ದೇವನಹಳ್ಳಿ ರೈತ ಹೋರಾಟ: ಜುಲೈ 4ರಂದು ಬೃಹತ್ ‘ನಾಡ ಉಳಿಸಿ ಸಮಾವೇಶ’

Date:

Advertisements

ದೇವನಹಳ್ಳಿ ರೈತರ ಭೂಮಿ ಸ್ವಾಧೀನ ಕೈಬಿಡುವಂತೆ ಒತ್ತಾಯಿಸಿ ಜುಲೈ 4ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ‘ನಾಡ ಉಳಿಸಿ ಸಮಾವೇಶ’ ನಡೆಸಲು ದೇವನಹಳ್ಳಿ ರೈತ ಹೋರಾಟಗಾರರು ನಿರ್ಧರಿಸಿದ್ದಾರೆ.

ರೈತರ ಭೂಮಿಯನ್ನು ಸ್ವಾಧೀನ ಪಡೆಸಿಕೊಳ್ಳುವುದನ್ನು ವಿರೋಧಿ ‘ಭೂಮಿ ಸತ್ಯಾಗ್ರಹ’ ನಡೆಯುತ್ತಿರುವ ಫ್ರೀಡಂ ಪಾರ್ಕ್‌ನಲ್ಲಿ ಭಾನುವಾರ ಸಂಯುಕ್ತ ಹೋರಾಟ ಕರ್ನಾಟಕ, ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳ ಮುಖಂಡರು ಪತ್ರಿಕಾಗೋಷ್ಠಿ ನಡೆಸಿದರು.

ಇದನ್ನು ಓದಿದ್ದೀರಾ? ದೇವನಹಳ್ಳಿ ರೈತ ಹೋರಾಟ | ಇಂದಿನಿಂದ ಅಹೋರಾತ್ರಿ ಧರಣಿ

Advertisements

“ಸರ್ಕಾರದ ಮೇಲೆ ಒತ್ತಡ ಹೆಚ್ಚಿಸುವ ದೃಷ್ಟಿಯಿಂದ ಜುಲೈ 4ರಂದು ಫ್ರೀಡಂ ಪಾರ್ಕಿನಲ್ಲಿ ಬೃಹತ್‌ ‘ನಾಡ ಉಳಿಸಿ ಸಮಾವೇಶ’ವನ್ನು ಸಂಘಟಿಸಲಾಗುತ್ತಿದೆ. ರಾಜ್ಯದ ಎಲ್ಲಾ ತಾಲ್ಲೂಕುಗಳಿಂದಲೂ ಸಮಾನ ಮನಸ್ಕರು ದೊಡ್ಡ ಸಂಖ್ಯೆಯಲ್ಲಿ ಈ ಸಮಾವೇಶದಲ್ಲಿ ಸಮಾಗಮಗೊಳ್ಳಲಿದ್ದಾರೆ” ಎಂದು ಮುಖಂಡರುಗಳು ತಿಳಿಸಿದ್ದಾರೆ.

“ಇಡೀ ರಾಜ್ಯ ದೇವನಹಳ್ಳಿಯ ರೈತರ ಪರವಾಗಿ ದನಿ ಎತ್ತಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶ್ವಾಸನೆ ನೀಡಿದ್ದಾರೆ. ಇದಾದ ನಂತರವೂ ದೊಡ್ಡ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲರು ಪತ್ರಿಕೆಯಲ್ಲಿ ಲೇಖನ ಬರೆದು ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಸರ್ಕಾರಿ ಜಾಹೀರಾತನ್ನು ನೀಡಿ ಹಳೇ ಪ್ರಸ್ತಾಪವನ್ನೇ ಪುನರುಚ್ಛರಿಸಿದ್ದಾರೆ. ಇದನ್ನು ಗಮನಿಸಿದರೆ ಸರ್ಕಾರ ಕರೆದಿರುವ ಜುಲೈ 4ರ ಸಭೆ ಮತ್ತೊಂದು ಮರೀಚಿಕೆಯಾಗುವ ಸಾಧ್ಯತೆ ಇದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಒಂದಲ್ಲಾ ಒಂದು ಕಾರಣ ನೀಡಿ, ನೋಟಿಫೀಕೇಶನ್‌ ಅನ್ನು ರದ್ದು ಮಾಡದೇ ಮುಂದೂಡಿದಲ್ಲಿ ಪರಿಣಾಮ ಗಂಭೀರವಾಗುವುದು ಶತಸಿದ್ಧ. ಇದನ್ನು ತಡೆಯಬೇಕಾದರೆ ಇಡೀ ರಾಜ್ಯ ಮತ್ತೊಮ್ಮೆ ಗಟ್ಟಿಯಾಗಿ ಕೂಗಿ ಹೇಳಬೇಕಿರುವ ಮತ್ತು ಇಡೀ ಸರ್ಕಾರ ಕಣ್ಣು ತೆರೆಯಲೇಬೇಕಾದ ವಾತಾವರಣ ನಿರ್ಮಿಸುವ ಅಗತ್ಯವಿದೆ. ಅದಕ್ಕಾಗಿ ಹೋರಾಟ ಸಮಿತಿಯು ಹಲವು ನಿರ್ಧಾರಗಳನ್ನು ತೆಗೆದುಕೊಂಡಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ದೇವನಹಳ್ಳಿ ಚಲೋ | ಅನ್ನದಾತರ ಹೋರಾಟದ ಚಿತ್ರಗಳು…

