಧವಿತ್ತು. ಭಾನುವಾರ ರಾತ್ರಿ 11 ಗಂಟೆಯ ಸುಮಾರಿಗೆ ಹರಿಣಿ ತನ್ನ ಪ್ರಿಯಕರ ವಿನಯ್‌ನನ್ನು ಮನೆಗೆ ಕರೆಸಿಕೊಂಡಿದ್ದಳು. ಅಭಿನಂದನ್ ಅವರ ತಲೆಗೆ ಹೊಡೆದು ಹತ್ಯೆ ಮಾಡಲಾಗಿತ್ತು. ಈ ಹತ್ಯೆಯನ್ನು ಸಣ್ಣ ಮಗು ಯದುವೀರ್ ಕಣ್ಣಾರೆ ಕಂಡಿದ್ದರಿಂದ, ವಿಷಯ ಹೊರಬರುತ್ತದೆ ಎಂಬ ಭಯದಿಂದ ಮಗನನ್ನೂ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಕೊಲೆಯ ನಂತರ ಗಂಡನ ಶವದ ಮೇಲೆಯೇ ಮಗನ ಶವವನ್ನು ಇಟ್ಟು, ಆತ್ಮಹತ್ಯೆ ಅಥವಾ ನೈಸರ್ಗಿಕ ಸಾವು ಎಂದು ಬಿಂಬಿಸಲು ಯತ್ನಿಸಲಾಗಿತ್ತು.

ಅಭಿನಂದನ್ ಕುಟುಂಬಕ್ಕೆ ಸೇರಿದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಹಾಗೂ ಮೂರು ಅಂತಸ್ತಿನ ಕಟ್ಟಡದ ಮೇಲೆ ಹರಿಣಿ ಮತ್ತು ಆಕೆಯ ಪ್ರಿಯಕರನ ಕಣ್ಣಿತ್ತು. ಈ ಆಸ್ತಿಯನ್ನು ಪಡೆಯುವ ದುರಾಸೆಯಿಂದಲೇ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಸ್ತುತ ಪೊಲೀಸರು ಹರಿಣಿಯನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದು, ತಲೆಮರೆಸಿಕೊಂಡಿರುವ ಪ್ರಿಯಕರ ವಿನಯ್‌ಗಾಗಿ ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ನಿಖರ ಕಾರಣ ಅಧಿಕೃತವಾಗಿ ಹೊರಬೀಳಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...