ಒಂದು ವರ್ಷದ ಅವಧಿಯವರೆಗೆ ವಿದ್ಯುತ್ ದರ ಹೆಚ್ಚಳ ಮುಂದೂಡಲು ಹೋಟೆಲ್ ಸಂಘ ಮನವಿ

Date:

  • ವಿದ್ಯುತ್ ದರ ಏರಿಕೆಯನ್ನು 9% ನಿಂದ 3% ವರೆಗೆ ಇಳಿಸಬೇಕು
  • ಇಲಾಖೆಗಳು ಪಾವತಿಸಬೇಕಾದ ಬಾಕಿ ಮೊತ್ತವನ್ನು ಬಡ್ಡಿಸಹಿತ ಸಂಗ್ರಹಿಸಬೇಕು

ರಾಜ್ಯದಲ್ಲಿ ಆಗಾಗ ವಿದ್ಯುತ್ ದರವನ್ನು ಹೆಚ್ಚಳ ಮಾಡುವುದರಿಂದ ನಮ್ಮ ಉದ್ಯಮದ ಮೇಲೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಮುಂದಿನ ಒಂದು ವರ್ಷದ ಅವಧಿಯವರೆಗೆ ದರ ಹೆಚ್ಚಳವನ್ನು ಮುಂದೂಡಬೇಕು ಎಂದು ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಮನವಿ ಮಾಡಿದೆ.

- Advertisement -

ಈ ಬಗ್ಗೆ ಇಂಧನ ಸಚಿವ ಕೆ ಜೆ ಜಾರ್ಜ್‌ ಅವರಿಗೆ ಮನವಿ ಪತ್ರ ಕಳುಹಿಸಿರುವ ಹೋಟೆಲ್ ಸಂಘ, “ದರ ಏರಿಕೆಯಿಂದ ಎಲ್ಲ ಉದ್ಯಮದ ಮಾಲೀಕರಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ದರ ಏರಿಕೆಯ ಜತೆಗೆ ಇಂಧನ ಮತ್ತು ವೆಚ್ಚ ಹೊಂದಾಣಿಕೆ, ಸ್ಥಿರ ಬೇಡಿಕೆ ಶುಲ್ಕಗಳು ಹೆಚ್ಚಳವಾಗಿವೆ. ಏರಿಕೆಯಾಗಿರುವ ದರದ ಮೇಲೂ ಸಹ 9% ತೆರಿಗೆ ಕೂಡ ಹೆಚ್ಚಳವಾಗಿದೆ. ಇದರಿಂದ ಉದ್ಯಮ ನಡೆಸಲು ತುಂಬಾ ಸಮಸ್ಯೆಯಾಗುತ್ತದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಈಗಿರುವ ವಿದ್ಯುತ್ ದರ ಏರಿಕೆಯನ್ನು 9% ನಿಂದ 3% ವರೆಗೆ ಇಳಿಸಬೇಕು. ಸರಬರಾಜು ಮತ್ತು ವಿತರಣೆಯಲ್ಲಿ ಉಂಟಾಗುವ ನಷ್ಟಗಳನ್ನು ಕಡಿಮೆ ಮಾಡಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳು ಪಾವತಿಸಬೇಕಾದ ಬಾಕಿ ಮೊತ್ತವನ್ನು ಬಡ್ಡಿಸಹಿತ ಸಂಗ್ರಹಿಸಬೇಕು. ಪ್ರೀಪೇಡ್ ಮೀಟರ್‌ಗಳನ್ನು ಅಳವಡಿಸಿ ಗ್ರಾಹಕರ ಠೇವಣಿ ಹಣವನ್ನು ಹಿಂತಿರುಗಿಸಬೇಕು. ಅನಗತ್ಯ ಆಡಳಿತ ಖರ್ಚು-ವೆಚ್ಚಗಳನ್ನು ಹತೋಟಿಗೆ ತರಬೇಕು” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ₹118 ಕೋಟಿ ಅಕ್ರಮ ಕಾಮಗಾರಿ : 8 ಎಂಜಿನಿಯರ್ ಅಮಾನತು

“ಇವೆಲ್ಲವನ್ನೂ ಪರಿಗಣಿಸಿದಲ್ಲಿ ಉದ್ಯಮಿಗಳಾದ ನಮಗೂ ಇಂಧನ ಇಲಾಖೆಗೂ ಅನುಕೂಲವಾಗಲಿದೆ. ಉದ್ಯಮಿಯಾಗು, ಉದ್ಯೋಗ ಕೊಡು ಎನ್ನುವ ಸರ್ಕಾರದ ಪ್ರಣಾಳಿಕೆಯನ್ನು ಮುಂದುವರೆಸಿಕೊಂಡು ಹೋಗಲು ಸಹಕಾರಿಯಾಗಲಿದೆ” ಎಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...