ಎಲ್ಲರೂ ಮತದಾನ ಮಾಡಿದರೆ ಪ್ರಜಾಪ್ರಭುತ್ವಕ್ಕೆ ಬಲ: ತುಷಾರ್ ಗಿರಿನಾಥ್

Date:

  • ವಿವೇಚನೆಯೊಂದಿಗೆ ಅರ್ಹರಿಗೆ ಮತ ಚಲಾಯಿಸಿ: ತುಷಾರ್ ಗಿರಿನಾಥ್
  • ತಪ್ಪದೆ ಮತದಾನ ಮಾಡಿ, ಮತದಾನ ಶೇಕಡಾವಾರು ಪ್ರಮಾಣ ಹೆಚ್ಚಿಸಿ

ಬೆಂಗಳೂರಿನಲ್ಲಿ ಯಾವೊಬ್ಬ ಮತದಾರನೂ ಆಮೀಷಕ್ಕೆ ಒಳಗಾಗದೆ ಎಲ್ಲರೂ ತಪ್ಪದೆ ಮತ ಚಲಾಯಿಸುವಂತಾಗಬೇಕು. ಮೊದಲ‌ ಬಾರಿ ಮತದಾನ‌ ಮಾಡುವವರು ಒಮ್ಮೆ ಮಾತ್ರ ಮತದಾನ ಮಾಡದೆ ಎಲ್ಲ ಚುನಾವಣೆಗಳಲ್ಲೂ ತಪ್ಪದೆ ಮತ ಚಲಾಯಿಸಬೇಕು. ಇದರಿಂದ ಪ್ರಜಾಪ್ರಭುತ್ವಕ್ಕೆ ಹೆಚ್ಚು ಬಲ‌ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಹೇಳಿದರು.

- Advertisement -

ಬೆಂಗಳೂರು ನಗರ ವಿಶ್ವವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಯುವಕರಲ್ಲಿ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿ ಅವರು, “ಕರ್ನಾಟಕ ರಾಜ್ಯದಲ್ಲಿ ಜನಪ್ರತಿನಿಧಿಗಳು ನಾಗರಿಕರಿಗೆ ಸಾಕಷ್ಟು ಹತ್ತಿರವಾಗಿರುವುದರ ಜತೆಗೆ ಸ್ಪಂದಿಸುವ ಕೆಲಸ‌ ಮಾಡುತ್ತಾರೆ. ಆದ್ದರಿಂದ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿದಾಗ ಹೆಚ್ಚು ಹೆಚ್ಚು ಅಭಿವೃದ್ಧಿ ಕಾರ್ಯಗಳಾಗಲು ಸಾಧ್ಯ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“18 ವರ್ಷ ತುಂಬಿದ ನಂತರ ಯಾವ ವಿಷಯ ಆಯ್ಕೆ ಮಾಡಿಕೊಳ್ಳಬೇಕು ಹಾಗೂ ಯಾವ ರಂಗಕ್ಕೆ ಹೋಗಬೇಕು ಎಂಬುದರ ಬಗ್ಗೆ ಸ್ವಯಂ ವಿವೇಚನೆಯಿರುತ್ತದೆ‌. ಅದೇ ರೀತಿ ನಿಮ್ಮ ವಿಧಾನಸಭಾ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ ಬರಬೇಕೆಂಬುದನ್ನೂ ಕೂಡಾ ನೀವು ವಿವೇಚನೆಯೊಂದಿಗೆ ಅರ್ಹರಿಗೆ ಮತ ಚಲಾಯಿಸಬೇಕು” ಎಂದು ತಿಳಿಸಿದರು.

ವಿಶೇಷ ಆಯುಕ್ತ ಜಯರಾಮ್ ರಾಯಪುರ ಮಾತನಾಡಿ, “ಪ್ರಜಾಪ್ರಭುತ್ವ ಉಳಿಯಬೇಕಾದರೆ, ಪ್ರಜಾಪ್ರಭುತ್ವದ ಆಶಯಗಳು ಸಂಪೂರ್ಣವಾಗಬೇಕಾದರೆ ಪ್ರತಿಯೊಬ್ಬ ಮತದಾರನೂ ತಪ್ಪದೆ‌ ಮತ ಚಲಾಯಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೋದಿ ರೋಡ್‌ ಶೋ ವೇಳೆ ಸಾರ್ವಜನಿಕರು ಏನು ಮಾಡಬೇಕು? ಏನು ಮಾಡಬಾರದು?

“ಐದು ವರ್ಷಗಳಿಗೊಮ್ಮೆ ನಡೆಯುವ ಚುನಾವಣೆಯಲ್ಲಿ ನಾವೆಲ್ಲರೂ ಹೆಚ್ಚು-ಹೆಚ್ಚು ಜಾಗೃತರಾಗಿರಬೇಕು. ಆಗ ಪ್ರಜಾಪ್ರಭುತ್ವದ ಸಂಪೂರ್ಣ ಬಲ‌ ನಮಗೆ ಸಿಗಲಿದೆ. ಆದ್ದರಿಂದ ಎಲ್ಲರೂ ತಪ್ಪದೆ ಮತದಾನ ಮಾಡಿ ಮತದಾನ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಿ” ಎಂದು ಎಲ್ಲ ವಿದ್ಯಾರ್ಥಿಗಳಲ್ಲಿ ಕೋರಿದರು.

ಈ ವೇಳೆ ಬೆಂಗಳೂರು ನಗರ ವಿವಿ ಕುಲಪತಿ ಪ್ರೊ. ಲಿಂಗರಾಜ ಗಾಂಧಿ, ಚುನಾವಣಾ ರಾಯಭಾರಿಯಾದ ಮೋಹನ್ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...