“ಜುಲೈ 2ರಂದು ನಂದಿಬೆಟ್ಟದಲ್ಲಿ ನಡೆಯುತ್ತಿರುವ ವಿಶೇಷ ಸಂಪುಟ ಸಭೆಯಲ್ಲಿ ‘ದೇವನಹಳ್ಳಿ ಭೂ ಸಮಸ್ಯೆ’ ವಿಶೇಷ ಅಜೆಂಡಾ ಆಗಬೇಕು ಎಂದು ಒತ್ತಾಯಿಸುತ್ತಿದ್ದೇವೆ. ದೇವನಹಳ್ಳಿಯ ಮೂಲಕವೇ ಬೆಟ್ಟಕ್ಕೆ ಹೋದವರು ಬರಿಗೈಯಲ್ಲಿ ಬಾರದಿರಿ” ಎಂದು ಸಚಿವರುಗಳಲ್ಲಿ ಮನವಿ ಮಾಡಿದ್ದಾರೆ.

“ದೇವನಹಳ್ಳಿ ವಿವಾದದ ನಿಜವಾದ ಚಿತ್ರಣ ಬಹುತೇಕ ಸಚಿವರುಗಳಿಗೆ ಹಾಗೂ ಶಾಸಕರುಗಳಿಗೆ ಸ್ಪಷ್ಟವಾಗಿಲ್ಲ. ನಿಮ್ಮ ನಿಮ್ಮ ಜಿಲ್ಲೆಯಲ್ಲಿರುವ ಶಾಸಕರು ಮತ್ತು ಸಚಿವರನ್ನು ಕಂಡು, ವಿಚಾರ ವಿವರಿಸಿ, ರೈತಪರ ನಿಲುವು ತೆಗೆದುಕೊಳ್ಳುವಂತೆ, ಮನವೊಲಿಸಬೇಕು” ಎಂದು ರಾಜ್ಯದ ಎಲ್ಲಾ ಹೋರಾಟಗಾರರಲ್ಲಿ ದೇವನಹಳ್ಳಿ ರೈತ ಹೋರಾಟಗಾರರು ಮನವಿ ಮಾಡಿದ್ದಾರೆ.

“ಜುಲೈ 4 ರಂದು ಸರ್ಕಾರ ನಿಟ್ಟುಸಿರು ಬಿಡುವಂತಹ ತೀರ್ಮಾನ ತೆಗೆದುಕೊಂಡಲ್ಲಿ ಸಿದ್ದರಾಮಯ್ಯನವರನ್ನು ಹಾಗೂ ಅವರ ಸರ್ಕಾರವನ್ನು ಅಭಿನಂದಿಸಿ ಪ್ರೀಡಂ ಪಾರ್ಕಿನಿಂದ ಹೊರಡುತ್ತೇವೆ. ಒಂದು ವೇಳೆ ಮತ್ತೊಮ್ಮೆ ನ್ಯಾಯ ನಿರಾಕರಣೆ ನಡೆದಲ್ಲಿ ಇನ್ನಷ್ಟು ಕಠಿಣ ಹೋರಾಟದ ದಿಟ್ಟ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಹೋರಾಟ ಸಮಿತಿಯ ಪರವಾಗಿ ಬಡಗಲಪುರ ನಾಗೇಂದ್ರ, ಚುಕ್ಕಿ ನಂಜುಂಡಸ್ವಾಮಿ, ಎಸ್‌. ವರಲಕ್ಷ್ಮಿ, ನೂರ್ ಶ್ರೀಧರ್, ವಿ. ನಾಗರಾಜ್, ಡಿ. ಎಚ್‌ ಪೂಜಾರ್, ಕಾಮ್ರೇಡ್ ನಿರ್ಮಲ, ಶಿವಪ್ರಕಾಶ್, ಪಿ. ವಿ ಲೋಕೇಶ್, ಯು. ಬಸವರಾಜ್, ದೇವಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X