ವಿದ್ಯಾರ್ಥಿನಿ ಸಾವು | ಬಸ್‌ ಚಾಲಕರಿಗೆ ನಿರ್ದೇಶನ ನೀಡಿದ ಕೆಎಸ್‌ಆರ್‌ಟಿಸಿ

Date:

Advertisements
  • ವಾಹನದ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಕರು ನಿಂತು ಪ್ರಯಾಣಿಸಲು ಅವಕಾಶ ನೀಡಬಾರದು
  • ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕರ್ನಾಟಕ ರಾಜ್ಯ ಸಾರಿಗೆ ನಿಗಮ ಸೂಚನೆ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರ ಗ್ರಾಮದಲ್ಲಿ ಜೂನ್​ 12ರಂದು ತುಂಬಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ (ವಾಕರಸಾಸಂ) ಸಂಸ್ಥೆಯ ಬಸ್‌ನಿಂದ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿನಿ ಸಾವನ್ನಪ್ಪಿದ್ದಳು. ಈ ಹಿನ್ನೆಲೆ, ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಚಾಲನಾ ಸಿಬ್ಬಂದಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಕೆಲವು ನಿರ್ದೇಶನಗಳನ್ನು ನೀಡಿ ಸುತ್ತೋಲೆ ಹೊರಡಿಸಿದೆ.

ಸಾರಿಗೆ ಸಂಸ್ಥೆಗಳ ಬಸ್​ಗಳಲ್ಲಿ, ಪ್ರಯಾಣಿಸುವ ಪ್ರಯಾಣಿಕರ ಸುರಕ್ಷತೆಯು ನಮ್ಮ ಆದ್ಯ ಕರ್ತವ್ಯವಾಗಿರುತ್ತದೆ. ಈ ರೀತಿಯ ಘಟನೆಗಳು ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ನಡೆಯದಂತೆ ಅಗತ್ಯ ಮುಂಜಾಗೃತ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿನಿ ಸಾವಿಗೆ ಸಾರಿಗೆ ಮತ್ತು ಮುಜರಾಯಿ ಸಚಿವರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಿರಿಯ ಅಧಿಕಾರಿಗಳ ಕಿರುಕುಳ ಆರೋಪ; ಯುವಕ ಆತ್ಮಹತ್ಯೆ

Advertisements

ಚಾಲನಾ ಸಿಬ್ಬಂದಿಗೆ ನಿರ್ದೇಶನ

  • ಚಾಲನಾ ಸಿಬ್ಬಂದಿಗಳು ವಾಹನವನ್ನು ಘಟಕದಿಂದ ಕಾರ್ಯಾಚರಣೆಗೆ ತೆಗೆದುಕೊಂಡು ಹೋಗುವ ಮೊದಲು ವಾಹನದ ಬಾಗಿಲುಗಳು ಸುಸ್ಥಿತಿಯಲ್ಲಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು.
  • ಪ್ರತಿಯೊಂದು ಬಸ್‌ ನಿಲ್ದಾಣಗಳಲ್ಲಿ ವಾಹನದ ನಿರ್ವಾಹಕರು ವಾಹನದ ಹಿಂದಿನ ಬಾಗಿಲನ್ನು ಮುಚ್ಚಿರುವ ಬಗ್ಗೆ ಖಾತ್ರಿಪಡಿಸಿಕೊಂಡು ಚಾಲಕರಿಗೆ ಸೂಚನೆ ನೀಡಿದ ನಂತರವೇ ಚಾಲಕರು ವಾಹನವನ್ನು ಚಾಲನೆ ಮಾಡಬೇಕು.
  • ವಾಹನದ ಫುಟ್‌ಬೋರ್ಡ್‌ನಲ್ಲಿ ಪ್ರಯಾಣಿಕರು ನಿಂತು ಪ್ರಯಾಣಿಸಲು ಅವಕಾಶ ನೀಡದಂತೆ ಕ್ರಮಕೈಗೊಳ್ಳಬೇಕು.
  • ಚಾಲಕರು ವಾಹನದ ಮುಂದಿನ ಹಿಂದಿನ ಬಾಗಿಲನ್ನು ಮುಚ್ಚಿರುವ ಬಗ್ಗೆ, ಖಾತ್ರಿ ಪಡಿಸಿಕೊಂಡು ವಾಹನ ಚಾಲನೆ ಮಾಡಬೇಕು.
  • ಬಸ್​ ನಿಲ್ದಾಣ ತಲುಪುವ ಮುಂಚೆ ವಾಹನದ ಬಾಗಿಲನ್ನು ತೆರೆಯದೆ ಬಸ್‌ ನಿಲ್ದಾಣ ಅಥವಾ ನಿಲುಗಡೆ ಸ್ಥಳದಲ್ಲಿ, ಬಸ್‌ ನಿಲ್ಲಿಸಿದ ನಂತರ ಬಾಗಿಲನ್ನು ತೆರೆದು ಪ್ರಯಾಣಿಕರನ್ನು ಇಳಿಸಬೇಕು.

ಈ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕರ್ನಾಟಕ ರಾಜ್ಯ ಸಾರಿಗೆ ನಿಗಮ ಸೂಚನೆ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X