ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ 100 ಅಂಕಗಳ ಸಾಮಾನ್ಯ ಕನ್ನಡ ಪತ್ರಿಕೆ ಕಡ್ಡಾಯಕ್ಕೆ ಆಗ್ರಹ

Date:

ರಾಜ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಹಿಂದಿನಂತೆ 100 ಅಂಕಗಳ ‘ಸಾಮಾನ್ಯ ಕನ್ನಡ’ ಪ್ರಶ್ನೆ ಪತ್ರಿಕೆಯನ್ನು ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿ ‘ನಾವು ದ್ರಾವಿಡ ಕನ್ನಡಿಗರು ಚಳುವಳಿ’ ವತಿಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಸರ್ಕಾರಕ್ಕೆ ಹೋರಾಟದ ಎಚ್ಚರಿಕೆ ಪತ್ರ ಸಲ್ಲಿಸಲಾಯಿತು.

- Advertisement -

ಚಳುವಳಿಯ ಪರವಾಗಿ ತೇಜಸ್ ಅವರು ಮನವಿ ಸಲ್ಲಿಸಿ, 2026ನೇ ಸಾಲಿನ SDA ಮತ್ತು FDA ನೇಮಕಾತಿ ಅಧಿಸೂಚನೆಗಳಲ್ಲಿ ಈ ಹಿಂದಿನ ಪರೀಕ್ಷಾ ಕ್ರಮದಲ್ಲಿದ್ದ ‘ಸಾಮಾನ್ಯ ಕನ್ನಡ’ ಪ್ರಶ್ನೆ ಪತ್ರಿಕೆಯನ್ನು ಕೈಬಿಟ್ಟು ಕೇವಲ ‘ಸಂವಹನ’ ಪತ್ರಿಕೆಯನ್ನು ಸೇರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಅದೇ ರೀತಿ ಆಬಕಾರಿ ಗಾರ್ಡ್ ನೇಮಕಾತಿಯಲ್ಲಿಯೂ ಸಾಮಾನ್ಯ ಕನ್ನಡ ಪತ್ರಿಕೆಯನ್ನು ಕೈಬಿಟ್ಟು ಸಾಮಾನ್ಯ ಜ್ಞಾನ ಪತ್ರಿಕೆಯನ್ನು ಮಾತ್ರ ಉಳಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸಾಮಾನ್ಯ ಕನ್ನಡ ಪತ್ರಿಕೆಯನ್ನು ಕೈಬಿಟ್ಟಿರುವುದು ಗ್ರಾಮೀಣ ಭಾಗದ ಹಾಗೂ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದಂತಾಗಿದೆ. ಆಡಳಿತ ಭಾಷೆಯಾಗಿ ಕನ್ನಡವನ್ನು ಸಮರ್ಥವಾಗಿ ಬಳಸಲು ಅಭ್ಯರ್ಥಿಗಳಿಗೆ ಈ ಪತ್ರಿಕೆ ಸಹಕಾರಿಯಾಗಿತ್ತು. ಇದನ್ನು ಕೈಬಿಟ್ಟಿರುವುದರಿಂದ ಕನ್ನಡ ಭಾಷೆಯ ಅಧ್ಯಯನ ಮತ್ತು ಆಡಳಿತದಲ್ಲಿ ಕನ್ನಡದ ಬಳಕೆಗೆ ಹಿನ್ನಡೆಯಾಗಲಿದೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ಕನ್ನಡವನ್ನು ಪದವಿ ಹಂತದಲ್ಲಿ ಪ್ರಮುಖ ವಿಷಯವಾಗಿ ಅಧ್ಯಯನ ಮಾಡಿದ ಅಭ್ಯರ್ಥಿಗಳ ಉದ್ಯೋಗಾವಕಾಶಗಳ ಮೇಲೂ ಇದು ಪರಿಣಾಮ ಬೀರಲಿದೆ. ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣದಲ್ಲಿ ಕನ್ನಡವನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಾಗುವ ಸಾಧ್ಯತೆಯಿದೆ. ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಕಲಿಕೆಗೆ ಇದ್ದ ಪ್ರೋತ್ಸಾಹ ಕುಗ್ಗುವ ಅಪಾಯವೂ ಇದೆ ಎಂದು ಚಳುವಳಿ ಅಭಿಪ್ರಾಯಪಟ್ಟಿದೆ.

SDA, FDA ಹಾಗೂ ಆಬಕಾರಿ ಗಾರ್ಡ್‌ಗಳಂತಹ ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಹೊಂದಿರುವ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಕನ್ನಡ ಭಾಷೆಯ ವ್ಯಾಕರಣ, ಬರವಣಿಗೆ ಮತ್ತು ವ್ಯಾವಹಾರಿಕ ಜ್ಞಾನದ ಅಗತ್ಯವಿದೆ. ಕೇವಲ ಸಂವಹನ ಪತ್ರಿಕೆಯ ಮೂಲಕ ಅಭ್ಯರ್ಥಿಗಳ ಸಮಗ್ರ ಕನ್ನಡ ಭಾಷಾ ಜ್ಞಾನವನ್ನು ಅಳೆಯಲು ಸಾಧ್ಯವಿಲ್ಲ. ಇದರಿಂದ ಸರ್ಕಾರಿ ಕಚೇರಿಗಳಲ್ಲಿ ಕನ್ನಡದ ಸಮರ್ಪಕ ಅನುಷ್ಠಾನಕ್ಕೂ ಹಿನ್ನಡೆಯಾಗಬಹುದು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ವಿಶೇಷ ಬರಹ ಓದಿದ್ದೀರಾ? ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ ಎತ್ತರಕ್ಕೆ: ಅಕ್ಷರಗಳ ಮೂಲಕ ಅಮರರಾದ ಕೆವಿಎನ್

ಇಂಗ್ಲಿಷ್ ಮಾಧ್ಯಮ ಹಾಗೂ ನಗರ ಪ್ರದೇಶದ ಅಭ್ಯರ್ಥಿಗಳೊಂದಿಗೆ ಸ್ಪರ್ಧಿಸುವ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಸಾಮಾನ್ಯ ಕನ್ನಡ ಪತ್ರಿಕೆ ಒಂದು ಪ್ರಮುಖ ಅವಕಾಶವಾಗಿತ್ತು. ಅದನ್ನು ಕೈಬಿಟ್ಟರೆ ಸಮಾನ ಉದ್ಯೋಗಾವಕಾಶಗಳಿಗೆ ಧಕ್ಕೆಯಾಗಲಿದೆ. ಅಲ್ಲದೆ, ನೇಮಕಾತಿ ಪರೀಕ್ಷೆಗಳಿಂದಲೇ ಕನ್ನಡವನ್ನು ದೂರವಿಡುವುದು ಕನ್ನಡ ಕಡ್ಡಾಯ ಕಾಯ್ದೆಯ ಆಶಯ ಮತ್ತು ಸರ್ಕಾರದ ಭಾಷಾ ನೀತಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಲಾಗಿದೆ.

ಈ ವಿಶೇಷ ವರದಿ ಓದಿದ್ದೀರಾ? ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್ ಮಾರುಕಟ್ಟೆಯ ಕರಾಮತ್ತು!

ಆದ್ದರಿಂದ ಪ್ರಸ್ತುತ ನೇಮಕಾತಿ ಪ್ರಕ್ರಿಯೆಯಲ್ಲಿಯೂ ಹಳೆಯ ಪರೀಕ್ಷಾ ಮಾದರಿಯನ್ನು ಮರುಜಾರಿಗೊಳಿಸಬೇಕು. ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇವಲ ಸಂವಹನ ಪತ್ರಿಕೆಗೆ ಸೀಮಿತವಾಗದೆ, ಅದರೊಂದಿಗೆ ಅಥವಾ ಅದರ ಬದಲಾಗಿ 100 ಅಂಕಗಳ ಸಾಮಾನ್ಯ ಕನ್ನಡ ಪ್ರಶ್ನೆ ಪತ್ರಿಕೆಯನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಒತ್ತಾಯಿಸಲಾಗಿದೆ.

ಈ ವಿಶೇಷ ವರದಿ ಓದಿದ್ದೀರಾ? ಅಕ್ಕಿ ಬೆಲೆ ಏರಿಕೆಯ ಬಿಸಿ: ಗ್ರಾಹಕರ ಕೈ ಸುಡುತ್ತಿದೆ, ಆಹಾರ ಭದ್ರತೆಗೆ ಎದುರಾಗಿದೆ ಸವಾಲು!

ಸರ್ಕಾರ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಕನ್ನಡ ನಾಡು, ನುಡಿಯ ಉಳಿವಿಗಾಗಿ ಬೀದಿ ಹೋರಾಟ ಹಾಗೂ ಕಾನೂನು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮ ಕಟ್ಟಡಗಳ ವಿರುದ್ಧ ಬೆಂಗಳೂರು ಉತ್ತರ ಪಾಲಿಕೆ ಕ್ರಮ: ಯಲಹಂಕದಲ್ಲಿ ಕಟ್ಟಡ ತೆರವು

ಸೆಟ್‌ಬ್ಯಾಕ್ ನಿಯಮಗಳನ್ನು ಉಲ್ಲಂಘಿಸಿ ಮತ್ತು ಪಾಲಿಕೆಯಿಂದ ಯಾವುದೇ ರೀತಿಯ ಪ್ಲಾನ್ ಮಂಜೂರಾತಿ...

ಕಬ್ಬು ಬೆಳೆಗಾರರ ರಕ್ಷಣೆಗೆ ಪ್ರತ್ಯೇಕ ವಿಮೆ, ನ್ಯಾಯಯುತ ಬೆಲೆ ಸೇರಿದಂತೆ 12 ಬೇಡಿಕೆ

ಕಬ್ಬು ಬೆಳೆಗಾರರಿಗೆ ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ₹6,000 ಕನಿಷ್ಠ...

ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ. ರಂಗನಾಥ್ ಗೆಲುವು

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...